ನಿಯಮ ಉಲ್ಲಂಘಿಸಿದರೆ ಕಡ್ಡಾಯ ರಜೆ

ಪುತ್ತೂರು ತಾ.ಪಂ. ಕೆಡಿಪಿ ಸಭೆ ನಿರ್ಣಯ

Team Udayavani, Feb 5, 2020, 11:16 PM IST

sam-31

ಪುತ್ತೂರು: ಉಪ್ಪಿನಂಗಡಿ ವಸತಿ ನಿಲಯದ ಮಹಿಳಾ ಸಿಬಂದಿ ಶಿಷ್ಟಾಚಾರ ಹಾಗೂ ನಿಯಮದ ಉಲ್ಲಂ ಘನೆ ಮಾಡಿದ್ದಾರೆ ಎಂಬ ವಿಚಾರ ತಾ.ಪಂ. ಸಭೆಯಲ್ಲಿ ಚರ್ಚೆಗೆ ಕಾರಣವಾಗಿ, ಆ ಸಿಬಂದಿಗೆ ಯಾವುದೇ ಕರುಣೆ ತೋರದೆ ಕಡ್ಡಾಯ ರಜೆ ಮೇಲೆ ಕಳುಹಿಸುವಂತೆ ತಾ. ಪಂ. ಅಧ್ಯಕ್ಷರು ಸೂಚನೆ ನೀಡಿದರು.

ಬುಧವಾರ ತಾ.ಪಂ. ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಸಭೆ ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌ ಅಧ್ಯಕ್ಷತೆಯಲ್ಲಿ ನಡೆಯಿತು. ಸಿಬಂದಿ ದುರ್ವರ್ತನೆ ತೋರಿದ್ದಾರೆ. ಹುಡುಗರ ಜತೆ ಪ್ರವಾಸ ಹೋಗಿದ್ದಾರೆ ಎಂದು ಆರೋಪ ಇದೆ. ಈ ಕಾರಣದಿಂದ ಕರ್ತವ್ಯದಿಂದ ವಜಾ ಮಾಡಬೇಕು ಎಂದು ಅಧ್ಯಕ್ಷರು ಸೂಚಿಸಿದರು.

ಬಿಸಿಎಂ ಇಲಾಖಾಧಿಕಾರಿ ಮಾಹಿತಿ ನೀಡಿ, ಈ ಕುರಿತು ತನಿಖೆ ನಡೆಸಲಾಗಿದೆ. ಇಲಾಖೆಯ ಉನ್ನತಾಧಿಕಾರಿಗಳು ಜಿಲ್ಲಾಧಿಕಾರಿ ಜತೆ ಚರ್ಚೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಅವರನ್ನು ವರ್ಗಾವಣೆ ಮಾಡುವಂತೆ ಸೂಚಿಸಿದ್ದಾರೆ. ಹಾಗಾಗಿ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಣೆಗೆ ಷರತ್ತುಬದ್ಧ ಅವಕಾಶ ನೀಡಲಾಗಿದೆ ಎಂದರು. ಇದರಿಂದ ಸಮಾಧಾನಗೊಳ್ಳದ ಅಧ್ಯಕ್ಷರು, ಸಿಬಂದಿಯನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿದರೂ ಅಲ್ಲಿಯೂ ಇದೇ ರೀತಿ ಮಾಡಬಹುದು. ಈ ರೀತಿಯ ಷರತ್ತುಬದ್ದ ಅವಕಾಶ ನೀಡದೆ ತತ್‌ಕ್ಷಣ ಅವರನ್ನು ರಜೆಯ ಮೇಲೆ ಕಳುಹಿಸಿ. ಈ ಕುರಿತು ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದರು.

ಅರ್ಜಿ ಸ್ಥಗಿತ
94 ಸಿ ಹಕ್ಕು ಪತ್ರ ಪಡೆದುಕೊಳ್ಳಲು ಜನತೆಗೆ ಮನೆ ತೆರಿಗೆ ರಸೀದಿ ಅಗತ್ಯವಿದ್ದು, ಆದರೆ ಮನೆ ನಿರ್ಮಾಣ ಆಗಿರುವುದು ಸರಕಾರಿ ಸ್ಥಳವಾದ್ದರಿಂದ ಮನೆ ತೆರಿಗೆ ಪಾವತಿಗೆ ಅವಕಾಶವಿಲ್ಲ. ಅಂತಹ ಹಲವಾರು ಅರ್ಜಿಗಳನ್ನು ಉಪವಿಭಾಗಾಧಿಕಾರಿ ಸ್ಥಗಿತಗೊಳಿಸಿದ್ದಾರೆ. ಇದರಿಂದ ಬಡಜನತೆಗೆ ತೊಂದರೆಯಾಗುತ್ತಿದೆ. ಈ ಯೋಜನೆಯ ಮೂಲ ಉದ್ದೇಶಕ್ಕೆ ಧಕ್ಕೆಯಾಗುತ್ತಿದೆ. ಹಾಗಾಗಿ ಕಂದಾಯ ಇಲಾಖೆ ಸ್ಥಳ ಮಹಜರು ನಡೆಸಿ ಅವರಿಗೆ ದಾಖಲೆ ನೀಡುವಂತೆ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ವಾಸ್ತವ್ಯವಿರುವ ಮನೆ ಮಂದಿಯಲ್ಲಿ ಪಡಿತರ ಚೀಟಿ, ಗುರುತು ಪತ್ರದಂತಹ ದಾಖಲೆ ಇದ್ದರೆ ಅಂಥವರಿಗೆ ಮಹಜರು ನಡೆಸಿ ದಾಖಲೆ ನೀಡುವುದಾಗಿ ಅಧಿಕಾರಿಗಳು ತಿಳಿಸಿದರು.

ಕೊಂಬೆಟ್ಟು ಕ್ರೀಡಾಂಗಣಕ್ಕೆ ಅನುದಾನ
ಕೊಂಬೆಟ್ಟು ತಾಲೂಕು ಕ್ರೀಡಾಂಗಣ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ ಮಂಜೂರುಗೊಂಡಿದೆ. ಗ್ಯಾಲರಿಗೆ ಶೀಟ್‌ ಅಳವಡಿಕೆ, ಕಟ್ಟಡಗಳಿಗೆ ಸುಣ್ಣ ಬಣ್ಣ ಮತ್ತು ಟ್ರ್ಯಾಕ್‌ ಅಭಿವೃದ್ಧಿ ನಡೆಸಲು ಸರ್ಕಾರದಿಂದ 8 ಲಕ್ಷ ರೂ. ಅನುದಾನ ಮಂಜೂರುಗೊಂಡಿದೆ. ಹೆಚ್ಚುವರಿಯಾಗಿ ಮತ್ತೆ 2 ಲಕ್ಷ ರೂ. ಅನುದಾನವೂ ಮಂಜೂರಾಗಿದೆ. ಈ ಅನುದಾನದಲ್ಲಿ ತತ್‌ಕ್ಷಣ ಅಭಿವೃದ್ಧಿ ಕೆಲಸ ಆರಂಭವಾಗಲಿದೆ ಎಂದು ಸಭೆಗೆ ತಾಲೂಕು ಯುವಜನ ಕ್ರೀಡಾಧಿಕಾರಿ ಜಯರಾಮ ಗೌಡ ಮಾಹಿತಿ ನೀಡಿದರು.

ಹೊಸ ನಿವೇಶನಕ್ಕೆ ಸ್ಪಂದನೆ ಇಲ್ಲ
ತೆಂಕಿಲಗುಡ್ಡ ಕುಸಿತದಿಂದ ಅಪಾಯ ಸಂಭವಿಸ ಬಹುದು ಎಂಬ ಹಿನ್ನೆಲೆಯಲ್ಲಿ ಇಲ್ಲಿ ವಾಸ್ತವ್ಯವಿದ್ದ 11 ಕುಟುಂಬಗಳಿಗೆ ಬನ್ನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹೊಸದಾಗಿ ಮನೆ ನಿವೇಶನ ನೀಡಲಾಗಿದೆ. ಈ ಬಗ್ಗೆ ನಗರಸಭೆಯಿಂದ ಈ ಕುಟುಂಬಗಳಿಗೆ ನೋಟಿಸ್‌ ನೀಡಲಾಗಿದೆ. ಆದರೆ ಆ ಕುಟುಂಬಗಳಿಂದ ಯಾವುದೇ ಸ್ಪಂದನೆ ಇಲ್ಲ. ನೋಟಿಸ್‌ ಕೂಡ ಪಡೆದುಕೊಳ್ಳುತ್ತಿಲ್ಲ. ಈ ಕುಟುಂಬಗಳ ಖಾತೆಗೆ ಸರಕಾರದಿಂದ ಬಂದಿರುವ ತಲಾ 1 ಲಕ್ಷ ರೂ. ಹಣ ಜಮೆಯಾಗಿದೆ ಎಂದು ನಗರಸಭೆಯ ಅಧಿಕಾರಿ ತಿಳಿಸಿದರು.  ತಾ.ಪಂ. ಉಪಾಧ್ಯಕ್ಷೆ ಲಲಿತಾ ಈಶ್ವರ್‌, ಸ್ಥಾಯೀ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾ.ಪಂ. ಇಒ ನವೀನ್‌ ಭಂಡಾರಿ, ಕಡಬ ತಹಶೀಲ್ದಾರ್‌ ಜಾನ್‌ಪ್ರಕಾಶ್‌ ಉಪಸ್ಥಿತರಿದ್ದರು.

ವಿಶೇಷ ತರಗತಿ
ಎಸೆಸೆಲ್ಸಿ ಓದುತ್ತಿರುವ ಮಕ್ಕಳಲ್ಲಿ ಪೂರ್ವ ತಯಾರಿ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಪಡೆಯುತ್ತಿರುವ ಮಕ್ಕಳಿಗೆ ವಿಶೇಷ ತರಗತಿ ನಡೆಸಲಾಗುತ್ತಿದೆ. 1ರಿಂದ 14 ಅಂಕ ಪಡೆದ ಮಕ್ಕಳಿಗೆ ತಂಡಗಳಲ್ಲಿ ಈ ವಿಶೇಷ ತರಗತಿ ನಡೆಸಲಾಗುತ್ತಿದೆ. ಶಾಸಕರು, ತಾ.ಪಂ. ಅಧ್ಯಕ್ಷರೂ ಸಹಿತ ಜನಪ್ರತಿನಿಧಿಗಳು, ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಮಕ್ಕಳಲ್ಲಿ ಚೈತನ್ಯ ತುಂಬುವ ಕೆಲಸ ನಡೆಸುತ್ತಿದ್ದಾರೆ. ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾಕ ವರ್ಗದ ಮಕ್ಕಳು ಕಲಿಯು ವಿಕೆಯಲ್ಲಿ ಸ್ವಲ್ಪ ಹಿಂದೆ ಉಳಿದಿದ್ದು, ಅಂತವರಿಗೆ ಆದ್ಯತೆ ನೀಡಿ ಇಂಗ್ಲಿಷ್‌, ಸಮಾಜ ವಿಜ್ಞಾನ ಹಾಗೂ ಗಣಿತ ಪಠ್ಯಗಳ ಕುರಿತು ಹೆಚ್ಚಿನ ಆಸ್ಥೆಯಿಂದ ತರಗತಿ ನಡೆಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಭೆಗೆ ಮಾಹಿತಿ ನೀಡಿದರು.

ವಿದ್ಯುತ್‌ ನೀಡಲು ಸೂಚನೆ
ಕುಂಬ್ರ ಭಾಗ ಸಹಿತ ತಾಲೂಕಿನ ಎಲ್ಲ ಕಡೆಗಳಲ್ಲಿ ಮೆಸ್ಕಾಂ ಅನಿಯಮಿತವಾಗಿ ವಿದ್ಯುತ್‌ ನಿಲುಗಡೆ ಮಾಡುತ್ತಿದೆ. ಮಕ್ಕಳಿಗೆ ಎಸೆಸೆಲ್ಸಿ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ಓದಿಗೆ ತೊಂದರೆಯಾಗುತ್ತಿದೆ. ಎಸೆಸೆಲ್ಸಿ ಪರೀಕ್ಷೆ ಮುಗಿಯುವ ವರೆಗೆ ಸಂಜೆ 7ರಿಂದ ರಾತ್ರಿ 10 ಗಂಟೆ ತನಕ ಅನಿಯಮಿತ ವಿದ್ಯುತ್‌ ನಿಲುಗಡೆ ಮಾಡಬೇಡಿ ಎಂದು ಮೆಸ್ಕಾಂ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚನೆ ನೀಡಿದರು.

ಟಾಪ್ ನ್ಯೂಸ್

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Court-1

Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.