ಪ್ರತ್ಯೇಕ ತ್ಯಾಜ್ಯ ಸಂಗ್ರಹಿಸಲು ವಿಶೇಷ ವಾಹನ ಖರೀದಿ

ಮಿನಿ ಟಿಪ್ಪರ್‌ಗಳಲ್ಲಿ ಹಸಿ, ಒಣ ತ್ಯಾಜ್ಯಕ್ಕೆ ಪ್ರತ್ಯೇಕ ವಿಭಾಗ „ ಕಸ ವಿಂಗಡಿಸಿ ಕೊಡದಿದ್ಧರೆ ದಂಡ ಪಕ್ಕಾ

Team Udayavani, Feb 6, 2020, 5:04 PM IST

6-February-21

ರಾಮನಗರ: ನಗರದ ನಾಗರೀಕರಿಂದ ಹಸಿ, ಒಣ ತ್ಯಾಜ್ಯವನ್ನು ಕಡ್ಡಾಯವಾಗಿ ಬೇರ್ಪಡಿಸಿ ಸ್ವೀಕರಿಸಲು ನಗರಸಭೆ ಮುಂದಾಗಿದೆ. ಇದಕ್ಕಾಗಿಯೇ ವಿಶೇಷ ವಾಹನಗಳನ್ನು ನಗರಸಭೆ ಖರೀದಿಸಿದೆ. ನಗರಸಭೆಯ 14ನೇ ಹಣಕಾಸು ಯೋಜನೆಯಡಿಯಲ್ಲಿ ಮಿನಿ ಟಿಪ್ಪರ್‌ಗಳನ್ನು ಸುಮಾರು 29 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದ್ದು, ಸುಮಾರು 1 ಸಾವಿರ ಕೆ.ಜಿಗೂ ಹೆಚ್ಚು ಪ್ರಮಾಣದ ಹಸಿ ಮತ್ತು ಒಣ ತ್ಯಾಜ್ಯ ಸಂಗ್ರಹಿಸುವಷ್ಟು ಸಾಮರ್ಥ್ಯ ಈ ವಾಹನ ಗಳಿಗಿದೆ. 31 ವಾರ್ಡುಗಳಲ್ಲೂ ಕಸ ಸಂಗ್ರಹಿಸಲು ನಗರಸಭೆ ಬಳಿ 8 ವಾಹನಗಳು ಇದ್ದು, ಇದೀಗ ಮತ್ತೆ 7 ವಾಹನಗಳು ಸೇರ್ಪಡೆಯಾಗಲಿವೆ. ಎರಡು ವಾರ್ಡ್ಗಳಿಗೆ ತಲಾ ಒಂದು ವಾಹನ ದಿನನಿತ್ಯ ಸಂಚರಿಸಿ ಕಸ ಸಂಗ್ರಹಿಸಲು ಅಧಿಕಾರಿಗಳು ಉದ್ದೇಶಿಸಿದ್ದಾರೆ.

ಜಿಮ್‌ ಪೋರ್ಟಲ್‌ ಮೂಲಕ ಖರೀದಿ: ಸ್ವಚ್ಚ ಭಾರತ ಮಿಷನ್‌ ಅಡಿಯಲ್ಲಿ ವಾಹನಗಳ ಖರೀದಿಗೆ ನಗರಸಭೆ ಪ್ರಸ್ತಾವನೆ ಸಲ್ಲಿಸಿತ್ತು. ವಾಹನಗಳ ಖರೀದಿಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಒಪ್ಪಿಗೆ ಕೊಟ್ಟಿದ್ದರು. ಜಿಲ್ಲಾಡಳಿತದಿಂದ ತಾಂತ್ರಿಕ ಅನುಮೋದನೆ ಪಡೆ ದುಕೊಂಡ ನಂತರವೇ ವಾಹನ್ನ ಖರೀದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಒಪ್ಪಿಗೆ ಸಿಕ್ಕ ನಂತರ ನಗರಸಭೆ ಸರ್ಕಾರ ಸ್ಥಾಪಿಸಿರುವ ಇ-ಮಾರ್ಕೆಟಿಂಗ್‌ ಪೋರ್ಟಲ್‌ನಲ್ಲಿ ವಾಹನಗಳ ಖರೀದಿಗೆ ಪೂರೈಕೆದಾರರನ್ನು ಆಹ್ವಾನಿಸಲಾಗಿತ್ತು. ಒಟ್ಟು 5 ಮಂದಿ ಮಾರಾಟಗಾರರು ಮುಂದೆ ಬಂದು ಕೊಟೇಷನ್‌ ಕೊಟ್ಟಿದ್ದರು. ಮಹಾರಾಷ್ಟ್ರದ ಸಂಸ್ಥೆಯೊಂದು ಅತಿ ಕಡಿಮೇ ದರ ನಮೂದಿಸಿದ್ದರಿಂದ ಅವರಿಂದ ಈ ವಾಹನಗಳನ್ನು ಖರೀದಿಸಲಾಗಿದೆ. ಸದರಿ ಮಾರಾಟಗಾರರು ದೇವನಹಳ್ಳಿ, ದೊಡ್ಡಬಳ್ಳಾಪುರಗಳಲ್ಲಿಯೂ ಇಂತಹ ವಾಹನಗಳನ್ನು ಮಾರಾಟ ಮಾಡಿದ್ದಾರೆ. ಇವೆಲ್ಲವನ್ನು ಪರಿಗಣಿಸಿ ವಾಹನಗಳನ್ನು ಖರೀದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ಲಾಸ್ಟಿಕ್‌ ತ್ಯಾಜ್ಯ ರಸ್ತೆಯಲ್ಲಿ ಬೀಸಾಡಬೇಡಿ: ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆ. ಪ್ಲಾಸ್ಟಿಕ್‌ ತ್ಯಾಜ್ಯವನ್ನು ಮನೆ, ಅಂಗಡಿ ಮಳಿಗೆಗಳ ಮಾಲೀಕರು ರಸ್ತೆ ಬದಿಯಲ್ಲಿ ಬೀಸಾಡದೆ ನಗರಸಭೆಯ ಕಸ ಸಂಗ್ರಹ ವಾಹನಕ್ಕೆ ಕೊಡಬೇಕು ಎಂದು ಪರಿಸರ ಅಧಿಕಾರಿ ರಾಜಶ್ರೀ ನಾಗರೀಕರಿಗೆ ಮನವಿ ಮಾಡಿದ್ದಾರೆ.

ಮನೆ, ಮನೆಯಿಂದ ಕಸ ಸಂಗ್ರಹಿಸುವಾಗಲೇ ಹಸಿ ಮತ್ತು ಒಣ ಕಸವನ್ನು ಸಂಗ್ರಹಿಸಲು ನೂತನ ವಾಹನಗಳು ಅನುಕೂಲವಾಗಿವೆ. ನಾಗರಿಕರು ಹಸಿ ಮತ್ತು ಒಣಕಸ ಬೇರ್ಪಡಿಸಿ ನೀಡಬೇಕು. ಹಸಿ ಕಸವನ್ನು ನಗರಸಭೆ ಗೊಬ್ಬರವನ್ನಾಗಿ ಪರಿವರ್ತಿಸುತ್ತಿದೆ. ಈ ಗೊಬ್ಬರವನ್ನು ಖರೀದಿಸಲು ಅನೇಕ ರೈತರು ಆಸಕ್ತಿ ತೋರಿಸಿದ್ದಾರೆ. ಸದ್ಯದಲ್ಲೇ ಈ ವಾಹನಗಳು ಸಾರ್ವಜನಿಕರ ಬಳಕೆಗೆ ನಿಯೋಜನೆಯಾಗಲಿವೆ.
ಬಿ.ಶುಭಾ, ಆಯುಕ್ತರು, ನಗರಸಭೆ

ಎಚ್ಚರಿಕೆ!
ಹಸಿ ಮತ್ತು ಒಣ ತ್ಯಾಜ್ಯವನ್ನು ಸಂಗ್ರಹಣೆಯ ಮೂಲದಲ್ಲೇ ಪ್ರತ್ಯೇಕಿಸಿ ಕೊಡಬೇಕಾದ್ದು ನಾಗರಿಕರ ಕರ್ತವ್ಯ. ಇದು ಕಾನೂನು ಕೂಡ. ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕಿಸಿ ಕೊಡದಿದ್ದರೆ, ನಗರ ಸಭೆ ಸಿಬ್ಬಂದಿ ತ್ಯಾಜ್ಯ ಸಂಗ್ರಹಿಸಲು ನಿರಾಕರಿಸಲು ಅಧಿಕಾರವಿದೆ.  ಸಹಕರಿಸದ ಕುಟುಂಬಗಳಿಗೆ ದಂಡ ವಿಧಿಸುವ ಅಧಿಕಾರವೂ ನಗರಸಭೆಗಿದೆ. ಪರಿಸರ ರಕ್ಷಣೆಗಾಗಿ ನಾಗರೀಕರು ಕಾನೂನು ಪಾಲಿಸಬೇಕಾಗಿದೆ.

●ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.