ಮಂಗಳೂರು to ಬೆಂಗಳೂರು:ನವಜಾತ ಶಿಶುವನ್ನು ಹೊತ್ತು ಝೀರೋಟ್ರಾಫಿಕ್ ಮೂಲಕ ಸಾಗಿದ ಆ್ಯಂಬುಲೆನ್ಸ್
40 ದಿನದ ಮಗುವಿನ ಪ್ರಾಣ ಉಳಿಸಲು ಸಾಹಸ ಮೆರೆದ KMCCಯ ಆ್ಯಂಬುಲೆನ್ಸ್ ಚಾಲಕ ಹನೀಫ್
Team Udayavani, Feb 6, 2020, 6:03 PM IST
ಮಂಗಳೂರು: ಗಂಭೀರ ಹೃದಯದ ಸಮಸ್ಯೆಯಿಂದ ಬಳಲುತ್ತಿರುವ 40 ದಿನದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಂದು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಬಿಸಿರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ, ಸಕಲೇಶಪುರ, ಹಾಸನ, ಚೆನ್ನರಾಯಪಟ್ಟಣ, ನೆಲಮಂಗಲ ಮೂಲಕ ಬೆಂಗಳೂರು ಹೊರವಲಯವನ್ನು ಪ್ರವೇಶಿಸಿ ಅಲ್ಲಿಂದ ಬಳಿಕ ನೇರವಾಗಿ ಜಯನಗರ 9ನೇ ಬ್ಲಾಕ್ ನಲ್ಲಿರುವ ಜಯದೇವ ಆಸ್ಪತ್ರೆಗೆ ಆ್ಯಂಬುಲೆನ್ಸ್ ತಲುಪಿತು.
ಕಡಿದಾದ ತಿರುವು ರಸ್ತೆ ಮತ್ತು ಘಾಟಿ ಮಾರ್ಗದ ಮೂಲಕ ಆ್ಯಂಬುಲೆನ್ಸ್ ಚಲಾಯಿಸಿ ನವಜಾತ ಶಿಶುವನ್ನು ಸಕಾಲದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸುರಕ್ಷಿತವಾಗಿ ತಲುಪಿಸಿದ ಕೆ.ಎಂ.ಸಿ.ಸಿ. ಆ್ಯಂಬುಲೆನ್ಸ್ ನ ಚಾಲಕ ಹನೀಫ್ ಬಳಂಜ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನೆಕೆರೆಯವರು ಎಂಬ ಮಾಹಿತಿ ಲಭ್ಯವಾಗಿದೆ.
ಹೀಗೊಂದು ಆ್ಯಂಬುಲೆನ್ಸ್ ಬರುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮೊದಲೇ ಸೂಚನೆ ನೀಡಿದ್ದ ಕಾರಣ ಇದು ಸಾಗಿ ಬರುವ ರಸ್ತೆಯುದ್ದಕ್ಕೂ ಜನರು ರಸ್ತೆಯ ಎರಡೂ ಕಡೆಗಳಲ್ಲಿ ನಿಂತು ಆ್ಯಂಬುಲೆನ್ಸ್ ಸಾಗಲು ಅವಕಾಶ ಮಾಡಿಕೊಟ್ಟರು.
ಹ್ಯಾರಿಸ್ ಗೇರುಕಟ್ಟೆ ಅವರ 40 ದಿನ ಪ್ರಾಯದ ಮಗು ಗಂಭೀರ ಹೃದಯಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ತುರ್ತು ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆದೊಯ್ಯುವಂತೆ ನಗರದ ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದ್ದರು.
ಬಳಿಕ ಕೆ.ಎಂ.ಸಿ.ಸಿ.ಯ ಆ್ಯಂಬುಲೆನ್ಸ್ ನಲ್ಲಿ ಮಗುವನ್ನು ‘ಝೀರೋ’ ಟ್ರಾಫಿಕ್ ವ್ಯವಸ್ಥೆಯಲ್ಲಿ ರಸ್ತೆ ಮಾರ್ಗದ ಮೂಲಕ ಬೆಂಗಳೂರಿಗೆ ಕರೆದೊಯ್ಯಲು ನಿರ್ಧರಿಸಲಾಯಿತು. ರಾಜ್ಯ ಪೊಲೀಸ್ ಇಲಾಖೆಯ ಸಕಾಲಿಕ ಸ್ಪಂದನದೊಂದಿಗೆ ಆ್ಯಂಬುಲೆನ್ಸ್ ಸಾಗುವ ಹೆದ್ದಾರಿಯನ್ನು ಸಂಚಾರ ಮುಕ್ತಗೊಳಿಸುವಲ್ಲಿ ಆಯಾ ಪ್ರದೇಶದ ಪೊಲೀಸ್ ಅಧಿಕಾರಿಗಳು ಮತ್ತು ಸಂಚಾರಿ ಪೊಲೀಸ್ ಸಿಬ್ಬಂದಿಗಳ ಸಕಾಲಿಕ ನೆರವಿನೊಂದಿಗೆ ಈ ಆ್ಯಂಬುಲೆನ್ಸ್ ಇಂದು ಸಾಯಂಕಾಲ 4.35ರ ಸುಮಾರಿಗೆ ಜಯದೇವ ಆಸ್ಪತ್ರೆಯನ್ನು ತಲುಪಿತು.
ಇದೀಗ ಮಗುವನ್ನು ಜಯದೇವ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಿಕೊಳ್ಳಲಾಗಿದೆ. ಈ ಆ್ಯಂಬುಲೆನ್ಸನ್ನು ಬೆಂಗಳೂರಿನ ಹನೀಫ್ ಬಳಂಜ ಅವರು ಚಲಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.