ಮಹಿಳೆ-ಮಕ್ಕಳಿಗೆ ರಕ್ಷಣೆ ಒದಗಿಸಲು ಆಗ್ರಹ
ಮಹಿಳಾ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಧರಣಿ
Team Udayavani, Feb 6, 2020, 6:35 PM IST
ರಾಯಚೂರು: ಮಹಿಳೆಯರು ಮತ್ತು ಮಕ್ಕಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಬುಧವಾರ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪುರುಷರನ್ನು ಯಾವುದೇ ಕಾರಣಕ್ಕೂ ವಾರ್ಡನ್‌ಗಳಾಗಿ, ಅಧೀಕ್ಷಕರಾಗಿ, ಕಾವಲುಗಾರರನ್ನಾಗಿ, ಅಡುಗೆ ಸಹಾಯಕರ ಹುದ್ದೆಗಳಿಗೆ ನೇಮಕ ಮಾಡಬಾರದು ಎಂದು ಆಗ್ರಹಿಸಿದರು.
ಈಚೆಗೆ ಸಿಂಧನೂರು ಹಾಗೂ ರಾಯಚೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಯಲು ನಿರ್ಲಕ್ಷ್ಯದಿಂದ ನಡೆದುಕೊಂಡಿರುವುದು ಕಾರಣವಾಗಿದೆ. ಬಹುತೇಕ ಸರ್ಕಾರಿ ಸರ್ಕಾರೇತರ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ ತಡೆಗೆ ಸಮಿತಿಗಳಿಲ್ಲ. ಇರುವ ಸಮಿತಿಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಅಂಥ ಸಂಸ್ಥೆಗಳ ಸಮಿತಿಗಳ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಹಾಗೂ ಈ ಸಮಿತಿಗಳು ಪ್ರತಿ ತಿಂಗಳು ಸಭೆ ನಡೆಸಿ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಮಹಿಳೆಯರು ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದ ಸಂದರ್ಭದಲ್ಲಿ ಸಂತ್ರಸ್ತರೊಂದಿಗೆ ಪೊಲೀಸ್ ಹಾಗೂ ಇತರ ಸಂಬಂಧಿಸಿದ ಇಲಾಖೆ ಅ ಧಿಕಾರಿಗಳು ನಡೆದುಕೊಳ್ಳುವ ರೀತಿ ಬದಲಾಗಬೇಕು ಎಂದು ಆಗ್ರಹಿಸಿದರು. ಸುಪ್ರೀಂಕೋರ್ಟ್ ಆದೇಶದಂತೆ ಇಂಥ ಪ್ರಕರಣಗಳಲ್ಲಿ ಕೂಡಲೇ ಸಂತ್ರಸ್ತರಿಗೆ ನ್ಯಾಯ ದೊರಕಬೇಕು ಹಾಗೂ ಅನ್ಯಾಯಕ್ಕೊಳಗಾದವರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವಾಗಬೇಕು. ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ಸಂಚಾಲಕರಾದ ವಿದ್ಯಾ ಪಾಟೀಲ, ವಿರುಪಮ್ಮ, ಮೋಕ್ಷಮ್ಮ, ಅಮರಮ್ಮ, ಶರೀಪಮ್ಮ, ಅಂಬಮ್ಮ, ರಂಗಮ್ಮ, ಮಾಳಮ್ಮ, ಮರಿಯಮ್ಮ, ಪ್ರಿಯಾಂಕ, ಮಮತಾ, ಸಾವಿತ್ರಮ್ಮ, ಲಕ್ಷ್ಮೀ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.