ವೇಗಿ ಜೋಫ್ರಾ ಆರ್ಚರ್ ಐಪಿಎಲ್ನಿಂದ ಔಟ್
Team Udayavani, Feb 7, 2020, 5:03 AM IST
ಲಂಡನ್: ಇಂಗ್ಲೆಂಡಿನ ವೇಗದ ಬೌಲರ್ ಜೋಫ್ರಾ ಆರ್ಚರ್ ಮುಂಬರುವ ಐಪಿಎಲ್ ಪಂದ್ಯಾವಳಿಯಿಂದ ಹೊರಗುಳಿಯಲಿದ್ದಾರೆ. ಬಲ ಮಣಿಗಂಟಿನ ಮೂಳೆ ಮುರಿತದಿಂದಾಗಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.
ಐಪಿಎಲ್ ಜತೆಗೆ ಶ್ರೀಲಂಕಾದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯನ್ನೂ ಆರ್ಚರ್ ತಪ್ಪಿಸಿಕೊಳ್ಳಲಿದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತಿಳಿಸಿದೆ.
ಬುಧವಾರ ಆರ್ಚರ್ ಈ ಸಮಸ್ಯೆಗೆ ಸಿಲುಕಿದ್ದು, ಇಸಿಬಿ ವೈದ್ಯಕೀಯ ತಂಡದ ನಿಗಾದಲ್ಲಿ ಇರಲಿದ್ದಾರೆ. ಜೂನ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ 3 ಪಂದ್ಯಗಳ ಸರಣಿ ವೇಳೆ ತಂಡಕ್ಕೆ ಮರಳುವುದು ಅವರ ಗುರಿ.
24 ವರ್ಷದ, ಬಾರ್ಬಡಾಸ್ ಮೂಲದ ಜೋಫ್ರಾ ಆರ್ಚರ್ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಬೇಕಿತ್ತು. ಆರ್ಚರ್ ಗೈರಿನಿಂದ ರಾಜಸ್ಥಾನ್ಗೆ ದೊಡ್ಡ ಹೊಡೆತ ಬಿದ್ದಿದೆ. 21 ಐಪಿಎಲ್ ಪಂದ್ಯಗಳಿಂದ 25 ವಿಕೆಟ್ ಉರುಳಿಸಿದ್ದು ಆರ್ಚರ್ ಸಾಧನೆ. ಇದರಲ್ಲಿ 15 ವಿಕೆಟ್ 2018ರ ಪದಾರ್ಪಣ ಋತುವಿನಲ್ಲೇ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.