ಮಕ್ಕಳ ಆರೋಗ್ಯದ ಕಾಳಜಿ ವಹಿಸಿ

4.46 ಲಕ್ಷ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ

Team Udayavani, Feb 7, 2020, 3:42 PM IST

7-February-19

ಶಿವಮೊಗ್ಗ: ಪೋಷಕರ ಒತ್ತಡದ ಜೀವನದಿಂದಾಗಿ ಮಕ್ಕಳ ಆರೋಗ್ಯ ಮತ್ತು ಬೆಳವಣಿಗೆಯ ಕಡೆಗೆ ಗಮನ ಹರಿಸಲು ಸಾಧ್ಯವಾಗದಿರುವ ಅನೇಕ ಕಾರಣಗಳಿಂದಾಗಿ ಅಪ್ರಾಪ್ತ ಮಕ್ಕಳಲ್ಲಿ ಅನೇಕ ರೀತಿಯ ಕಾಯಿಲೆಗಳು ಗೋಚರಿಸುತ್ತಿವೆ. ಪೋಷಕರು ತಮ್ಮ ಮಕ್ಕಳ ಉಜ್ವಲ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರ ಆರೋಗ್ಯದ ಕಡೆಗೆ ಕಾಳಜಿ ವಹಿಸುವಂತೆ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ಎಲ್‌. ವೈಶಾಲಿ ಹೇಳಿದರು.

ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಜಂತುಹುಳು ನಿವಾರಣಾ ದಿನದ ಕುರಿತು ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫೆ. 10ರಂದು ಜಿಲ್ಲೆಯಲ್ಲಿ 1-19 ವರ್ಷ ವಯೋಮಿತಿಯೊಳಗಿನ 4.46ಲಕ್ಷ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಪೋಷಕರು ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಸೂಚಿಸಿದರು.

ಜಂತುಹುಳು ಸೋಂಕಿನಿಂದಾಗಿ ಮಕ್ಕಳು ರಕ್ತಹೀನತೆ, ಪೌಷ್ಠಿಕಾಂಶ ಕೊರತೆ, ಹಸಿವೆಯಾಗದಿರುವುದು, ನಿಶಕ್ತಿ ಮತ್ತು ಆತಂಕ, ಹೊಟ್ಟೆನೋವು, ವಾಕರಿಕೆ, ವಾಂತಿ, ಅತಿಸಾರ, ತೂಕ ಕಡಿಮೆಯಾಗುವಂತಹ ಹಲವು ಅಪಾಯಕಾರಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಾರೆ. ಆದ್ದರಿಂದ ಮಕ್ಕಳ ಆರೋಗ್ಯದ ಕುರಿತು ಜಾಗೃತಿ ಅಗತ್ಯ ಎಂದರು.

ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಉಚಿತವಾಗಿ ಅಲಬೆಂಡೋಝೋಲ್‌ ಜಂತುಹುಳು ಮಾತ್ರೆಗಳನ್ನು ವಿತರಿಸಲು ಉದ್ದೇಶಿಸಲಾಗಿದ್ದು, ಸಂಬಂಧಿ ತ ಇಲಾಖೆಗಳ ಅಧಿಕಾರಿಗಳು ಮಾತ್ರೆಗಳ ವ್ಯವಸ್ಥಿತ ವಿತರಣೆಗೆ ಹಾಗೂ ಯಾವೊಬ್ಬ ಮಗುವೂ ಈ ಯೋಜನೆಯಿಂದ ಹೊರಗುಳಿಯದಂತೆ ಗಮನ ಹರಿಸಲು ಅಧಿಕಾರಿಗಳಿಗೆ ಸೂಚಿಸಿದ ಅವರು, ಶಾಲೆಗೆ ದಾಖಲಾಗದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರೆಗಳನ್ನು ವಿತರಿಸಲಾಗುವುದು. ಈ ಮಾತ್ರೆಯು ಮಕ್ಕಳಿಗೆ ಸುರಕ್ಷಿತವಾಗಿದ್ದು, ಶಾಲೆಯಲ್ಲಿಯೇ ಸೇವಿಸಲು ನೀಡಲಾಗುವುದು ಎಂದರು.

ಜಂತು ಹುಳು ನಿವಾರಣೆಯಾಗುವುದರಿಂದ ರಕ್ತಹೀನತೆಯನ್ನು ನಿಯಂತ್ರಿಸಬಹುದಾಗಿದೆ ಅಲ್ಲದೆ ಪೋಷಕಾಂಶ ಹೀರಿಕೆಯನ್ನು ಸುಧಾರಿಸಬಹುದಾಗಿದೆ. ಅಲ್ಲದೆ ಪರೋಕ್ಷವಾಗಿ ಏಕಾಗ್ರತೆ, ಕಲಿಕಾ ಸಾಮರ್ಥ್ಯ ಹಾಗೂ ಶಾಲೆ-ಅಂಗನವಾಡಿ ಕೇಂದ್ರಗಳಲ್ಲಿ ಹಾಜರಾತಿ ಸುಧಾರಣೆಯಾಗಲಿದೆ. ಕೆಲಸದ ಸಾಮರ್ಥ್ಯ ಹಾಗೂ ಜೀವನೋಪಾಯದ ಅವಕಾಶಗಳನ್ನು ವೃದ್ಧಿಸಲು ನೆರವಾಗಲಿದೆ. ಪರಿಸರದಲ್ಲಿ ಜಂತುಹುಳುಗಳನ್ನು ಕಡಿಮೆ ಮಾಡುವುದರ ಮೂಲಕ ಸಮುದಾಯಕ್ಕೆ ಪ್ರಯೋಜನಕಾರಿಯಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಸಾಗರದ ಸಂಚಾರಿ ವೈದ್ಯಕೀಯ ಘಟಕದ ಕಾರ್ಯ ನಿರ್ವಹಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ಅಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂ ದಿಗಳ ಕಾರ್ಯಕ್ಷಮತೆ ಹಾಗೂ ಕಾರ್ಯವೈಖರಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಾಗರದ ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ರಾಜೇಶ್‌ ಸುರಗೀಹಳ್ಳಿ, ಜಿಲ್ಲಾ ಆಯುಷ್‌ ಅಧಿಕಾರಿ ಪುಷ್ಪಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಣ್ಣ ಪಾಂಚಾಳ, ಆರ್‌.ಸಿ.ಎಚ್‌.ಅಧಿಕಾರಿ ಡಾ| ನಾಗರಾಜ್‌ ನಾಯ್ಕ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.