ಆರೋಗ್ಯ ಇಲಾಖೆಯಿಂದ ಜಾಗೃತಿ
Team Udayavani, Feb 8, 2020, 1:12 PM IST
ಹೊಸಕೋಟೆ: ನಗರದ ವ್ಯಾಪ್ತಿಯಲ್ಲಿ ಡೆಂಗೆ, ಚಿಕೂನ್ ಗುನ್ಯಾ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಜನಜಾಗೃತಿ ಮೂಡಿಸುತ್ತಿದ್ದಾರೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ: ಧರ್ಮೇಂದ್ರ ಪರಿಶೀಲಿಸಿದರು. ಅವರು ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದ ಜಾಗೃತಿ ಕಾರ್ಯಕ್ರಮವನ್ನು ಪರಿಶೀಲಿಸಿ ಮಾತನಾಡಿದರು.
ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂಆಶಾ ಕಾರ್ಯಕರ್ತೆಯರು ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶುಕ್ರವಾರಗಳಂದು ಅವರ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿನ ಮನೆಗಳಿಗೆ ಭೇಟಿ ನೀಡಿ ನೀರು ಸಂಗ್ರಹಣೆಗಾಗಿ ಅಳವಡಿಸಿಕೊಂಡಿರುವ ವಿಧಾನಗಳನ್ನು ಪರಿಶೀಲಿಸುತ್ತಿದ್ದಾರೆ. ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿಯುಳ್ಳ ಕರಪತ್ರಗಳನ್ನು ವಿತರಿಸಿ, ಯಾವುದೇ ತರಹವಾದ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ತೋರದೆ ವೈದ್ಯರಲ್ಲಿ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯುವಂತೆ ಸೂಕ್ತ ತಿಳಿವಳಿಕೆ ನೀಡಲಾಗುತ್ತಿದೆ. ಮನೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ, ಕೊಳಚೆ ನೀರು ನಿಲ್ಲುವುದನ್ನು ತಡೆಗಟ್ಟಿ ಸ್ವಚ್ಛತೆ ಕಾಪಾಡಿಕೊಂಡು ಸಾಂಕ್ರಾಮಿಕ ರೋಗಗಳು ಸಂಭವಿಸುವುದನ್ನು ತಡೆಗಟ್ಟಬೇಕು ಎಂಬ ಅಂಶಗಳನ್ನು ಮನವರಿಕೆ ಮಾಡಿಕೊಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕೀಟ ಶಾಸ್ತ್ರಜ್ಞೆ ಲತಾ, ಜಿಲ್ಲಾ ಆರೋಗ್ಯ ಸಹಾಯಕ ಚಂದ್ರಪ್ಪ, ತಾಲೂಕು ಆರೋಗ್ಯ ಸಹಾಯಕ ರವಿಕುಮಾರ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.