ಪ್ರಾರಂಭವಾಗದ ಇಂದಿರಾ ಕ್ಯಾಂಟೀನ್
Team Udayavani, Feb 8, 2020, 4:01 PM IST
ರೋಣ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರು ಹಾಗೂ ಹಿಂದಳಿದ ಜನರಿಗೆ ರಿಯಾಯ್ತಿ ದರದಲ್ಲಿ ಊಟೋಪಹಾರ ನೀಡುವ ಉದ್ದೇಶದಿಂದ 2016 ರಲ್ಲಿ ಜಾರಿಗೆ ತಂದ ಇಂದಿರಾ ಕ್ಯಾಂಟೀನ್‌ಗೆ ಸೂಕ್ತ ಜಾಗವಿಲ್ಲವೆಂಬ ಕುಂಟು ನೆಪ ಮುಂದಿಟ್ಟುಕೊಂಡು ಅಧಿಕಾರಿಗಳು ಯೋಜನೆ ಪ್ರಾರಂಭಿಸದೇ ಮಹತ್ವದ ಯೋಜನೆಯೊಂದನ್ನು ಕಾಗದಲ್ಲಿಯೇ ಮುಚ್ಚಿಟ್ಟಿದ್ದಾರೆ.
ಪಟ್ಟಣದ ಪುರಸಭೆಗೆ ಸಂಬಂಧಿಸಿದ ಜಾಗಗಳು ಜನವಸತಿ ಇರುವ ಪ್ರದೇಶದಲ್ಲಿಲ್ಲ. ಕಟ್ಟಡ ನಿರ್ಮಾಣ ಮಾಡಿದರೂ ಜನರಿಗೆ ಉಪಯೋಗ ಆಗುವುದಿಲ್ಲವೆಂದು ಯೋಜನೆ ಪ್ರಾರಂಭ ಮಾಡಿಲ್ಲ. ಇದರಿಂದ ಸುಮಾರು ನಾಲ್ಕು ವರ್ಷಗಳ ಹಿಂದೆ ಜಾರಿಗೆ ಬಂದ ಈ ಯೋಜನೆ ರೋಣ ತಾಲೂಕಿನ ಜನತೆಗೆ ಇನ್ನೂ ದೊರೆಯುತ್ತಿಲ್ಲ.
12 ಲಕ್ಷ ಅನುದಾನ: ಈ ಯೋಜನೆ ಸಫಲತೆಗೆ ರಾಜ್ಯ ಸರ್ಕಾರ ಮಳಿಗೆ ನಿರ್ಮಾಣ ಮಾಡಲು ಈಗಾಗಲೇ 12 ಲಕ್ಷ ಅನುದಾನ ಬಿಡಗಡೆ ಮಾಡಿದೆ. ಕಟ್ಟಡ ನಿರ್ಮಾಣ ಮಾಡಲು ಸೂಕ್ತ ಸ್ಥಳವಿರದೇ ಕಾರಣ ಇಲಾಖೆಯ ಹೆಡ್ಡಿನಲ್ಲಿ ಅನುದಾನ ಕೊಳೆಯುತ್ತಿದೆ ಎನ್ನುವುದು ಸಾರ್ವಜನಿಕರ ಆರೋಪ.
ಮೂರು ಬಾರಿ ಪತ್ರ: ರೋಣ ಪುರಸಭೆ ಮುಖ್ಯಾಧಿಕಾರಿ ಸೂಕ್ತ ಜಾಗ ನೀಡುವಂತೆ ಕೋರಿ ರೋಣ ತಹಶೀಲ್ದಾರ್‌ಗೆ ಮೂರ್ನಾಲ್ಕು ಬಾರಿ ಪತ್ರ ಬರೆದಿದ್ದಾರೆ. ಆದರೆ ಕಂದಾಯ ಇಲಾಖೆಯಿಂದ ಜಾಗ ನೀಡಲು ಸಾಧ್ಯವಿಲ್ಲ ಎಂದು ಉತ್ತರ ನೀಡಿದ್ದಾರೆ. ಇದರಿಂದ ನೀ ಕೊಡೆ..ನಾ ಬಿಡೆ.. ಎಂಬಂತೆ ಪುರಸಭೆ ಹಾಗೂ ಕಂದಾಯ ಇಲಾಖೆ ಜಗಳದ ನಡುವೆ ಇಂದಿರಾ ಕ್ಯಾಂಟೀನ್‌ನಿಂದ ವಂಚಿತರಾಗಿದ್ದಾರೆ. ಇಂದಿರಾ ಕ್ಯಾಂಟೀನ್ ಕಟ್ಟಡಕ್ಕಾಗಿ ಅನುದಾನ ಬಂದು ಖಜಾನೆಯಲ್ಲಿ ಕೊಳೆಯುತ್ತಿದೆ. ಆದರೆ ಬಡವರಿಗೆ ರಿಯಾಯ್ತಿ ದರದಲ್ಲಿ ಊಟ- ತಿಂಡಿ ವ್ಯವಸ್ಥೆ ಇನ್ನೂ ಮರೀಚಿಕೆಯಾಗಿದೆ. ಇಂದಿರಾ ಕ್ಯಾಂಟೀನ್ ಎಲ್ಲ ಕಡೆ ಪ್ರಾರಂಭವಾಗಿ ಆ ಭಾಗದ ಸಾರ್ವಜನಿಕರು ಅದರ ಉಪಯೋಗ ಪಡೆಯುತ್ತಿದ್ದಾರೆ. ಆದರೆ ರೋಣ ತಾಲೂಕಿನ ಜನರಿಗೆ ಕ್ಯಾಂಟೀನ್ ಇನ್ನೂ ಲಭಿಸದಿರುವುದು ದೌರ್ಭಾಗ್ಯವೇ ಸರಿ.
ಈಗಾಗಲೇ ನರಗುಂದ ಶಿರಹಟ್ಟಿಯಲ್ಲಿ ಸ್ಥಳದ ಸಮಸ್ಯೆಯಿಂದ ಇಂದಿರಾ ಕ್ಯಾಂಟಿನ್ ವಿಳಂಬವಾಗಿತ್ತು. ಅದನ್ನು ಬಗೆಹರಿಸಿ ಪ್ರಾರಂಭ ಮಾಡಿದ್ದೇವೆ. ಅದೇ ರೀತಿ ರೋಣ ಪುರಸಭೆ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರ್ ಇಬ್ಬರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಜಾಗದ ಸಮಸ್ಯೆ ಬಗೆಹರಿಸಲಾಗುವುದು. – ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ
-ಯಚ್ಚರಗೌಡ ಗೋವಿಂದಗೌಡ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.