ಧನಾತ್ಮಕ ಚಿಂತನೆ ಅಳವಡಿಸಿಕೊಳ್ಳಿ

Team Udayavani, Feb 9, 2020, 5:23 PM IST

hv-tdy-1

ರಾಣಿಬೆನ್ನೂರ: ಇಂದಿನ ಒತ್ತಡದ ಜೀವನ ಹಾಗೂ ಆಧುನಿಕತೆಯ ಭರಾಟೆಯ ದಿನಗಳಲ್ಲಿ ಸಾಮಾಜಿಕ ಪಿಡುಗು ಎಂದೆನಿಸಿರುವ ವರದಕ್ಷಿಣೆ ಪದ್ಧತಿ ಹಾಗೂ ವಿವಾಹ ವಿಚ್ಛೇದನಗಳು ಹೆಚ್ಚಾಗುತ್ತಿರುವುದು ದುರ್ದೈವದ ಸಂಗತಿ ಎಂದು ದೈವಜ್ಞ ಬ್ರಾಹ್ಮಣ ಸಮಾಜದ ಕರ್ಕಿ ಮಠದ ಸಚ್ಚಿದಾನಂದ ಜ್ಞಾನೇಶ್ವರಿ ಸ್ವಾಮೀಜಿ ಹೇಳಿದರು.

ಇಲ್ಲಿನ ಮೃತ್ಯುಂಜಯ ನಗರದಲ್ಲಿ ದೈವಜ್ಞ ಸಮಾಜದ ವತಿಯಿಂದ ನೂತನವಾಗಿ ನಿರ್ಮಿಸಿರುವ ದೈವಜ್ಞ ಸಮುದಾಯಭವನ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸತ್ತ ಮೇಲೆಯೂ ಆತನ ಹೆಸರು ಜನಮಾನಸದಲ್ಲಿ ಜೀವಂತವಾಗಿರುವಂತಹ ಕೆಲಸಗಳನ್ನು ಮಾಡಬೇಕು. ಮನುಷ್ಯನಿಗೆ ವೈಯುಕ್ತಿಕ ಹಿತಾಸಕ್ತಿಗಿಂತ ಸಮಸ್ತ ಮನುಕುಲದ ಶ್ರೇಯಸ್ಸಿನ ಚಿಂತನೆಯಿರಬೇಕು ಎಂದರು.

ಸಂಕುಚಿತ ಮನೋಭಾವನೆಯಿಂದ ಕಷ್ಟ ಕಾರ್ಪಣ್ಯಗಳು ಹೆಚ್ಚಾಗುತ್ತವೆ. ಲೋಕದ ಸಮಸ್ತ ಜನರು ಸುಖವಾಗಿರಲಿ ಎಂಬ ಚಿಂತನೆಯಿರಬೇಕು. ಋಣಾತ್ಮಕ ವಿಚಾರಗಳ ಬದಲಿಗೆ ಧನಾತ್ಮಕ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಜನರು ಸಂಘಟಿತರಾಗಿ ಇಂತಹ ಸಣ್ಣ ಊರಿನಲ್ಲಿಯೂ ಭವ್ಯವಾದ ಸಮುದಾಯ ಭವನ ನಿರ್ಮಿಸಿರುವುದು ಶ್ಲಾಘನೀಯ ಎಂದರು. ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ದೊಡ್ಡ ಸಮಾಜದವರೇ ಇಂತಹ ಸಮುದಾಯದ ಬಗ್ಗೆ ತಲೆಕೆಡಿಕೊಂಡಿಲ್ಲ. ಹೀಗಿರುವಾಗ ದೈವಜ್ಞ ಸಮಾಜ ಸಣ್ಣ ಸಮಾಜವಾಗಿದ್ದರೂ ಸಹಿತ ತಾಲೂಕಿನಲ್ಲಿ ಭವ್ಯವಾದ ಕಲ್ಯಾಣ ಮಂಟಪ ಕಟ್ಟಿರುವುದು ಹೆಮ್ಮೆಯ ವಿಷಯವಾಗಿದೆ. ಸಾಧನೆ ಮಾಡಲು ಛಲ ಇರಬೇಕು ಎನ್ನುವುದು ತೋರಿಸಿ ಕೊಟ್ಟಿದ್ದಾರೆ ಎಂದರು.

ತಾಲೂಕು ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ವೆಂಕಟೇಶ ದೈವಜ್ಞ, ದತ್ತಾತ್ರೇಯ ಶೇಜವಾಡಕರ, ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ವಿನಯಾ ರಾಯ್ಕರ್‌, ನಗರಸಭಾ ಸದಸ್ಯರಾದ ಮಲ್ಲಿಕಾರ್ಜುನ ಅಂಗಡಿ, ಪಾಂಡುರಂಗ ಗಂಗಾವತಿ, ಬಿಜೆಪಿ ಮುಖಂಡ ಚೋಳಪ್ಪ ಕಸವಾಳ, ಸಮಾಜದ ಮುಖಂಡರಾದ ಕಮಲಾಕರ ಶೇಜವಾಡಕರ, ಮಂಜುನಾಥ ಶೇಜವಾಡಕರ, ಪ್ರಕಾಶ ರೇವಣಕರ, ರಾಜು ರೇವಣಕರ, ಪದ್ಮಾವತಿ ದೈವಜ್ಞ, ವತ್ಸಲಾ ಶೇಜವಾಡಕರ, ಸಂತೋಷ ದೈವಜ್ಞ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.