ಅನ್ನದಾತರ ಸಾಲ ಮನ್ನಾಕ್ಕೆ ಆಗ್ರಹ
Team Udayavani, Feb 10, 2020, 11:05 AM IST
ಸಾಂಧರ್ಬಿಕ ಚಿತ್ರ
ಹುಬ್ಬಳ್ಳಿ: ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಅತಿವೃಷ್ಟಿ, ಅನಾವೃಷ್ಟಿಯಿಂದ ಸಾಕಷ್ಟು ಹಾನಿಯಾಗಿದ್ದು, ಮನೆ ಕಳೆದುಕೊಂಡವರಿಗೆ ಸರಕಾರ ಕೂಡಲೇ ಸಮರ್ಪಕ ಪರಿಹಾರ ಧನ ನೀಡಬೇಕು. ಅತಿವೃಷ್ಟಿಗೊಳಗಾದ ರೈತರ ಸಾಲಮನ್ನಾ ಮಾಡಬೇಕೆಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಗ್ರಹಿಸಿದರು.
ರವಿವಾರ ವಿಮಾನ ನಿಲ್ದಾಣದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಮಿತಿ ಮುಖಂಡರು, ಮನೆ ಕಳೆದುಕೊಂಡವರು ಪರಿಹಾರ ಧನಕ್ಕಾಗಿ ತಹಶೀಲ್ದಾರರಿಗೆ ಕೇಳಿದರೆ ಜಿಲ್ಲಾಧಿಕಾರಿಯವರ ಹೆಸರು ಹೇಳುತ್ತಾರೆ. ಅವರು ಸರಕಾರದತ್ತ ಬೊಟ್ಟು ಮಾಡುತ್ತಿದ್ದಾರೆ. ಕೂಡಲೇ ಅವರಿಗೆ ಸಮಸ್ಯೆ ಬಗೆಹರಿಸಲು ಸೂಚಿಸಬೇಕು. ನರಗುಂದ, ನವಲಗುಂದ, ಗದಗ ಸೇರಿದಂತೆ ಇತರೆ ತಾಲೂಕು, ಜಿಲ್ಲೆಗಳಲ್ಲಿನ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು. ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಜಾರಿ ವಿಚಾರವಾಗಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು. ಆದಷ್ಟು ಬೇಗ ಮಹದಾಯಿ ಸಮಸ್ಯೆ ಇತ್ಯರ್ಥ ಪಡಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸಿದ್ದು ತೇಜಿ, ಬಾಬಾಜಾನ ಮುಧೋಳ, ಬಿ.ಎ. ಮುಧೋಳ, ಎನ್.ಎ. ಖಾಜಿ, ರಮೇಶ ಬೋಸ್ಲೆ, ಶಿವು ಪಡೇಸೂರ, ಆಂಜನೇಯ ಪೂಜಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.