ಬಂಜಾರಾ ಬದುಕಿಗೆ ಸೇವಾಲಾಲ ಬೆಳಕು

ಬಾಬಾಸಾಹೇಬರಿಂದ ಮೀಸಲಾತಿ ಸೌಕರ್ಯ ತಾಂಡಾಗಳಲ್ಲಿ ಹಬ್ಬದ ವಾತಾವರಣ

Team Udayavani, Feb 10, 2020, 10:55 AM IST

10-February-2

ವಾಡಿ: ಅಡವಿಯಲ್ಲಿ ತಿರುಗುತ್ತ ಅನ್ನಕ್ಕಾಗಿ ಅಲೆಯುತ್ತಿದ್ದ ಅಲೆಮಾರಿ ಬಂಜಾರಾ ಜನಾಂಗದ ಬದುಕು ಅರಳಲು ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಮತ್ತು ಸಂತ ಶ್ರೀ ಸೇವಾಲಾಲ ಮಹಾರಾಜರ ಹೋರಾಟ ಕಾರಣವಾಗಿದೆ ಎಂದು ಮಾಜಿ ಶಾಸಕ, ಬಂಜಾರಾ ಸಮಾಜದ ಹಿರಿಯ ಮುಖಂಡ ವಾಲ್ಮೀಕಿ ನಾಯಕ ಹೇಳಿದರು.

ಬಂಜಾರಾ ಸಮುದಾಯದ ಧರ್ಮಗುರು ಸಂತ ಶ್ರೀ ಸೇವಾಲಾಲ ಮಹಾರಾಜರ 281ನೇ ಜಯಂತಿ ನಿಮಿತ್ತ ರವಿವಾರ ಪಟ್ಟಣದ ಸೇವಾಲಾಲ ನಗರದ ಸೇವಾಲಾಲ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಒಂದು ಕಾಲದಲ್ಲಿ ಲಂಬಾಣಿ ಯುವತಿಯರ ಮದುವೆ ಎಂದರೆ ವರನಿಗೆ ಮಗಳನ್ನು ಮಾರಿಕೊಂಡಂತೆ. ಅಲೆಮಾರಿ ಜೀವನದ ಬೆನ್ನಟ್ಟಿ ಭೂಮಿ ಸುತ್ತುವ ಈ ಜನಾಂಗದ ಬಂಧುಗಳು ಕಣ್ಣಿಗೆ ಬೀಳುವುದು ಅದ್ಯಾವೂದೋ ಊರಿನ ಸಂತೆ ಅಥವಾ ಜಾತ್ರೆಗಳಲ್ಲಿ ಮಾತ್ರ. ಪರಸ್ಪರ ಭೇಟಿಯಾದಾಗ ಎದೆಗಪ್ಪಿಸಿಕೊಂಡು ಗೊಳ್ಳೋ ಎಂದು ಅಳುತ್ತಿದ್ದರು. ಇಂತಹ ಹೀನಾಯ ಬದುಕಿನ ಹಿನ್ನೆಲೆ ಹೊಂದಿರುವ ಬಂಜಾರಾ ಸಮುದಾಯಕ್ಕೆ ಬಾಬಾಸಾಹೇಬರು ಮೀಸಲಾತಿ ಒದಗಿಸಿ ಬೆಳಕು ನೀಡಿದ್ದಾರೆ. ಸಂತ ಸೇವಾಲಾಲ ಮಹಾರಾಜರು ಮಾರ್ಗದರ್ಶನ ನೀಡಿ ಕಷ್ಟಗಳನ್ನು ದೂರ ಮಾಡಿದ್ದಾರೆ. ಅಂತಹ ಮಹಾನ್‌ ಸಂತನ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಬಂಜಾರಾ ಸಮಾಜದ ಅಧ್ಯಕ್ಷ ಶಿವರಾಮ ಪವಾರ ಮಾತನಾಡಿ, ಪ್ರತಿ ವರ್ಷದ ಫೆಬ್ರವರಿ ತಿಂಗಳ 14 ಮತ್ತು 15ರಂದು ದೇಶದ ಎಲ್ಲೆಡೆ ಏಕಕಾಲಕ್ಕೆ ಸೇವಾಲಾಲ ಮಹಾರಾಜರ ಜಯಂತಿ ನಡೆಯುತ್ತದೆ. ಈ ದಿನಗಳಲ್ಲಿ ಲಂಬಾಣಿಗರ ತಾಂಡಾಗಳಲ್ಲಿ ಹಬ್ಬದ ವಾತಾವರಣ ಇರುತ್ತದೆ ಎಂದರು.

ಫೆ.15ರಂದು ನಗರದಲ್ಲಿ ಮುಗುಳನಾಗಾಂವ ಶ್ರೀಯಲ್ಲಾಲಿಂಗ ಪುಣ್ಯಾಶ್ರಮದ ಪೂಜ್ಯ ಜೇಮಸಿಂಗ್‌ ಮಹಾರಾಜ, ಗೊಬ್ಬೂರ ಮಠದ ಶ್ರೀ ಬಳಿರಾಮ ಮಹಾರಾಜರ ಸಮ್ಮುಖದಲ್ಲಿ ಭವ್ಯ ಮೆರವಣಿಗೆ, ಬೃಹತ್‌ ಬಹಿರಂಗ ಸಭೆ, ಉಚಿತ ಸಾಮೂಹಿಕ ವಿವಾಹ, ಪ್ರತಿಭಾವಂತ ಬಂಜಾರಾ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಗಣ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರಿಸಿದರು.

ಸಮಾಜದ ಹಿರಿಯ ಮುಖಂಡರಾದ ರಮೇಶ ಕಾರಬಾರಿ, ದೇವಜಿ ನಾಯಕ, ಮೋತಿರಾಮ ರಾಠೊಡ, ರಾಮಚಂದ್ರ ರಾಠೊಡ, ಸೋಮಸಿಂಗ್‌ ರಾಠೊಡ, ಗಣೇಶ ಚವ್ಹಾಣ, ತುಕಾರಾಮ ರಾಠೊಡ, ರಾಮು ರಾಠೊಡ, ರಾಜು ಪವಾರ, ಈಶ್ವರ ರಾಠೊಡ, ಕಿಶನ್‌ ಜಾಧವ, ನಾಮದೇವ ಚವ್ಹಾಣ, ಅಂಬಾದಾಸ ಜಾಧವ, ಬೋರು ರಾಠೊಡ ಯಾಗಾಪುರ, ದಿನೇಶ ಗೋಪಾಲ ರಾಠೊಡ, ಧರಮ ಪವಾರ, ಪಾಂಡು ರಾಠೊಡ, ದೇವು ಜಾಧವ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.