ಪರೀಕ್ಷೆ ಭಯ ಬಿಟ್ಟು ಅಭ್ಯಾಸ ಮಾಡಿ
Team Udayavani, Feb 10, 2020, 3:24 PM IST
ಗುಂಡ್ಲುಪೇಟೆ: ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡ ಮತ್ತು ಭಯ ಬಿಟ್ಟು, ಅಭ್ಯಾಸ ಮಾಡುವ ಮೂಲಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಕಿವಿಮಾತು ಹೇಳಿದರು.
ಪಟ್ಟಣದ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ ಹೊರತಂದಿರುವ ದಾರಿದೀಪ ಕೈಪಿಡಿಯನ್ನು ಬಿಡುಗಡೆಗೊಳಿಸಿದ ಅವರು ಮಾತನಾಡಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಮಕ್ಕಳಿಗೆ ಮನವರಿಕೆ ಮಾಡುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಒಂದು ದಿನವನ್ನು ಮೀಸಲಿಟ್ಟಿದ್ದರು ಎಂದು ಹೇಳಿದರು.
ಎಸ್ಎಸ್ಎಲ್ಸಿ ಎಂಬುದು ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾಗಿದೆ. ಇದರಿಂದ ಶಿಕ್ಷಣ ಇಲಾಖೆಯು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡುವ ದಾರಿದೀಪ ಕೈಪಿಡಿ ಸಿದ್ಧಗೊಳಿಸಿದೆ. ಸದ್ಯದಲ್ಲೇ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಹಾಗೂ ಪಾಲಕರ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಫೋನ್ಇನ್ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೆ ಸಂಬಂಧಪಟ್ಟ ಸಹಾಯವಾಣಿ ಕೇಂದ್ರವನ್ನೂತೆರೆಯಲಾಗುತ್ತದೆ. ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ಉತ್ತಮ ಫಲಿತಾಂಶ ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯ್ತಿ ಅಧ್ಯಕ್ಷ ಎಸ್.ಎಸ್.ಮಧುಶಂಕರ್, ಬಿಇಒ ಎಸ್ .ಸಿ.ಶಿವಮೂರ್ತಿ, ಬಿ.ಆರ್.ಸಿ ನಂದೀಶ್, ತಾಪಂ ಇಒ ಕುಲದೀಪ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.