ಅಧಿಕಾರಿಗಳ ವಿರುದ್ಧ ಕುಲಕರ್ಣಿ ಆಕ್ರೋಶ

Team Udayavani, Feb 10, 2020, 5:35 PM IST

10-February-30

ಆಲಮಟ್ಟಿ: ಮುಳವಾಡ ಏತ ನೀರಾವರಿ ಯೋಜನೆಯ ವಿಜಯಪುರ ಶಾಖಾ ಕಾಲುವೆಯ ಕೂಡಗಿ ಬಳಿ ರೈಲ್ವೆ ಹಳಿ ದಾಟಿಸುವ ಕಾಮಗಾರಿ ಸ್ಥಳಕ್ಕೆ ಅಖಂಡ ಕರ್ನಾಟಕ ರೈತ ಸಂಘದ ಪದಾ ಧಿಕಾರಿಗಳು ಭೇಟಿ ನೀಡಿದರು.

ಆಲಮಟ್ಟಿ: ರಾಜ್ಯ ಸರ್ಕಾರದ ಮಹತ್ವಾಂಕ್ಷಿ ನೀರಾವರಿ ಯೋಜನೆಗಳಲ್ಲೊಂದಾಗಿರುವ ಕೃ. ಮೇ.ಯೋ. ವ್ಯಾಪ್ತಿಯ ಮುಳವಾಡ ಏತ ನೀರಾವರಿ ಯೋಜನೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಜಿಲ್ಲೆಯ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.

ರವಿವಾರ ಮುಳವಾಡ ಏತ ನೀರಾವರಿ ಯೋಜನೆ ವ್ಯಾಪ್ತಿಯ ವಿಜಯಪುರ ಶಾಖಾ ಕಾಲುವೆಯ ಕೂಡಗಿ ಬಳಿ ರೈಲ್ವೆ ಹಳಿ ದಾಟಿಸುವ ಕಾಮಗಾರಿ ಸ್ಥಳಕ್ಕೆ ರೈತರೊಂದಿಗೆ ಭೇಟಿ ನೀಡಿ ಅವರು ಮಾತನಾಡಿದರು. ಕೂಡಗಿ ಬಳಿ ರೈಲ್ವೆ ಹಳಿ ದಾಟಿಸುವ (ಕೆಳ ಸೇತುವೆ) ಕಾಮಗಾರಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ಕಾಮಗಾರಿ ಕುಂಟುತ್ತಾ ಸಾಗಿದೆ. ಈಗ ರಾಜ್ಯದವರೇ ಆಗಿರುವ ರೈಲ್ವೆ ಖಾತೆ ರಾಜ್ಯ ಸಚಿವರು ನಮ್ಮವರೇ ಹಾಗೂ ಜಿಲ್ಲೆಯ ಸಂಸದರು ಕಳೆದ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದರೂ ಕೂಡ ರೈತರ ಬವಣೆ ನೀಗಿಸಲಾಗಿಲ್ಲ ಎಂದು ಆರೋಪಿಸಿದರು.

ಜನಪ್ರತಿನಿ ಧಿಗಳಾದವರು ಜನರ ಕಷ್ಟ-ಸುಖಗಳನ್ನು ಕೇಳದಿದ್ದರೆ ತಾವು ಮಾಡುವುದಾದರೂ ಏನು ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ರೈತರು ಜಿಲ್ಲೆಯ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಗುತ್ತಿಗೆ ಪಡೆದ ಗುತ್ತಿಗೆದಾರರು ನಿಧಾನವೇ ಪ್ರಧಾನ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ. ಜನಪ್ರತಿನಿಧಿಗಳಾದವರು ಅಧಿಕಾರಿಗಳಿಂದ
ಕೆಲಸ ಪಡೆಯಬೇಕು. ಅದನ್ನು ಬಿಟ್ಟು ಅವರು ಹೇಳಿದಂತೆಯೇ ತಲೆ ಅಲ್ಲಾಡಿಸುವಂತಾಧರೆ ಹೇಗೆ ಎಂದು ಪ್ರಶ್ನಿಸಿದರು.

ನಮ್ಮ ನೆರೆಯ ರಾಜ್ಯಗಳಲ್ಲಿ ರೈಲ್ವೆ ಹಳಿ ದಾಟಿಸುವ ಕಾಮಗಾರಿಗಳು ಕೇವಲ ಐದು ದಿನಗಳಲ್ಲಿ ಮುಕ್ತಾಯ ಆಗುವುದಾದರೆ ನಮ್ಮಲ್ಲಿ ಏಕೆ ಆಗುತ್ತಿಲ್ಲ, ದೇಶವು ಸಾಕಷ್ಟು ತಂತ್ರಜ್ಞಾನದಲ್ಲಿ ಮುಂದುವರಿದಿದ್ದರೂ ಹೊಣೆ ಹೊರುವವರೇ ತಮ್ಮ ಹೊಣೆಯನ್ನು ಮರೆತರೇ ಆಗುವುದಾದರೂ ಹೇಗೆ ಎಂದು ಕುಟುಕಿದರು.

ನಮ್ಮವರೇ ರೈಲ್ವೆ ರಾಜ್ಯ ಸಚಿವರಿದ್ದು ಅವರೊಂದಿಗಾದರೂ ನಮ್ಮ ಸಂಸದರು ಚರ್ಚಿಸಿ ಜಿಲ್ಲೆಯ ಜನರಿಗೆ ಆಗುತ್ತಿರುವ ಅನ್ಯಾಯ ಹೋಗಲಾಡಿಸಿ ನ್ಯಾಯ ಕೊಡಿಸಬೇಕಾಗಿರುವದು ಅವರ ಜವಾಬ್ದಾರಿ. ಈಗ ಸಾಗುತ್ತಿರುವ ಕಾಮಗಾರಿ ಕಂಡರೇ ಜಿಲ್ಲೆಯ ಜನರಿಗೆ ಸಂಬಂಧಿಸಿದ ರೈಲ್ವೆ ಅಧಿಕಾರಿಗಳು ಹಾಗೂ ಸಂಸದರು ಮೋಸ ಮಾಡುತ್ತಿದ್ದಾರೆ ಎಂದು ಅನಿಸುತ್ತಿದೆ. ಆದ್ದರಿಂದ ಜಿಲ್ಲೆಯ ಜನಪ್ರತಿನಿಧಿಗಳು ರೈಲ್ವೆ ಮಂತ್ರಿ ಹಾಗೂ ರೈಲ್ವೆ ಅಧಿಕಾರಿಗಳ ಮೇಲೆ ಒತ್ತಡ ತಂದು ಅತಿ ಶೀಘ್ರವಾಗಿ ಕಾಮಗಾರಿ ಮುಗಿಸಬೇಕು ಎಂದರು.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.