ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಿಡುಗಡೆಯಾಗಿರುವ ಹಣ ಬಳಸಿ
Team Udayavani, Feb 11, 2020, 3:00 AM IST
ಮೈಸೂರು: ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮನವಿ ಮಾಡಿದರು. ಸೋಮವಾರ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಅಭಿವೃದ್ಧಿಯ ಸಂಬಂಧ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಪ್ರಸಕ್ತ ಸಾಲಿನ 3ನೇ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಭಿವೃದ್ಧಿಗೆ ಬಿಡುಗಡೆಯಾದ ಅನುದಾನದಲ್ಲಿ ಉಳಿದಿರುವ 11 ಲಕ್ಷ ರೂ.ಗಳನ್ನು ಆ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗ್ರಂಥಾಲಯ ಹಾಗೂ ಇನ್ನಿತರ ಮೂಲ ಸೌಕರ್ಯಗಳಿಗೆ ಬಳಸಿಕೊಳ್ಳಬೇಕು. ಯಾವುದೇ ಅನುದಾನ ವಾಪಸ್ಸಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ಕೇವಲ ಒಂದು ಉರ್ದು ಪ್ರೌಢಶಾಲೆಯಿದ್ದು, ವಿದ್ಯಾರ್ಥಿಗಳಿಗೆ ಅದರಲ್ಲೂ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತೆ ನಗರದಲ್ಲಿ ಉರ್ದು ಪ್ರೌಢಶಾಲೆಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮವಹಿಸಲಾಗುವುದು. ಕೆಲವೊಂದು ಶಾಲೆಗಳಲ್ಲಿ ಪೀಠೊಪಕರಣಗಳ ಕೊರತೆಯಿದ್ದು, ಇದರ ಬಗ್ಗೆ ಯೋಚಿಸಲಾಗುವುದು ಎಂದರು.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಾಲಾ ಶಿಕ್ಷಕರು ಬೇಕಾಗಿದ್ದು, ಶಿಕ್ಷಕರ ಕೊರತೆಯಾಗದಂತೆ ಕ್ರಮವಹಿಸಬೇಕು. ನಗರದ ಆರ್ಚ್‌ಗೇಟ್ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಕನ್ನಡ ಶಿಕ್ಷಕರ ಕೊರತೆಯಿರುವುದು ಕಂಡು ಬಂದಿದೆ. ಇದರ ಬಗ್ಗೆ ಕ್ರಮವಹಿಸಬೇಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆಪಟ್ಟಿ ಎಂಟು ಕ್ಷೇತ್ರಗಳಿಂದ ಬಂದಿದೆ. ಹುಣಸೂರು, ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರ ಈ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಫಲಾನುಭವಿಗಳ ಆಯ್ಕೆಯಾಗಬೇಕಿದೆ ಎಂದು ನಿಗಮದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಕಳೆದ ನಾಲ್ಕು ವರ್ಷಗಳಿಂದ ಭಾಗ್ಯಲಕ್ಷ್ಮೀ ಬಾಂಡ್ ಸಮರ್ಪಕವಾಗಿ ಪೂರೈಕೆಯಾಗಿರಲಿಲ್ಲ.
ಈಗ ಅದು ಪೂರೈಕೆಯಾಗುತ್ತಿದ್ದು, ತಾಲ್ಲೂಕು ಮಟ್ಟದಲ್ಲಿ ಫಲಾನುಭವಿಗಳಿಗೆ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾ ಸಭೆಗೆ ತಿಳಿಸಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮುಖಾ¤ರ್ ಪಾಷಾ, ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಸಮಿತಿಯ ಸದಸ್ಯರಾದ ಮೊಹಮ್ಮದ್ ರಫೀಕ್, ರಾಜು ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಉದ್ಯೋಗ ಮೇಳಕ್ಕೆ ಪ್ರಚಾರ ನೀಡಿ: ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲೆಯ ನಿರುದ್ಯೋಗಿ ಅಭ್ಯರ್ಥಿಗಳಿಗಾಗಿ ಫೆ.19 ಮತ್ತು 20 ರಂದು ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು, ಅಲ್ಪಸಂಖ್ಯಾತ ನಿರುದ್ಯೋಗಿ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವಂತೆ ಈ ಮೂರು ಜಿಲ್ಲೆಗಳಲ್ಲಿ ಹೆಚ್ಚಾಗಿ ಪ್ರಚಾರ ನೀಡಬೇಕೆಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.