ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉಪನ್ಯಾಸಕರಿಂದ ಪ್ರತಿಭಟನೆ
Team Udayavani, Feb 11, 2020, 3:52 PM IST
ಬಂಕಾಪುರ: ವೇತನ ತಾರತಮ್ಯ ಸರಿಪಡಿಸುವುದು, 2ನೇ ಹೆಚ್ಚುವರಿ ವೇತನ ಬಡ್ತಿ ಮಂಜೂರಾತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸೋಮವಾರ ರಾಜ್ಯ ವ್ಯಾಪ್ತಿಯಲ್ಲಿ ನಡೆಯುವ ಮೌನ ಪ್ರತಿಭಟನೆಗೆ ಬೆಂಬಲಿಸಿ, ಪಟ್ಟಣದ ಕೀರ್ತಿ ಪಪೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಕಪ್ಪುಬಟ್ಟೆ ಕಟ್ಟಿಕೊಂಡಿ ಪ್ರತಿಭಟನೆ ನಡೆಸಿದರು.
ಉಪನ್ಯಾಸಕರ ಕಾರ್ಯಭಾರ ಕುರಿತು ಉನ್ನತ ಮಟ್ಟದ ಪರಿಷತ್ ರಚಿಸಬೇಕು. ಪ್ರತಿ ಉಪನ್ಯಾಸಕರಿಗೆ 16 ಗಂಟೆ ಬೋಧನಾ ಅವಧಿ ಮುಂದುವರಿಸಬೇಕು. ಪದೋನ್ನತಿ ಹೊಂದಿ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುವವರಿಗೆ ಕಾಲಮಿತಿ ಬಡ್ತಿ ಮಂಜೂರು ಮಾಡಿ, ಪ್ರತಿ ತರಗತಿಗೆ ವಿದ್ಯಾರ್ಥಿಗಳ ಸಂಖ್ಯೆಯನ್ನು 80 ರಿಂದ 40 ಕ್ಕೆ ನಿಗದಿಪಡಿಸಬೇಕು. ನೆಟ್, ಸ್ಲೆಟ್, ಪಿಎಚ್‌ಡಿ ಅರ್ಹತೆ ಪಡೆದವರಿಗೆ ಪದವಿ ಕಾಲೇಜಿಗೆ ಬಡ್ತಿ ನೀಡಬೇಕು. ಪಬ್ಲಿಕ್ ಕಾಲೇಜುಗಳ ಸಮಸ್ಯೆಯನ್ನು ಬಗೆಹರಿಸಬೇಕು. ಅನುದಾನಿತ ಉಪನ್ಯಾಸಕರ ಕಾಲ್ಪನಿಕ ವೇತನ ಸಮಸ್ಯೆ ಬಗೆಹರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ ಮನವಿಯಲ್ಲಿ ಅಗ್ರಹಿಸಲಾಗಿದೆ. ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ 2020ರ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಬಹಿಷ್ಕರಿಸಬೇಕಾಗುತ್ತದೆ ಎಂದು ಸರಕಾರಕ್ಕೆ ಮನವಿ ನೀಡಲಾಗಿದೆ.
ಪ್ರಭಾರಿ ಪ್ರಾಚಾರ್ಯ ಎಂ.ಎಸ್.ಕನ್ನಕನವರ, ಎಸ್. ಬಿ.ಕುರಬರ, ಎಸ್.ಆರ್.ಕಾರಗಿ, ಜಗದೀಶ ಪುರದ, ಎಂ.ಆರ್.ಅಶೋಕ, ಶಿವಾನಂದ ಗೌಡರ, ಯಲ್ಲಪ್ಪ ಹುಲ್ಲತ್ತಿಯವರ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.