ಮುನಿರತ್ನ ವಿರುದ್ಧದ ಕೇಸ್: ವಿಚಾರಣೆ ಮುಂದೂಡಿಕೆ
Team Udayavani, Feb 12, 2020, 3:05 AM IST
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮುನಿರತ್ನ ಅವರು ಅಕ್ರಮವೆಸಗಿ ಜಯಗಳಿಸಿದ್ದಾರೆ ಎಂಬುದಕ್ಕೆ ಸೂಕ್ತ ಸಾಕ್ಷ್ಯವೇನಿದೆ ಎಂದು ಪರಾಜಿತ ಅಭ್ಯರ್ಥಿ ಮುನಿರಾಜುಗೌಡ ಅವರನ್ನು ಹೈಕೋರ್ಟ್ ಪ್ರಶ್ನಿಸಿದೆ.
ರಾಜರಾಜೇಶ್ವರಿ ನಗರ ವಿಧಾನಭಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಮುನಿರತ್ನ (ಅನರ್ಹಗೊಂಡಿರುವ ಶಾಸಕ) ಆಯ್ಕೆಯಾಗಿರುವುದನ್ನು ಅಸಿಂಧು ಗೊಳಿಸಿ, ತಮ್ಮನ್ನೇ ವಿಜೇತ ಅಭ್ಯರ್ಥಿ ಎಂದು ಘೋಷಿಸುವಂತೆ ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜುಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಮುನಿರತ್ನ ಪರ ವಕೀಲರು ವಾದ ಮಂಡಿಸಿ, ಪರಾಜಿತ ಅಭ್ಯರ್ಥಿ ಆರೋಪ ಹಾಗೂ ತಮ್ಮನ್ನೇ ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕೆಂಬ ಅವರ ಮನವಿಗೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಅರ್ಜಿ ವಜಾಗೊಳಿಸಿದರೆ ಕ್ಷೇತ್ರಕ್ಕೆ ಮರು ಚುನಾವಣೆ ನಡೆಸಲು ಸಾಧ್ಯವಾಗುತ್ತದೆ ಎಂದರು.
ಇದಕ್ಕೆ ನ್ಯಾಯಪೀಠ ಪ್ರತಿಕ್ರಿಯಿಸಿ, ಮುನಿರತ್ನ ಯಾವ ರೀತಿ ಚುನಾವಣಾ ಅಕ್ರಮವೆಸಗಿ ಗೆದ್ದಿದ್ದಾರೆ. ಅಕ್ರಮ ಸಾಬೀತು ಪಡಿಸಲು ನಿಮ್ಮ ಬಳಿ ಇರುವ ಸಾಕ್ಷ್ಯಗಳೇನು, ಇಂತಹದ್ದೇ ಕಾರ ಣದಿಂದ ಅರ್ಜಿ ದಾರರಿಗೆ ಬರಬೇಕಾದ ಮತ ಮುನಿರತ್ನ ಪಾಲಾ ಗಿವೆ ಎಂಬುದನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಡು ವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಫೆ.13ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.