ವ್ಯಸನಮುಕ್ತ ಗ್ರಾಮದಿಂದ ರಾಮರಾಜ್ಯ: ಜೊಲ್ಲೆ
ವ್ಯಸನಮುಕ್ತ ಸಾಧಕರ ಸಮಾವೇಶ; ಶತದಿನೋತ್ಸವ ಸಂಭ್ರಮ
Team Udayavani, Feb 12, 2020, 2:03 AM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅನ್ನಾಸಾಹೇಬ್ ಮಾತನಾಡಿದರು.
ಬೆಳ್ತಂಗಡಿ: ಕುಟುಂಬ ಪ್ರಧಾನ ಭಾರತದ ಜೀವನ ಪದ್ಧತಿ ವಿಶ್ವಕ್ಕೆ ಮಾದರಿ. ಧರ್ಮಸ್ಥಳದ
ಡಾ| ವೀರೇಂದ್ರ ಹೆಗ್ಗಡೆ ಅವರ ಸಮಾಜಮುಖೀ ಚಿಂತನೆಗಳು ಸರಕಾರದ ಯೋಜನೆಗಿಂತಲೂ ಮಿಗಿಲಾದುದು. ಈ ಮೂಲಕ ಗ್ರಾಮಗಳು ವ್ಯಸನ ಮುಕ್ತವಾಗಿ ರಾಮರಾಜ್ಯದ ಕನಸು ನನಸಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅನ್ನಾಸಾಹೇಬ್ ಹೇಳಿದರು. ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಮಂಗಳವಾರ ನಡೆದ ವ್ಯಸನಮುಕ್ತ ಸಾಧಕರ ಸಮಾವೇಶ ಮತ್ತು ಶತದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವ್ಯಸನ ಮಕ್ತಿಯಿಂದ ನವಜೀವನ
ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, ಮಹಿಳೆಯರು ದುಶ್ಚಟಗಳ ದಮನ ಮಾಡುವ ಸಂಕಲ್ಪ ಶಕ್ತಿ ಮತ್ತು ಆತ್ಮ ಬಲ ಹೊಂದಬೇಕು. ಜನಜಾಗೃತಿ ವೇದಿಕೆಯ ನಿರಂತರ ಪರಿಶ್ರಮ- ಪ್ರಯತ್ನದಿಂದ ಅನೇಕ ಕುಟುಂಬಗಳು ವ್ಯಸನ ಮುಕ್ತವಾಗಿ ಇಂದು ನವಜೀವನ ನಡೆಸುತ್ತಿವೆ ಎಂದು ಹೇಳಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ಮಹಾತ್ಮ ಗಾಂಧಿ ಅವರು ಕಂಡ ವ್ಯಸನಮುಕ್ತ ಭಾರತದ ಕನಸು ಡಾ| ಹೆಗ್ಗಡೆಯವರ ನೇತೃತ್ವದಲ್ಲಿ ಸಾವಿರಾರು ಕುಟುಂಬಗಳು ನವ ಜೀವನ ನಿರ್ಮಿಸುವಲ್ಲಿ ಪ್ರೇರಣೆ ಯಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ವ್ಯಸನಮುಕ್ತರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಪವಿತ್ರಾತ್ಮರಾಗಿದ್ದೀರಿ. ಮುಂದೆ ದೃಢ ಸಂಕಲ್ಪದಿಂದ ಅಂತರಂಗ- ಬಹಿರಂಗ ಪರಿಶುದ್ಧರಾಗಿ ಆರೋಗ್ಯಪೂರ್ಣ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.
ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ. ರೋಹಿಣಿ, ಶ್ರೀ.ಕ್ಷೇ.ಧ.ಗ್ರಾ.ಯೋ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಲ್.ಎಚ್. ಮಂಜುನಾಥ್, ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಸತೀಶ್ ಹೊನ್ನವಳ್ಳಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ದೇವದಾಸ್ ಹೆಬ್ಟಾರ್, ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷೆ ಶಾರದಾ ರೈ ಉಪಸ್ಥಿತರಿದ್ದರು. ವಿವೇಕ್ ವಿ. ಪಾçಸ್ ಸ್ವಾಗತಿಸಿದರು. ವಿ. ರಾಮಸ್ವಾಮಿ ವಂದಿಸಿದರು. ಭಾಸ್ಕರ್ ಎನ್. ಮತ್ತು ನಾಗೇಶ್ ನಿರೂಪಿಸಿದರು.
ಸಮ್ಮಾನ, ಜಾಗೃತಿ ಅಣ್ಣ-ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ
- ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್ ಅವರನ್ನು ಸಮ್ಮಾನಿಸಲಾಯಿತು.
- ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ. ರೋಹಿಣಿ ಜನಜಾಗೃತಿ ವೇದಿಕೆಗೆ ಮದ್ಯವರ್ಜನ ಶಿಬಿರ ಆಯೋಜಿಸಲು 10 ಲಕ್ಷ ರೂ. ನೆರವು ನೀಡಿದರು.
- ಮದ್ಯವರ್ಜನ ಶಿಬಿರದಲ್ಲಿ ವ್ಯಸನ ಮುಕ್ತರಾಗಿ ನವಜೀವನ ನಡೆಸುತ್ತಿರುವ ಹುಣಸೂರಿನ ಕೃಷ್ಣೇಗೌಡ ಮತ್ತು ಮಂಡ್ಯದ ಸವಿತಾ ರುದ್ರಾಚಾರಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
- ಮದ್ಯ ವ್ಯಸನಿಗಳ ಮನಃಪರಿವರ್ತನೆ ಮಾಡಿ ವ್ಯಸನ ಮುಕ್ತರನ್ನಾಗಿ ಮಾಡಿದ 10 ಮಂದಿ ಸಾಧಕರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯ ಅನಂತ್ ರಚಿಸಿದ ಭಕ್ತಿಗೀತೆಯ ಧ್ವನಿಸುರುಳಿಯನ್ನು ಡಾ| ಹೆಗ್ಗಡೆ ಬಿಡುಗಡೆಗೊಳಿಸಿದರು.
- ಸಮಾವೇಶದಲ್ಲಿ 63 ತಾಲೂಕುಗಳ 3,037 ಮಂದಿ ನವಜೀವನ ಸದಸ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?
Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ
Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ
ಜನಾಭಿಪ್ರಾಯಕ್ಕೆ ಬೆಲೆ ಕೊಡದಿದ್ದರೆ ಪ್ರಜಾಪ್ರಭುತ್ವ ಉಳಿಯದು: ಜಗದೀಪ್ ಧನ್‌ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.