ಹ್ಯಾಟ್ರಿಕ್: ಫೆ.16ರಂದು ರಾಮಲೀಲಾ ಮೈದಾನದಲ್ಲಿ ಕೇಜ್ರಿವಾಲ್ ಪ್ರಮಾಣವಚನ ಸ್ವೀಕಾರ
ಆಮ್ ಆದ್ಮಿ ಪಕ್ಷದ ವರಿಷ್ಠ ಕೇಜ್ರಿವಾಲ್ ಪಕ್ಷದ ನೂತನ ಶಾಸಕರ ಜತೆ ಸಮಾಲೋಚನೆ ನಡೆಸಲಿದ್ದಾರೆ.
Team Udayavani, Feb 12, 2020, 12:26 PM IST
ನವದೆಹಲಿ:ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಿರುವ ಅರವಿಂದ್ ಕೇಜ್ರಿವಾಲ್ ಫೆ.16ರಂದು ಮುಖ್ಯಮಂತ್ರಿಯಾಗಿ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಇಂದು ಬೆಳಗ್ಗೆ ಕೇಜ್ರಿವಾಲ್ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು. ಪ್ರಮಾಣವಚನ ಸ್ವೀಕಾರ ಸಮಾರಂಭದ ಕುರಿತು ಮಾತುಕತೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.
ಪ್ರಮಾಣವಚನ ಸ್ವೀಕಾರ ಹಿನ್ನೆಲೆಯಲ್ಲಿ ಬುಧವಾರ ಆಮ್ ಆದ್ಮಿ ಪಕ್ಷದ ವರಿಷ್ಠ ಕೇಜ್ರಿವಾಲ್ ಪಕ್ಷದ ನೂತನ ಶಾಸಕರ ಜತೆ ಸಮಾಲೋಚನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ ಎಂದು ವರದಿ ತಿಳಿಸಿದೆ.
ಅರವಿಂದ್ ಕೇಜ್ರಿವಾಲ್ ಕೂಡಾ ಹಾಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ನೂತನವಾಗಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ಕೆ ಹಾದಿ ಸುಗಮಗೊಳಿಸಲಿದ್ದಾರೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.