ಮಾರ್ಚ್‌ ಅಂತ್ಯಕ್ಕೆ ಸಾರಿಗೆ ಇಲಾಖೆಗೆ 1,200 ಹೊಸ ಬಸ್‌: ಸವದಿ

ಕೇಂದ್ರದ ಯೋಜನೆಯಡಿ ತಿಂಗಳಲ್ಲಿ 400 ಎಲೆಕ್ಟ್ರಿಕ್‌ ಬಸ್‌ ಖರೀದಿ ಪ್ರಕ್ರಿಯೆ ಪೂರ್ಣ

Team Udayavani, Feb 12, 2020, 8:02 PM IST

savadi

ಬೆಂಗಳೂರು: ಮಾರ್ಚ್‌ ಅಂತ್ಯಕ್ಕೆ 1,200 ಹೊಸ ಬಸ್‌ಗಳು ಸಾರಿಗೆ ಇಲಾಖೆಗೆ ಪೂರೈಕೆಯಾಗಲಿವೆ. ಹಾಗೆಯೇ ಕೇಂದ್ರ ಸರಕಾರದ ಯೋಜನೆಯಡಿ 400 ಎಲೆಕ್ಟ್ರಿಕ್‌ ಬಸ್‌ಗಳ ಖರೀದಿಗೆ ಟೆಂಡರ್‌ ಪ್ರಕ್ರಿಯೆ ನಡೆದಿದೆ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಯಾಣಿಕರ ಅನುಕೂಲಕ್ಕಾಗಿ 3,000 ಹೊಸ ಬಸ್‌ ಖರೀದಿಸುವ ಗುರಿ ಇತ್ತು. ಆದರೆ ಕಂಪೆನಿಗಳು ಮಾರ್ಚ್‌ ಅಂತ್ಯದ ವೇಳೆಗೆ 1,200 ಬಸ್‌ಗಳನ್ನಷ್ಟೇ ಪೂರೈಸಲು ಸಾಧ್ಯವೆಂದು ತಿಳಿಸಿವೆ. ಆ ಹಿನ್ನೆಲೆಯಲ್ಲಿ ಮಾರ್ಚ್‌ ಅಂತ್ಯಕ್ಕೆ 1,200 ಹೊಸ ಬಸ್‌ಗಳು ಸೇರ್ಪಡೆಯಾಗಲಿವೆ ಎಂದು ತಿಳಿಸಿದರು.

ಎಲೆಕ್ಟ್ರಿಕ್‌ ಬಸ್‌ಗಳ ಬಳಕೆಗೆ ಹೆಚ್ಚು ಒತ್ತು ನೀಡಲಾಗಿದ್ದು, ಕೇಂದ್ರ ಸರಕಾರದ ಯೋಜನೆಯಡಿ 400 ಎಲೆಕ್ಟ್ರಿಕ್‌ ಬಸ್‌ಗಳನ್ನು ಖರೀದಿಸಲಾಗುವುದು. ಕೇಂದ್ರ ಸರಕಾರದ ಯೋಜನೆಯಡಿ ಸುಮಾರು 2 ಕೋ. ರೂ. ಮೊತ್ತದ ಎಲೆಕ್ಟ್ರಿಕ್‌ ಬಸ್‌ಗೆ ಕೇಂದ್ರ ಸರಕಾರ 55 ಲ. ರೂ. ಸಬ್ಸಿಡಿ ನೀಡಲಿದೆ. ಆ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್‌ ಬಸ್‌ ಖರೀದಿಗೆ ಟೆಂಡರ್‌ ಆಹ್ವಾನಿಸಲಾಗಿತ್ತು. ಆದರೆ ಒಂದೇ ಸಂಸ್ಥೆ ಪಾಲ್ಗೊಂಡಿದ್ದರಿಂದ ಟೆಂಡರ್‌ ರದ್ದುಪಡಿಸಲಾಯಿತು. ಈಗ ಹೊಸದಾಗಿ ಟೆಂಡರ್‌ ಆಹ್ವಾನಿಸಲಾಗಿದ್ದು, ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ನಾನಾ ಸಂಸ್ಥೆಗಳಿಂದ ಸ್ಪಂದನೆ
ಎಲೆಕ್ಟ್ರಿಕ್‌ ಬಸ್‌ ಸೇವೆ ಒದಗಿಸಲು ನಾನಾ ಕಂಪೆನಿಗಳು ಆಸಕ್ತಿ ತೋರಿವೆ. ಹಂಗೇರಿಯ ಕಂಪೆನಿಯೊಂದು ಎಲೆಕ್ಟ್ರಿಕ್‌ ಬಸ್‌ ಪೂರೈಸಿ, ನಿರ್ವಹಣೆಯನ್ನೂ ಮಾಡಲು ಮುಂದೆ ಬಂದಿದೆ. ಕಿ.ಮೀ. ಇಲ್ಲವೇ ದಿನದ ಆಧಾರದಲ್ಲಿ ಶುಲ್ಕ ಪಾವತಿ ಬಗ್ಗೆ ಚರ್ಚೆಯಾಗಬೇಕಿದೆ. ಒಟ್ಟಾರೆ ಸೇವೆಯಿಂದ ಗಳಿಸುವ ಲಾಭಾಂಶವನ್ನು ಸಂಸ್ಥೆ ಮತ್ತು ಸಾರಿಗೆ ಇಲಾಖೆಗೆ 60:40ರ ಅನುಪಾತದಲ್ಲಿ ಹಂಚಿಕೊಳ್ಳುವ ಬಗ್ಗೆ ಮಾತುಕತೆ ನಡೆದಿದೆ. ಆದರೆ ಯಾವುದೂ ಅಂತಿಮವಾಗಿಲ್ಲ ಎಂದು ತಿಳಿಸಿದರು.

ಮಧ್ಯವರ್ತಿಗಳ ವಂಚನೆ ಜಾಲಕ್ಕೆ ಬೀಳಬೇಡಿ
ಈಶಾನ್ಯ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ 2,800 ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬಂದಿ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದ್ದು, ಮೆರಿಟ್‌ ಆಧಾರದಲ್ಲೇ ನೇಮಕವಾಗಲಿದೆ. ಹಾಗಾಗಿ ಅಭ್ಯರ್ಥಿಗಳು ಮಧ್ಯವರ್ತಿಗಳ ವಂಚನೆ ಜಾಲಕ್ಕೆ ಬೀಳಬಾರದು ಎಂದು ಲಕ್ಷ್ಮಣ ಸವದಿ ಮನವಿ ಮಾಡಿದರು.

ವೋಲ್ವೋ ಬಸ್‌ಗಳಲ್ಲಿ ಸ್ವತ್ಛತೆ, ಗುಣಮಟ್ಟದ ಸೇವೆ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ವೋಲ್ವೋ ಬಸ್‌ ಖರೀದಿ ಪ್ರಮಾಣ ಕಡಿಮೆ ಮಾಡಲಾಗುತ್ತಿದೆ. 2 ಕೋ. ರೂ. ವೆಚ್ಚದಲ್ಲಿ ಖರೀದಿಸುವ ಬಸ್‌ನ ನಿರ್ವಹಣೆ ದುಬಾರಿಯಾಗಿದೆ. ಡೀಸೆಲ್‌ ಬಳಕೆ ಪ್ರಮಾಣವೂ ಹೆಚ್ಚಾಗಿದೆ. ಹಾಗಾಗಿ ಮಲ್ಟಿ ಆಕ್ಸೆಲ್‌ ಬಸ್‌ಗಳಿಗೆ ಆದ್ಯತೆ ನೀಡಲಾಗುತ್ತಿದೆ. ಬಸ್‌ ನಿಲ್ದಾಣಗಳಲ್ಲಿ ಚಾಲಕರು, ನಿರ್ವಾಹಕರ ವಿಶ್ರಾಂತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಸಂಬಂಧ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

1,500 ಕೋ.ರೂ. ಕೊರತೆ?
ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾರಿಗೆ ಇಲಾಖೆಯ ತೆರಿಗೆ ಆದಾಯದಲ್ಲಿ ಸುಮಾರು 1,500 ಕೋ. ರೂ. ಕೊರತೆಯಾಗುವ ನಿರೀಕ್ಷೆ ಇದೆ. ಕಳೆದ ಅಕ್ಟೋಬರ್‌, ನವೆಂಬರ್‌, ಡಿಸೆಂಬರ್‌ನಲ್ಲಿ ವಾಹನ ನೋಂದಣಿ ಕಡಿಮೆಯಿದ್ದ ಕಾರಣ ತೆರಿಗೆ ಆದಾಯ ಇಳಿಕೆಯಾಗಿತ್ತು. ಜನವರಿಯಿಂದ ವಾಹನ ನೋಂದಣಿ ಹೆಚ್ಚಾಗಿದ್ದು, ತೆರಿಗೆ ಆದಾಯವೂ ಸಂಗ್ರಹವಾಗುತ್ತಿದೆ. ಆದರೂ 2019-20ನೇ ಸಾಲಿನಲ್ಲಿ 7,100 ಕೋ. ರೂ. ತೆರಿಗೆ ಆದಾಯ ಸಂಗ್ರಹ ಗುರಿ ತಲುಪಲು ಕಷ್ಟಸಾಧ್ಯವಾಗಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.

ಟಾಪ್ ನ್ಯೂಸ್

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.