ಮಳೆ ನೀರು ಇಂಗಲು ಚೆಕ್‌ಡ್ಯಾಂ ಅಗತ್ಯ


Team Udayavani, Feb 13, 2020, 3:00 AM IST

male-neeru

ಮಧುಗಿರಿ: ಈ ಕ್ಷೇತ್ರದ ಋಣ ನನ್ನ ಮೇಲಿದ್ದು, ಮರುಭೂಮಿಯಾಗಲು ಎಂದು ಬಿಡಲ್ಲ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ಹೇಳಿದರು. ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಗುಂಡಗಲ್ಲು ಗ್ರಾಮದ ಕುಮದ್ವತಿ ನದಿಗೆ ಅಡ್ಡಲಾಗಿ 1 ಕೋಟಿ ವೆಚ್ಚದ ಸೇತುವೆ-ಚೆಕ್‌ಡ್ಯಾಂ, ಕಸಬಾ ಬಸವನಹಳ್ಳಿ ಬಳಿ 1 ಕೋಟಿ ವೆಚ್ಚದ ಚೆಕ್‌ಡ್ಯಾಂ, ಜಡೆಗೊಂಡನಹಳ್ಳಿ ಹಾಗೂ ಬನವೇನಹಳ್ಳಿ ಬಳಿ 1.5 ಕೋಟಿ ವೆಚ್ಚದ ಚೆಕ್‌ಡ್ಯಾಂ ಹಾಗೂ ಗಿರಿಯಮ್ಮನಪಾಳ್ಯದ ಬಳಿ 75 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

54 ಕೆರೆಗಳಿಗೆ ಎತ್ತಿನಹೊಳೆ ನೀರು: ಎತ್ತಿನಹೊಳೆ ಪೂರ್ಣವಾಗುವವರೆಗೆ ಮಳೆ ನೀರು ಇಂಗಲು ಚೆಕ್‌ಡ್ಯಾಂಗಳ ಅಗತ್ಯವಿದೆ. ಈಗಾಗಲೇ 20 ಕೋಟಿಗೂ ಹೆಚ್ಚಿನ ಕಾಮಗಾರಿಗೆ ಚಾಲನೆ ನೀಡಿದ್ದು, ಹಲವು ಪೂರ್ಣಗೊಂಡಿದೆ. ಈಗ ಹೆಚ್ಚುವರಿಯಾಗಿ ಮತ್ತೆ 10 ಕೋಟಿ ರೂ. ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ. ಇಲ್ಲಿ ನೀರಿಲ್ಲದೆ ಬೇಸಾಯ ಕಳೆಗುಂದಿದ್ದು, ಯುವಕರು ಉದ್ಯೋಗ ಅರಸಿ ಗುಳೆ ಹೋಗುತ್ತಿದ್ದಾರೆ.

ಇವರ ಸಂಕಷ್ಟದ ದಿನಗಳು ಮುಂದಿನ 2-3 ವರ್ಷದಲ್ಲಿ ಮರೆಯಾಗಲಿದ್ದು, ತಾಲೂಕಿಗೆ ಎತ್ತಿನಹೊಳೆ ನೀರು ಸುಮಾರು 54 ಕೆರೆಗಳಿಗೆ ಹರಿಯಲಿದೆ. ಇದಕ್ಕಾಗಿ ಈಗಾಗಲೇ ಸಂಬಂಧಿಸಿದ ಕೆರೆಗಳ ಅಭಿವೃದ್ಧಿಗೂ ಅಗತ್ಯ ಪ್ಯಾಕೇಜ್‌ ನೀಡಲು ಸರ್ಕಾರ ಘೋಷಿಸಿದ್ದು, ಇದರಿಂದ ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾಗಲಿದೆ. ಎತ್ತಿನಹೊಳೆ ಯೋಜನೆ 20 ಸಾವಿರ ಕೋಟಿ ವೆಚ್ಚದಲ್ಲಿ 7 ಜಿಲ್ಲೆಗಳ 400ಕ್ಕೂ ಹೆಚ್ಚು ಕೆರೆಗಳಿಗೆ ನೀರು ಒದಗಿಸಿ ಲಕ್ಷಾಂತರ ಹೆಕ್ಟೇರ್‌ ಭೂಮಿ ಹಸಿರುಗೊಳಿಸಲಿದೆ.

ಸರ್ಕಾರ ಮುತುವರ್ಜಿ ವಹಿಸಿ ಕಾಮಗಾರಿ ವೇಗಕ್ಕೆ ಆದ್ಯತೆ ನೀಡುತ್ತಿದೆ. ಇದರಿಂದ ತಾಲೂಕಿನಲ್ಲಿಯೂ ಕಾಮಗಾರಿ ಆರಂಭವಾಗುತ್ತಿದೆ ಎಂದು ಹೇಳಿದರು. ಭೂಮಿಯ ಆಳದಲ್ಲಿ ಯೋಜನೆಯ ಪೈಪು ಹಾದು ಹೋಗಲಿದ್ದು, ಮೇಲ್ಭಾಗದಲ್ಲಿ ಬೆಳೆ ಬೆಳೆಯಬಹುದು. ಇದಕ್ಕಾಗಿ ಸರ್ಕಾರ ಅಗತ್ಯ ಪರಿಹಾರ ನೀಡುತ್ತಿದೆ. ಈ ಯೋಜನೆಗೆ ರೈತರು ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸ್ಥಳೀಯ ಮುಖಂಡ ವೆಂಕಟಾಪುರ ಗೋವಿಂದರಾಜು ಮಾತನಾಡಿ, ಕಳೆದ ಅವಧಿಯಲ್ಲೇ ಕಾಮಗಾರಿಯ ಅಗತ್ಯತೆ ಹಿಂದಿನ ಶಾಸಕರಿಗೆ ಮನವರಿಕೆ ಮಾಡಿದ್ದರೂ ಸ್ಪಂದಿಸಿರಲಿಲ್ಲ. ಆದರೆ ಹಾಲಿ ಶಾಸಕರು 1.5 ಕೋಟಿ ವೆಚ್ಚದ 2 ಚೆಕ್‌ಡ್ಯಾಂ ಮತ್ತು ಗ್ರಾಮದ ಸಂಪರ್ಕ ರಸ್ತೆ ಕಾಮಗಾರಿಗೂ ಅನುದಾನ ನೀಡಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ ಎಂದರು.

ತಹಶೀಲ್ದಾರ್‌ ನಂದೀಶ್‌, ಮುಖಂಡರಾದ ತುಂಗೋಟಿ ರಾಮಣ್ಣ, ತಾಲೂಕು ಜೆಡಿಎಸ್‌ ಎಸ್ಸಿ,ಎಸ್ಟಿ ಘಟಕದ ಅಧ್ಯಕ್ಷ ಗುಂಡಗಲ್ಲು ಶಿವಣ್ಣ, ತಾಪಂ ಮಾಜಿ ಅಧ್ಯಕ್ಷ ಸುನಂದಾ, ಸಣ್ಣ ನೀರಾವರಿ ಇಲಾಖೆಯ ಎಇಇ ಪ್ರಸನ್ನ ಕುಮಾರ್‌, ಗುತ್ತಿಗೆದಾರ ವೀರಣ್ಣ, ಸ್ಥಳೀಯ ಮುಖಂಡರಾದ ಚೌಡಪ್ಪ, ಸತೀಶ್‌, ಹನುಮಂತೇಗೌಡ, ಕದರಪ್ಪ, ಶಿವಲಿಂಗಯ್ಯ, ರಂಗಣ್ಣ, ಕಿತ್ತಗಳಿ ಮಂಜಣ್ಣ ಸಿದ್ದೇಶ್‌, ನಾಗಭೂಷಣ್‌, ಪಕೋಡಿ ರಂಗನಾಥ್‌, ಬಜ್ಜಾ ರಘು, ನರಸಪ್ಪ ಇತರರು ಇದ್ದರು.

ಎತ್ತಿನಹೊಳೆ ನೀರು ಹರಿಯುವ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಅದಕ್ಕೆ ಜಲಸಂಗ್ರಹಾಗಾರ ಸದೃಢಗೊಳಿಸಬೇಕಿದೆ. ಅಲ್ಲದೆ ಯೋಜನೆಯ ಪೈಪುಗಳು ರೈತರ ನೆಲದ ಆಳದಲ್ಲಿ ಹಾದುಹೋಗಲಿದ್ದು, ಬೆಳೆ ಬೆಳೆಯಲು ಯಾವುದೇ ಅಡ್ಡಿ ಇರುವುದಿಲ್ಲ. ಜೊತೆಗೆ ಸೂಕ್ತ ಪರಿಹಾರ ಲಭಿಸಲಿದ್ದು, ಮಧುಗಿರಿಗೆ ಶಾಶ್ವತ ಬರಗಾಲ ತಪ್ಪಿಸಲು ಬರುತ್ತಿರುವ ಎತ್ತಿನಹೊಳೆ ಯೋಜನೆಗೆ ರೈತರು ಸಹಕಾರ ನೀಡಬೇಕು.
-ಎಂ.ವಿ.ವೀರಭದ್ರಯ್ಯ, ಶಾಸಕ

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.