ಮಹಿಳಾ ಕಾಲೇಜು ನಿರ್ಮಾಣಕ್ಕೆ ಗೌಡ ಸಮಾಜ ತೀವ್ರ ವಿರೋಧ: ಜಂಟಿ ನಿರ್ದೇಶಕರೊಂದಿಗೆ ಚರ್ಚೆ


Team Udayavani, Feb 13, 2020, 5:59 AM IST

Z-GOWDA-SAMAJA-1

ಮಡಿಕೇರಿ: ಜಿಲ್ಲಾ ಕೇಂದ್ರ ಮಡಿಕೇರಿಯ ಗೌಡ ಸಮಾಜದ ಪಕ್ಕದಲ್ಲೆ ಪ್ರಥಮ ದರ್ಜೆ ಮಹಿಳಾ ಕಾಲೇಜು ಸ್ಥಾಪನೆಗೆ ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದು, ಸ್ಥಳ ಪರಿಶೀಲನೆಗೆ ಆಗಮಿಸಿದ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಇದರ ಬಿಸಿ ತಟ್ಟಿತು.

ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಲಯದ ಜಂಟಿ ನಿರ್ದೇಶಕರಾದ ಡಾ| ಅಪ್ಪಾಜಿ ಗೌಡ ಅವರು ಸೋಮವಾರ ಮಧ್ಯಾಹ್ನ ಮಹಿಳಾ ಕಾಲೇಜು ನಿರ್ಮಾಣಕ್ಕೆ ಗುರುತಿಸಿದ ಜಾಗಕ್ಕೆ ಭೇಟಿ ನೀಡಿದ ಸಂದರ್ಭ, ಅಲ್ಲಿ ಅದಾಗಲೆ ನೆರೆದಿದ್ದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಸೇರಿದಂತೆ ಪದಾಧಿಕಾರಿಗಳು ಸೂಚಿತ ಸ್ಥಳದಲ್ಲಿ ಕಾಲೇಜು ನಿರ್ಮಾಣವಾದರೆ ಆಗಬಹುದಾದ ಸಮಸ್ಯೆಗಳ ಬಗ್ಗೆ ಅಧಿಕಾರಿಗೆ ಮನವರಿಕೆ ಮಾಡಿಕೊಟ್ಟರು.

ಸ್ಥಳಕ್ಕಾಗಮಿಸಿದ ಜಂಟಿ ನಿರ್ದೇಶಕ ಡಾ| ಅಪ್ಪಾಜಿ ಗೌಡ ಅವರ ಸಮ್ಮುಖದಲ್ಲೆ ಸಮತಟ್ಟು ಗೊಳಿಸಿರುವ ಕಾಲೇಜು ನಿರ್ಮಾಣದ ಜಾಗದ ವಿಸ್ತೀರ್ಣವನ್ನು ಪರಿಶೀಲಿಸಿದಾಗ ಒಂದು ಬದಿ 60 ಅಡಿ ಉದ್ದ ಮತ್ತು ಮತ್ತೂಂದು ಬದಿ 130 ಅಡಿ ಅಗಲವಿದ್ದು, ಒಟ್ಟಾಗಿ ಜಾಗ ಅಂದಾಜು 16 ಸೆಂಟ್‌ಗಳಷ್ಟೆ ಇರುವುದು ಪತ್ತೆಯಾಯಿತು. ಜಾಗದ ಎರಡೂ ಕಡೆಗಳಲ್ಲಿ ಅಗಲ ಕಿರಿದಾದ ರಸ್ತೆಗಳಿದ್ದು, ಅವುಗಳನ್ನು ವಿಸ್ತರಿಸಿದಲ್ಲಿ ಕಾಲೇಜು ನಿರ್ಮಾಣಕ್ಕೆ ಸೂಚಿಸಿದ ಜಾಗದ ವಿಸ್ತೀರ್ಣ 13 ಸೆಂಟ್‌ಗಳಿಗೆ ಕುಸಿಯುವ ಸಾಧ್ಯತೆ ಇದೆ.

ತೀವ್ರ ವಿರೋಧ
ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮತ್ತು ಪದಾಧಿಕಾರಿಗಳು ಜಂಟಿ ನಿರ್ದೇಶಕರೊಂದಿಗೆ ಮಾತನಾಡಿ, ಮಹಿಳಾ ಕಾಲೇಜಿಗೆ ಗುರುತಿಸಿರುವ ಜಾಗದ ಪಕ್ಕದಲ್ಲೇ ಗೌಡ ಸಮಾಜವಿದ್ದು, ವರ್ಷಪೂರ್ತಿ ವಿವಾಹ ಸೇರಿದಂತೆ ವಿವಿಧ ಸಮಾರಂಭಗಳು ನಡೆಯುತ್ತದೆ. ಇದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಲಿದೆ, ಮಹಿಳಾ ಕಾಲೇಜಿಗೆ ನಮ್ಮ ವಿರೋಧವಿಲ್ಲ. ಆದರೆ ಅದನ್ನು ನಿರ್ಮಿಸಲು ಆಯ್ಕೆ ಮಾಡಿಕೊಂಡಿರುವ ಜಾಗದ ಬಗ್ಗೆ ನಮ್ಮ ಆಕ್ಷೇಪವೆಂದು ಸ್ಪಷ್ಟಪಡಿಸಿದರು.

ಒಂದೊಮ್ಮೆ ಕಾಲೇಜು ನಿರ್ಮಾಣವಾದರೆ ಮುಂಬರುವ ದಿನಗಳಲ್ಲಿ ಕಾಲೆೇಜು ಸಮೀಪ ಸಮಾರಂಭಗಳು ನಡೆಯಬಾರದೆಂದು ನಿರ್ದೇಶನಗಳು ಬಂದಲ್ಲಿ ಗೌಡ ಸಮಾಜಗಳಲ್ಲಿ ನಡೆಯುವ ಗೌಡ ಸಮುದಾಯದ ವಿವಾಹ ಸಮಾರಂಭ, ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ನಡೆಸುವುದು ಅಸಾಧ್ಯವಾಗಬಹುದು. ಆದ್ದರಿಂದ ಕಾಲೇಜು ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಸೂರ್ತಲೆ ಸೋಮಣ್ಣ ತಿಳಿಸಿದರು.

ನಗರದ ಐಟಿಐ ಕಾಲೇಜು ಸಾಕಷ್ಟು ಜಾಗವನ್ನು ಹೊಂದಿದ್ದು, ಅಲ್ಲಿಯೂ ಮಹಿಳಾ ಕಾಲೇಜು ನಿರ್ಮಾಣ ಮಾಡಬಹುದಾಗಿದೆ, ಇಲ್ಲವೆ ಪ್ರಸ್ತುತ ಜಿ.ಪಂ, ನ್ಯಾಯಾಲಯದ ನೂತನ ಕಟ್ಟಡ ನಿರ್ಮಾಣ ಮಾಡಿರುವ ಪ್ರದೇಶದಲ್ಲು ಮಹಿಳಾ ಕಾಲೇಜು ನಿರ್ಮಾಣಕ್ಕೆ ಅವಕಾಶವಿದ್ದು, ಈ ಬಗ್ಗೆ ಗಮನ ಹರಿಸುವಂತೆ ಸಲಹೆ ನೀಡಿದರು.

ಒಕ್ಕೂಟದ ಆಕ್ಷೇಪಗಳನ್ನು ಆಲಿಸಿದ ಜಂಟಿ ನಿರ್ದೇಶಕರು, ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು. ಈ ಸಂದರ್ಭ ಅವರೊಂದಿಗೆ ಕಾಲೆೇಜು ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ಶ್ರೀನಿವಾಸಯ್ಯ, ಹಿರಿಯ ವ್ಯವಸ್ಥಾಪಕ ಸುಮುಖ್‌ ಆರ್ಯ, ಮಹಿಳಾ ಕಾಲೆೇಜು ಪ್ರಾಂಶುಪಾಲ ಜವರಪ್ಪ ಅವರು ಹಾಜರಿದ್ದರು.

ಮಡಿಕೇರಿಯ ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ ಕೊಡಗು ಗೌಡ ಮಹಿಳಾ ಒಕ್ಕೂಟದ ಸದಸ್ಯರು ಹಾಗೂ ನಗರಸಭಾ ಮಾಜಿ ಅಧ್ಯಕ್ಷರಾದ ಕೂಡಕಂಡಿ ಕಾವೇರಮ್ಮ ಸೋಮಣ್ಣ ಮಾತನಾಡಿದರು.

ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಹೊಸೂರು ರಮೇಶ್‌ ಜೋಯಪ್ಪ, ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಕೋರನ ಸಿ. ವಿಶ್ವನಾಥ್‌, ಕೊಡಗು ಗೌಡ ಸಮಾಜದ ಕಾರ್ಯದರ್ಶಿ ಕೋಡಿ ಚಂದ್ರಶೇಖರ್‌ ಹಾಗೂ ಪ್ರಮುಖರಾದ ಕೆ.ಡಿ. ದಯಾನಂದ, ಪೊನ್ನಚ್ಚನ ಮಧು, ದಂಬೆಕೋಡಿ ಹರೀಶ್‌, ಬೈತಡ್ಕ ಜಾನಕಿ, ಕೊಡಗು ಗೌಡ ಯುವ ವೇದಿಕೆ ಪದಾಧಿಕಾರಿಗಳು ಸೇರಿದಂತೆ ಗೌಡ ಸಮಾಜದ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.