ಉದ್ಯೋಗ ಖಾತ್ರಿ ಕಾಮಗಾರಿ ಆರಂಭಕ್ಕೆ ಒತ್ತಾಯ
ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ
Team Udayavani, Feb 13, 2020, 10:47 AM IST
ಆಳಂದ: ತಾಲೂಕಿನ ಗ್ರಾಪಂಗಳಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ಆರಂಭಿಸಿ ಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಬಸವರಾಜ ಎಸ್. ಕೊರಳ್ಳಿ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಪಂ ಕಚೇರಿ ಎದುರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕಾರ್ಮಿಕರು, ಕೂಡಲೇ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಮಗಾರಿ ಆರಂಭಿಸಿ, ಕೆಲಸ ನೀಡಿ ಬದುಕಿಗೆ ಆಶ್ರಯ ಒದಗಿಸಬೇಕು ಎಂದು ಮನವಿ ಮಾಡಿದರು.
ಬಸವರಾಜ ಕೋರಳ್ಳಿ ಮಾತನಾಡಿ, ಪ್ರಸ್ತುತ ಕೃಷಿ ಚಟುವಟಿಕೆ ಮುಗಿದ್ದಿದ್ದರಿಂದ ಕಾರ್ಮಿಕರಿಗೆ ಕೆಲಸವಿಲ್ಲದೇ ದುಡಿಯಲು ವಲಸೆ ಹೋಗುವಂತಾಗಿದೆ. ಸಂಬಂಧಿತ ಅಧಿಕಾರಿಗಳಿಗೆ ಕಾಮಗಾರಿ ಆರಂಭಿಸಿ ಕಾರ್ಮಿಕರಿಗೆ ಅನುಕೂಲ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಸ್ಥಳಕ್ಕೆ ಆಗಮಿಸಿದ ತಾಪಂ ಇಒ ಡಾ| ಸಂಜಯ ರೆಡ್ಡಿ ಮನವಿ ಸ್ವೀಕರಿಸಿ, ಈ ಕುರಿತು ಸಂಬಂಧಿತ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿ, ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಮೇಲೆ ಪ್ರತಿಭಟನೆ ಹಿಂಪಡೆಯಲಾಯಿತು. ಸಂಘಟನೆ ಉಪಾಧ್ಯಕ್ಷ ಗುರು ಬಂಗರಗಿ, ನಾಗರಾಜ ಘೋಡಕೆ, ರವಿ ಪಟ್ಟಣಶೆಟ್ಟಿ, ದೇವಾ ನಟರಾಜ ಸಾಲೇಗಾಂವ, ಶರಣಪ್ಪ ಕುಂಬಾರ, ಯಲ್ಲಪ್ಪ ಸೇರಿದಂತೆ ಕಾರ್ಮಿಕರು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.