ಮುಂದಿನ ಎರಡು ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕ: ಗೃಹ ಸಚಿವ ಬೊಮ್ಮಾಯಿ
Team Udayavani, Feb 13, 2020, 1:10 PM IST
ಕೊಪ್ಪಳ: ಮುಂದಿನ ಎರಡು ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಈ ವರ್ಷ ಆರು ಸಾವಿರ ನೇಮಕ ಮಾಡಿ ಮುಂದಿನ ವರ್ಷ ಉಳಿದದ್ದು ನೇಮಕಾತಿ ಮಾಡಿಕೊಳ್ಳಲು ಕ್ರಮ ವಹಿಸಲಾಗುವುದು. ಠಾಣೆಗೆ ಬರುವ ಜನರೊಂದಿಗೆ ಬೆರೆತು ಸಮಸ್ಯೆ ಬಗೆ ಹರಿಸಲು ಜನ ಸ್ನೇಹಿ ಪೊಲೀಸ್ ಕಾರ್ಯಕ್ರಮವನ್ನು ಈ ಬಾರಿಯ ಬಜೆಟ್ ನಲ್ಲಿ ಪ್ರಸ್ತಾಪಕ್ಕೆ ಬರಲಿದೆ. ಪೊಲೀಸರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೊಪ್ಪಳದ ಡಿಆರ್ ನೇಮಕಾತಿ ಸಮಸ್ಯೆಯಾಗಿದೆ. ಅದು ನನ್ನ ಗಮನಕ್ಕೂ ಬಂದಿದೆ. ಪೈಲ್ ಗೆ ಅದಕ್ಕೆ ಉತ್ತರ ಬರೆದಿದ್ದು ಅದೂ ಸಹಿತ ಶೀಘ್ರ ಬಗೆಹರಿಸಲಾಗುವು ಎಂದರು.
ಕೊಪ್ಪಳದಲ್ಲಿ ಮರಳು ದಂಧೆ, ಇಸ್ಪೀಟು ಆಟದ ಕುರಿತು ನನಗೂ ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರ ಪ್ರಗತಿ ಪರಿಶೀಲನೆ ನಡೆಸಲಿದ್ದೇನೆ. ಅದನ್ನೂ ಮೀರಿಯೂ ಅಕ್ರಮದಲ್ಲಿ ತೊಡಗಿದರೆ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಕೊಪ್ಪಳದ ಬಾಂಗ್ಲಾ ವಲಸಿಗರ ಕುರಿತಂತೆ ಅವರು ಏಲ್ಲಿ ಕೆಲಸ ಸಿಗುತ್ತೋ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಭಾಗದ ಕೈಗಾರಿಕೆಯಲ್ಲಿ ಕೆಲಸ ಮಾಡಲು ಬಂದಿದ್ದಾರೆ. ಇಲ್ಲಿ ಬಂದಿರುವ ಜನರ ಬಗ್ಗೆ ಆಯಾ ಪೊಲೀಸ ಠಾಣೆಯಲ್ಲಿ ಮಾಹಿತಿ ಸಂಗ್ರಹ ಮಾಡಲಾಗುವುದು ಎಂದರು.
ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಕುರಿತು ಈಗಾಗಲೆ ಸಿಎಂ ಯಡಿಯೂರಪ್ಪ ಅವರು ಹಲವು ಸಭೆ ನಡೆಸಿದ್ದಾರೆ. ಕೃಷ್ಣಾ ಯೋಜನೆಗೆ ಹೆಚ್ಚಿನ ಒತ್ತು ನೀಡುವಂತೆ ಸಿಎಂ ಅವರು ಹೇಳಿದ್ದಾರೆ. ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳೆ ಅವರು ಖಾತೆಯ ಹೊಣೆ ಹೊತ್ತಿದ್ದಾರೆ. ಈ ಭಾಗದ ನೀರಾವರಿಗೆ ಒತ್ತು ನೀಡಲಾಗುವುದು ಎಂದರಲ್ಲದೆ ಬಸವರಾಜ ರಾಯರಡ್ಡಿ ಅವರು ಈಗ ಕೃಷ್ಣಾ ಯೋಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಅವರದ್ದೇ ಸರ್ಕಾರ 6 ವರ್ಷ ಅಧಿಕಾರದಲ್ಲಿತ್ತಲ್ಲ. ಆಗೊಂದು ಮಾತು, ಈಗೊಂದು ಅವರಿಂದ ಬರುತ್ತಿದೆ. ಅವರಲ್ಲಿಯೇ ದ್ವಂದ್ವ ಮಾತುಗಳು ಬರುತ್ತಿವೆ ಎಂದರು.
ಇನ್ನು ಗಂಗಾವತಿ ತಾಲೂಕಿನ ಬಳಿ 24 ಕೋಟಿ ವೆಚ್ಚದಲ್ಲಿ ನವಲು ಜಲಾಶಯದ ಡಿಪಿಆರ್ ಕೈಗೊಳ್ಳಲು ಸಿಎಂ ಅವರು ಆದೇಶ ಮಾಡಿದ್ದಾರೆ ಎಂದರು.
ಹೊಸಪೇಟೆ ಬಳಿ ಸಚಿವರ ಪುತ್ರನ ಕಾರು ಅಪಘಾತ ಪ್ರಕರಣದಲ್ಲಿ ಅವರ ಪುತ್ರನನ್ನ ಪೊಲೀಸ್ ಇಲಾಖೆ ಸೇಫ್ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡಲಿದ್ದೇನೆ. ಅಲ್ಲಿ ಏನಾಗಿದೆ ಎನ್ನುವುದು ನನ್ನ ಗಮನಕ್ಕೆ ಬಂದಿಲ್ಲ. ಅಧಿಕಾರಿಗಳಿಂದ ಮಾಹಿತಿ ಪಡೆದು ನಾನು ಪ್ರತಿಕ್ರಿಯೆ ನೀಡಲಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.