ಕುಷ್ಠರೋಗ ನಿರ್ಮೂಲನೆಗೆ ಜಿಲ್ಲಾಧಿಕಾರಿ ಸೂಚನೆ


Team Udayavani, Feb 13, 2020, 6:05 PM IST

13-February-25

ವಿಜಯಪುರ: ಜಿಲ್ಲೆಯಲ್ಲಿ ಕುಷ್ಠರೋಗ ಹರಡುವ ಸೂಕ್ಷ್ಮ ಸ್ಥಳಗಳ ಬಗ್ಗೆ ನಿಗಾ ಇಡುವ ಜೊತೆಗೆ ಸಂಶಯಾಸ್ಪದ ರೋಗಿಗಳನ್ನು ಗುರುತಿಸಿ ಸೂಕ್ತ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬುಧವಾರ ನರಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ಕುಷ್ಠರೋಗ ಹರಡುವ ಸೂಕ್ಷ್ಮ ಸ್ಥಳಗಳ ಬಗ್ಗೆ ನಿಗಾ ಇಡಬೇಕು. ಕುಷ್ಠರೋಗ ಖಾತ್ರಿ ಪಡಿಸಿದ ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸುವುದರ ಜೊತೆಗೆ ಈ ರೋಗದ ಲಕ್ಷಣ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕುಷ್ಠರೋಗ ನಿರ್ಮೂಲನೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾಸ್ತಾವಿಕ ಮಾತನಾಡಿದ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ| ಸಂಪತಕುಮಾರ ಗುಣಾರೆ, ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು, ತ್ವಚೆ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು ಕುಷ್ಠ ರೋಗದ ಲಕ್ಷಣಗಳಾಗಿವೆ. ಲೆಪ್ರಾ ಪ್ರತಿಕ್ರಿಯೆ ಇವುಗಳಲ್ಲಿ ಯಾವುದೇ ಚಿಹ್ನೆಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ನಿರ್ಮೂಲನೆಗೆ ಜಿಲ್ಲಾಡಳಿತ ಅನೇಕ ಕಾರ್ಯಕ್ರಮ ಕೈಗೊಂಡಿದೆ. ವ್ಯಕ್ತಿ ದೇಹದ ಮೇಲೆ ಯಾವುದೆ ಬಾಗದಲ್ಲಿ ತಿಳಿ-ಬಿಳಿ ಅಥವಾ ತಾಮ್ರ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡು ಬಂದಲ್ಲಿ ಆರೋಗ್ಯ ಸಹಾಯಕ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಸ್ಥಳಿಯ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು.

ಕುಷ್ಠರೋಗವು ಸಂಪೂರ್ಣ ಗುಣಮುಖ ಹೊಂದುವ ಕಾಯಿಲೆಯಾಗಿದ್ದು, ಬಹುವಿಧ ಔಷ ಧ ಚಿಕಿತ್ಸೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ. ಕುಷ್ಠರೋಗಕ್ಕೆ ಅಂಡಿಕೊಂಡಿರುವ ಕಳಂಕ ಹಾಗೂ ತಾರತಮ್ಯ ಹೋಗಲಾಡಿಸಿ ಕುಷ್ಠರೋಗಿಗಳಿಗೆ ಗೌರವಯುತವಾಗಿ ಬದುಕಲು ಅವಕಾಶ ನೀಡೋಣ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಮಹೇಂದ್ರ ಕಾಪ್ಸೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.