ಶಿಲಾನ್ಯಾಸ ನಡೆದು 5 ವರ್ಷ; ಈಡೇರದ ಬೇಡಿಕೆ

ಇನ್ನೂ ಆಗದ ಸಂಕಲಕರಿಯ -ಪೊಸ್ರಾಲು ದೇಗುಲ ರಸ್ತೆ ಕಾಮಗಾರಿ

Team Udayavani, Feb 14, 2020, 5:29 AM IST

1202BELMAN4NEW

ಶಿಲಾನ್ಯಾಸ ನಡೆದು ಬರೋಬ್ಬರಿ 5 ವರ್ಷಗಳೇ ಸಂದರೂ ರಸ್ತೆಯೊಂದು ಅಪೂರ್ಣವಾಗಿಯೇ ಉಳಿದು ಹೋಗಿರುವುದು ವಿಷಾದದ ಸಂಗತಿ.

ಬೆಳ್ಮಣ್‌: ಮುಂಡ್ಕೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಂಕಲಕರಿಯ -ಪೊಸ್ರಾಲು ದೇಗುಲ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನಡೆದು ಬರೋಬ್ಬರಿ 5 ವರ್ಷಗಳೇ ಸಂದರೂ ಈವರೆಗೂ ಕಾಮಗಾರಿ ಅಪೂರ್ಣವಾಗಿ ಉಳಿದಿದೆ. ಸಂಕಲಕರಿಯದಿಂದ ಐತಿಹಾಸಿಕ ಪೊಸ್ರಾಲು ಶ್ರೀ ಮಹಾಲಿಂಗೇಶ್ವರ ದೇಗುಲಕ್ಕೆ ಈ ಉದ್ದೇಶಿತ ರಸ್ತೆ ಬಹಳ ಹತ್ತಿರವಾಗಿದೆ. ಇಲ್ಲವಾದಲ್ಲಿ 10ರಿಂದ 15 ಕಿ.ಮೀ. ಸುತ್ತಿ ಬಳಸಿ ಹೋಗಬೇಕಾದ ಅನಿವಾರ್ಯ ಇದೆ. ಈ ಕಾರಣಕ್ಕೆ ಪಂಚಾಯತ್‌ ರಸ್ತೆ ನಿರ್ಮಾಣಕ್ಕೆ ಮುಂದಾಗಿತ್ತು. ಹಿಂದಿನ ಪಂಚಾಯತ್‌ ಅಧ್ಯಕ್ಷರ ಕಾಲಾವಧಿಯಲ್ಲಿ ಯೋಜನೆ ರೂಪಿಸಲಾಗಿತ್ತು. 1 ಲಕ್ಷ ರೂ. ಅನುದಾನದಿಂದ ಎರಡು ಮೋರಿಗಳೊಂದಿಗೆ ಕಚ್ಚಾ ರಸ್ತೆ ನಿರ್ಮಿಸಲಾಗಿತ್ತು.

ಜನ ಜಮೀನು ಬಿಟ್ಟು ಕೊಟ್ಟಿದ್ದರು
ಹೊಸ ರಸ್ತೆಗಾಗಿ ಕಲ್ಲಾಡಿ, ಉಗ್ಗೆದಬೆಟ್ಟು, ಪೆರ್ಗೊಟ್ಟು, ಪೇರುಗುತ್ತು, ಪೊಸ್ರಾಲು ಭಾಗದ ಜನ ತಮ್ಮ ಭೂಮಿಯ ಪಕ್ಕದಲ್ಲಿ ದೇಗುಲಕ್ಕೊಂದು ರಸ್ತೆ ನಿರ್ಮಾಣವಾಗುತ್ತದೆ ಎಂಬ ಆಶಯದಿಂದ ಸ್ವಯಂಇಚ್ಛೆಯಿಂದ ಜಮೀನು ಬಿಟ್ಟು ಕೊಟ್ಟಿದ್ದರು.

ಶಾಸಕರಿಂದ ಶಿಲಾನ್ಯಾಸ ನಡೆದಿತ್ತು
ಅಂದು ಶಾಸಕ ವಿ.ಸುನಿಲ್‌ ಕುಮಾರ್‌ ಈ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದರು. ಜಮೀನು ಬಿಟ್ಟು ಕೊಟ್ಟಿದ್ದ ದಾನಿಗಳನ್ನು ಶಾಸಕರೇ ಸ್ವಯಂ ಗೌರವಿಸಿದ್ದರು. ಪಂಚಾಯತ್‌ ಸದಸ್ಯರೂ, ಗಣ್ಯರೂ ಅಂದಿನ ಕಾರ್ಯಕ್ರಮಕ್ಕೆ ಸಾಕ್ಷಿಗಳಾಗಿದ್ದರು. ಬಳಿಕ ಶಾಸಕರ ಮುತುವರ್ಜಿಯಲ್ಲಿ ಗ್ರಾಮ ಸಡಕ್‌ನಲ್ಲಿ 1 ಕೋಟಿ ರೂ. ಗಳ ಅನುದಾನ ಮಂಜೂರಾಗಿದ್ದರೂ ಜನಸಂಖ್ಯೆಯ ಕೊರತೆಯ ಕಾರಣದಿಂದ ಆ ಅನುದಾನ ಹಿಂದೆ ಹೋಗಿತ್ತು. ಇದೀಗ ಈ ರಸ್ತೆ ನಿರ್ಮಾಣದ ಬಗ್ಗೆ ಮತ್ತೆ ಭರವಸೆ ಇಡಲಾಗಿದೆ. ಶಾಸಕರು ಮತ್ತೆ ಈ ರಸ್ತೆಗೆ ಅನುದಾನ ತರಬೇಕು ಎನ್ನುವುದು ಜನರ ಆಶಯವಾಗಿದೆ.

ಕಿರು ಸೇತುವೆ ಬೇಕಾಗಿದೆ
ಪೆರ್ಗೊಟ್ಟು ಬಳಿ ನೀರಿನ ಒರತೆ ಇರುವ ಗದ್ದೆಗಳನ್ನು ಎತ್ತರ ಪಡಿಸುವುದರ ಜತೆ ಕಾಲುವೆಗೆ ಕಿರು ಸೇತುವೆಯ ಅಗತ್ಯವೂ ಇದ್ದು ಈ ರಸ್ತೆಗೆ ಹಿಂದಿನ ಅಂದಾಜು ಪಟ್ಟಿ ಪ್ರಕಾರ 1 ಕೋಟಿ ರೂ. ಗೂ ಮಿಕ್ಕಿ ಆರ್ಥಿಕ ಸಂಪನ್ಮೂಲದ ಅಗತ್ಯ ಇದೆ.

ಇಚ್ಛಾ ಶಕ್ತಿ ಬೇಕು
ರಸ್ತೆ ಕಾಮಗಾರಿ ಶುರುವಾಗಲು ಪಂಚಾಯತ್‌ ಆಡಳಿತ ಮತ್ತೆ ಶ್ರಮಿಸಬೇಕಾಗಿದ್ದು, ಇದರಿಂದ ಗ್ರಾಮಸ್ಥರು ಸುತ್ತು ಬಳಸಿ ಪ್ರಯಾಣಿಸುವ ಪ್ರಮೇಯ ತಪ್ಪಲಿದೆ. ಇದಕ್ಕಾಗಿ ಊರವರು, ಪಂಚಾಯತ್‌ ಸದಸ್ಯರು ಒಟ್ಟಾಗಿ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಬಲವಾದ ಆಗ್ರಹ ವ್ಯಕ್ತಪಡಿಸುವುದನ್ನು ಮಾಡಬೇಕಿದೆ.

ಮೂಡುಬಿದಿರೆಗೂ ಹತ್ತಿರವಾಗಲಿದೆ
ಈ ರಸ್ತೆ ನಿರ್ಮಾಣಗೊಂಡರೆ ಸಂಕಲಕರಿಯದಿಂದ ಮೂಡುಬಿದಿರೆಗೂ ಬಲು ಹತ್ತಿರವಾಗಲಿದೆ. ಈ ರಸ್ತೆಯ ಮೂಲಕ ಸಾಗಿದರೆ ಮುಕ್ಕಡಪ್ಪು ಮಾರ್ಗವಾಗಿ ಕಡಂದಲೆಗೆ ಸಂಧಿಸುವ ಉತ್ತಮ ರಸ್ತೆ ಸಂಪರ್ಕವೂ ಇದೆ.

ಸಹಕಾರ ಕೇಳಲಾಗುವುದು
ಪಂಚಾಯತ್‌ನಿಂದ ಇಷ್ಟು ದೊಡ್ಡ ಮೊತ್ತದ ಅನುದಾನ ಹೊಂದಿಸಲು ಅಸಾಧ್ಯವಾದ್ದರಿಂದ ಶಾಸಕರ ಸಹಿತ ಇತರ ಜನಪ್ರತಿನಿಧಿಗಳ ಸಹಕಾರ ಕೇಳಲಾಗುವುದು.
-ಶುಭಾ ಪಿ. ಶೆಟ್ಟಿ,
ಅಧ್ಯಕ್ಷರು, ಮುಂಡ್ಕೂರು ಗ್ರಾಮ ಪಂಚಾಯತ್‌

ತೊಡಕು ನಿವಾರಣೆ
ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಸದಾ ಸಹಕಾರ ಇದೆ. ಇರುವ ತೊಡಕುಗಳನ್ನು ನಿವಾರಿಸಿ ಕಾಮಗಾರಿ ನಡೆಸಲಾಗುವುದು.
-ವಿ.ಸುನಿಲ್‌ ಕುಮಾರ್‌,
ಶಾಸಕರು

ಪ್ರಯತ್ನ ಪ್ರಗತಿಯಲ್ಲಿ
ಈ ರಸ್ತೆಯ ಬಗ್ಗೆ ಸ್ಥಳೀಯರ ಆಗ್ರಹ ಹೆಚ್ಚಿತ್ತು. ಸ್ವಯಂಪ್ರೇರಿತರಾಗಿ ಜಮೀನು ಬಿಟ್ಟು ಕೊಟ್ಟಿದ್ದರು. ರಸ್ತೆ ನಿರ್ಮಿಸಲು ಒಂದು ಕೋಟಿ ರೂ. ಗೂ ಮಿಕ್ಕಿ ಅನುದಾನದ ಅಗತ್ಯ ಇದೆ. ಪ್ರಯತ್ನ ಪ್ರಗತಿಯಲ್ಲಿದೆ.
-ಸತ್ಯಶಂಕರ ಶೆಟ್ಟಿ,ಮಾಜಿ ಅಧ್ಯಕ್ಷರು,
ಮುಂಡ್ಕೂರು ಗ್ರಾಮ ಪಂಚಾಯತ್‌

ಕಾರ್ಯಪ್ರವೃತ್ತರಾಗಲಿ
ಸಾರ್ವಜನಿಕರಿಗೆ ಅನುಕೂಲದ ದೃಷ್ಟಿಯಿಂದ ಜನ ಜಾಗ ಬಿಟ್ಟುಕೊಟ್ಟಿದ್ದಾರೆ. ಈ ರಸ್ತೆ ನಿರ್ಮಾಣಗೊಂಡರೆ ಕಿನ್ನಿಗೋಳಿ ಕಡೆಯಿಂದ ದೇಗುಲಕ್ಕೆ ಬರುವವರಿಗೆ ಭಾರೀ ಹತ್ತಿರವಾಗಲಿದೆ. ಜನಪ್ರತಿನಿಧಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕಾಗಿದೆ.
-ರವೀಂದ್ರ ಶೆಟ್ಟಿ ಬಾಳೆಬಾಕಿಮಾರು,ಸ್ಥಳೀಯರು

-ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

11(1

Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

7(1

Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌

Udupi–Kanchi

Udupi: ಶ್ರೀಕೃಷ್ಣ ಮಠಕ್ಕೆ ನ.20ರಂದು ಕಾಂಚಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಆಗಮನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.