![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 13, 2020, 11:26 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಾವೇರಿ: ಇಲ್ಲಿನ ಹಿರೆಕೇರೂರು ತಾಲೂಕಿನ ಚಿಕ್ಕಬೂದಿಹಾಳ ಗ್ರಾಮದ ಬಳಿ ಇಂದು ರಾತ್ರಿ ಕಾರೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲುಗೊಂಡಿದ್ದಾರೆ.
ಮೃತಪಟ್ಟವರನ್ನು ಕಾರ್ತಿಕ್ ಈಳಗೇರ್ (26), ಮತ್ತು ಪವನ್ ಬೊಗಾವಿ (26) ಎಂದು ಗುರುತಿಸಲಾಗಿದೆ. ಸಂತೋಷ ರಾಗಿಕೊಪ್ಪ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಇವರೆಲ್ಲರೂ ತಾಲೂಕಿನ ಹಂಸಭಾವಿ ಗ್ರಾಮದ ನಿವಾಸಿಗಳಾಗಿದ್ದಾರೆ.
ಈ ನತದೃಷ್ಟ ಕಾರು ರಾಣೇಬೆನ್ನೂರಿನಿಂದ ಹಂಸಭಾವಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಅಪಘಾತಕ್ಕೆ ಸಂಬಂಧಿಸಿದಂತೆ ಹಂಸಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲುಗೊಂಡಿದೆ.
You seem to have an Ad Blocker on.
To continue reading, please turn it off or whitelist Udayavani.