ಬಿಎಸ್‌ವೈ ಸಂಪುಟ: ಮುಗಿದಿಲ್ಲ ಖಾತೆ ಕ್ಯಾತೆ ;  ಖಾತೆ ಬದಲಾವಣೆಗೆ ಹೊಸ ಸಚಿವರ ಪಟ್ಟು

ಆಗದು ಎಂದಿರುವ ವರಿಷ್ಠರು

Team Udayavani, Feb 14, 2020, 10:08 AM IST

BSY-730

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿ, ರಾತೋರಾತ್ರಿ ಬದಲಾವಣೆಯಾಗಿದ್ದರೂ ಇನ್ನೂ ಕೆಲವು ಸಚಿವರ ಅಸಮಾಧಾನ ಶಮನವಾಗಿಲ್ಲ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು ಮತ್ತೆ ಬದಲಾವಣೆಗೆ ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ.

ಆರಂಭದಲ್ಲಿ ಆಹಾರ ಖಾತೆ ಪಡೆದಿದ್ದ ಆನಂದ್‌ ಸಿಂಗ್‌ ರಾತೋರಾತ್ರಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿ ಅರಣ್ಯ ಖಾತೆ ಹಂಚಿಕೆ ಮಾಡಿಸಿಕೊಂಡರು. ಈಗ ಅರಣ್ಯ ನಿಯಮ ಉಲ್ಲಂಘನೆ ಪ್ರಕರಣಗಳು ಅವರ ಮೇಲಿರುವ ಬಗ್ಗೆ ಸಾರ್ವತ್ರಿಕವಾಗಿ ಚರ್ಚೆ ಆಗುತ್ತಿರುವ ಹಿನ್ನೆಲೆಯಲ್ಲಿ ಖಾತೆ ಬದಲಾವಣೆ ಮಾಡಿಸಿಕೊಳ್ಳಲು ಮತ್ತೆ ತೆರೆಮರೆಯಲ್ಲೇ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದರೆ ಸದ್ಯ ಯಾವುದೇ ಸಚಿವರ ಖಾತೆ ಯಲ್ಲೂ ಬದಲಾವಣೆ ಮಾಡುವುದಿಲ್ಲ. ನೀಡಿರುವ ಖಾತೆಯನ್ನೇ ಚೆನ್ನಾಗಿ ನಿಭಾಯಿಸಿ ಎಂಬ ಸ್ಪಷ್ಟ ಸಂದೇಶವನ್ನು ಸಿಎಂ ಯಡಿಯೂರಪ್ಪ ನೂತನ ಸಚಿವರಿಗೆ ರವಾನಿಸಿದ್ದಾರೆ. ಈ ಎಲ್ಲ ಘಟನಾವಳಿಗಳನ್ನು ಬಿಜೆಪಿ ಹೈಕಮಾಂಡ್‌ ಸೂಕ್ಷ್ಮವಾಗಿ ಪರಿಗಣಿಸುತ್ತಿದೆ ಎಂದು ತಿಳಿದುಬಂದಿದೆ.

ನೂತನ ಸಚಿವರಿಗೆ ಹಂಚಿಕೆ ಮಾಡಿರುವ ಖಾತೆಯಲ್ಲಿ ಈಗಾಗಲೇ ಬದಲಾವಣೆ ಮಾಡಲಾಗಿದೆ. ಇದರಿಂದಾಗಿ ಮೂಲ ಬಿಜೆಪಿಗರಲ್ಲಿ ಸ್ವಲ್ಪ ಮಟ್ಟಿನ ಸಮಾಧಾನವೂ ಉಂಟಾಗಿದೆ. ಈಗ ಮತ್ತೆ ಖಾತೆ ಬದಲಾವಣೆ ಮಾಡಿದಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುವುದಲ್ಲದೆ ಮೂಲ ಬಿಜೆಪಿಗರ ವಿಶ್ವಾಸವನ್ನು ಕಳೆದುಕೊಳ್ಳುವ ಅಪಾಯ ಇರುವುದರಿಂದ ಮುಂದಿನ ಸಂಪುಟ ವಿಸ್ತರಣೆಯವರೆಗೂ ಯಾವುದೇ ಬದಲಾವಣೆ ಇಲ್ಲ ಎಂಬ ಸಂದೇಶವನ್ನು ನೂತನ ಸಚಿವರಿಗೆ ರವಾನಿಸಲಾಗಿದೆ.

ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರಲ್ಲಿ ಡಾ| ಸುಧಾಕರ್‌, ಎಸ್‌.ಟಿ. ಸೋಮಶೇಖರ್‌ ಮತ್ತು ಬಿ.ಸಿ. ಪಾಟೀಲ್‌ ಮೊದಲಾದವರಿಗೆ ವಿಕಾಸಸೌಧದಲ್ಲಿ ಕಚೇರಿ ನೀಡಿದ್ದು, ಸಚಿವರಾಗಿ ಕಾರ್ಯಾರಂಭಿಸಿದ್ದಾರೆ. ಇನ್ನು ಕೆ. ಗೋಪಾಲಯ್ಯ ಮೊದಲಾದ ಸಚಿವರು ಗುರುವಾರ ವಿಧಾನಸೌಧದಲ್ಲಿ ತಮ್ಮ ಕಚೇರಿ ಉದ್ಘಾಟನೆ ಮಾಡಿ ಕಾರ್ಯಾರಂಭಿಸಿದ್ದಾರೆ.

ಕೊಠಡಿಗೆ ಪಟ್ಟು
ನೂತನ ಸಚಿವರಲ್ಲಿ ಕೆಲವರು ಖಾತೆಗಾಗಿ ಪಟ್ಟು ಹಿಡಿದಿದ್ದು ಮಾತ್ರವಲ್ಲದೆ, ವಿಧಾನ ಸೌಧದಲ್ಲೇ ಕೊಠಡಿ ಬೇಕು ಎಂದೂ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಮುಖ್ಯಮಂತ್ರಿಯವರು ಕೆಲವರಿಗೆ ವಿಕಾಸಸೌಧದಲ್ಲಿ ಹಂಚಿಕೆ ಮಾಡಿ, ಆ ವಿಚಾರದಲ್ಲಿ ಯಾವುದೇ ರೀತಿಯ ಅಸಮಾಧಾನ ಹೊಗೆಯಾಡದಂತೆ ಎಚ್ಚರ ವಹಿಸಿದ್ದಾರೆ. ಖಾತೆ ಹಂಚಿಕೆ ಅಥವಾ ಕೊಠಡಿ ಹಂಚಿಕೆ ಬಗ್ಗೆ ಯಾವುದೇ ಅಸಮಾಧಾನಗಳಿದ್ದರೂ ಬಹಿರಂಗ ವಾಗಿ ಹೇಳಿಕೆ ನೀಡದಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.