ಹುಬ್ಬಳ್ಳಿಯಲ್ಲಿ ಇನ್ ವೆಸ್ಟ್ ಕರ್ನಾಟಕ ಸಮಾವೇಶ ಆರಂಭ: ಹಲವು ಉದ್ದಿಮೆದಾರರು ಭಾಗಿ
Team Udayavani, Feb 14, 2020, 11:59 AM IST
ಹುಬ್ಬಳ್ಳಿ: ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ದಿಮೆಗಳ ಸ್ಥಾಪನೆಯ ಬಹುನಿರೀಕ್ಷಿತ ಇನ್ ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ ನಗರದ ಡೆನಿಸನ್ಸ್ ಹೋಟೆಲ್ ಸಭಾಂಗಣದಲ್ಲಿ ಪ್ರಾರಂಭವಾಯಿತು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ ಪ್ರಾಸ್ತಾವಿಕವಾಗಿ ಮಾತನಾಡಿ, ಹದಿನೈದು ವರ್ಷಗಳ ಹಿಂದೆ ಧಾರವಾಡದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ತಮಗೆ ಉತ್ತರ ಕರ್ನಾಟಕದ ಭೌಗೋಳಿಕ, ಸಾಮಾಜಿಕ, ಆರ್ಥಿಕ ಪರಿಚಯವಿದೆ. ಈ ಭಾಗದ ಅಭಿವೃದ್ಧಿ ನಮ್ಮೆಲ್ಲರ ಕನಸಾಗಿದೆ. ಇನ್ ವೆಸ್ಟ್ ಕರ್ನಾಟಕ ಸಮಾವೇಶ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವುದು ಹೊಸ ಭರವಸೆ ಹುಟ್ಟಿಸಿದೆ ಎಂದರು.
ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕಿ ಗುಂಜನ್ ಕೃಷ್ಣ ಅವರು ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ಹುಬ್ಬಳ್ಳಿ ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳ ಪರಿಚಯ ಮಾಡಿಕೊಟ್ಟರು.
ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ, ಬೃಹತ್ , ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಸೇರಿದಂತೆ ಪ್ರಮುಖ ಉದ್ದಿಮೆದಾರರು, ಕಂಪೆನಿಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ
ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನಲ್ಲಿ ಇನ್ ವೆಸ್ಟ್ ಕರ್ನಾಟಕ ಸಮಾವೇಶ
ಬರುವ ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನಲ್ಲಿ ಇನ್ ವೆಸ್ಟ್ ಕರ್ನಾಟಕ ಸಮಾವೇಶ ನಡೆಯಲಿದೆ ಎಂಬ ಮಾಹಿತಿಯನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರು ಎಲ್ ಸಿ ಡಿ ಪರದೆಯ ಮೂಲಕ ಅಧಿಕೃತವಾಗಿ ಅನಾವರಣಗೊಳಿಸಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಕೈಗಾರಿಕೆ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.