25 ಬ್ಲಾಕ್ ಸ್ಪಾಟ್‌ಗಳಲ್ಲಿ 20 ಆ್ಯಂಬುಲೆನ್ಸ್ ವ್ಯವಸ್ಥೆ
Team Udayavani, Feb 14, 2020, 2:01 PM IST
ಮಂಡ್ಯ: ಜಿಲ್ಲಾದ್ಯಂತ ಈಗಾಗಲೇ ಹೆಚ್ಚು ಅಪಘಾತ ಸಂಭವಿಸುವ 25 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಸ್ಥಳದಲ್ಲಿಯೇ 15ರಿಂದ 20 ಆ್ಯಂಬುಲೆನ್ಸ್ (108) ವ್ಯವಸ್ಥೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ, ಲೋಕೋ ಪಯೋಗಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕಟೇಶ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತ, ಮಹಾವೀರ ವೃತ್ತ ಮತ್ತು ಸಕ್ಕರೆ ಕಾರ್ಖಾನೆ ವೃತ್ತಗಳನ್ನು ಈಗಾಗಲೇ ಸಮಿತಿಯಲ್ಲಿ ಬ್ಲಾಕ್ ಸ್ಪಾಟ್‌ಗಳೆಂದು ನಿರ್ಣಯಿಸಲಾಗಿದೆ. ಈ ಸ್ಥಳಗಳಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಸ್ಪತ್ರೆ, ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಗಳಲ್ಲಿ ಸಾರ್ವಜನಿಕರು ರಸ್ತೆ ದಾಟಲು ಅನುಕೂಲವಾಗುವಂತೆ ಮೇಲ್ಸೇತುವೆ(ಸ್ಕೈವಾಕ್) ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.
ಅಪ್ರಾಪ್ತರಿಗೆ ವಾಹನ ಕೊಟ್ಟರೆ ಕ್ರಮ: ಅಪ್ರಾಪ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳು ವಾಹನ ಬಳಸದಂತೆ ಅರಿವು ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕರು ಅಥವಾ ಪ್ರಾಂಶುಪಾಲರು ಕ್ರಮ ವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ, ಅಪ್ರಾಪ್ತರಿಗೆ ವಾಹನ ಚಲಾಯಿಸಲು ಪೋಷಕರು ಅಥವಾ ವಾಹನ ಮಾಲೀಕರು ಅವಕಾಶ ನೀಡಿದ್ದಲ್ಲಿ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಪುರುಷೋತ್ತಮ್, ಅಬಕಾರಿ ಉಪ ಆಯುಕ್ತರು ಬಿ.ಶಿವಪ್ರಸಾದ್, ಕಾರ್ಮಿಕ ಅಧಿಕಾರಿ ಹೆಚ್.ಆರ್. ನಾಗೇಂದ್ರ, ಸಹಾಯಕ ಎಂಜಿನಿಯರ್ ಪಿಡಬ್ಲ್ಯುಡಿಇಲಾಖೆಯ ಪಿ.ರವಿ ಹಾಗೂ ಡಿಡಿಪಿಯು ಜಿ.ಆರ್ ಗೀತಾ ಮತ್ತು ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.