ನಿರ್ಭಯಾ ಪ್ರಕರಣ: ವಿಚಾರಣೆ ಸಂದರ್ಭದಲ್ಲೇ ನ್ಯಾಯಾಧೀಶೆ ಅಸ್ವಸ್ಥ
Team Udayavani, Feb 14, 2020, 5:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ದಿನಾಂಕ ನಿಗದಿಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಮನವಿಯ ಮೇಲಿನ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶೆ ಆರ್. ಭಾನುಮತಿ ಅವರಿಗೆ ನ್ಯಾಯಾಲಯದಲ್ಲೇ ಪ್ರಜ್ಞೆ ತಪ್ಪಿದ ಘಟನೆ ವರದಿಯಾಗಿದೆ.
ಬಳಿಕ ತಕ್ಷಣವೇ ಸಾವರಿಸಿಕೊಂಡ ನ್ಯಾಯಾಧೀಶೆಯವರನ್ನು ಗಾಲಿ ಕುರ್ಚಿಯ ಮೂಲಕ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ಯಲಾಯಿತು ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ನಿರ್ಭಯಾ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತುಗೊಂಡು ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೆ ಏರಿಸಲು ಅನುಮತಿ ನೀಡಬೇಕೆಂದು ಕೆಂದ್ರ ಸರಕಾರ ಸಲ್ಲಿಸಿದ್ದ ಮನವಿ ಅರ್ಜಿಯ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ನಾಲ್ವರು ಅಪರಾಧಿಗಳಲ್ಲಿ ಒಬ್ಬನನ್ನು ಹೊರತುಪಡಿಸಿ ಉಳಿದವರೆಲ್ಲರಿಗಿದ್ದ ಕಾನೂನು ಮಾರ್ಗಗಳು ಮುಚ್ಚಿರುವುದರಿಂದ ಅವರನ್ನು ಗಲ್ಲಿಗೇರಿಸಲು ಅನುವು ಮಾಡಿಕೊಡಬೇಕು ಎಂದು ಕೇಂದ್ರದ ಪರ ವಕೀಲರು ವಾದ ಮಂಡಿಸಿದರು. ಮತ್ತು ಕಾನೂನು ಮಾರ್ಗಗಳ ಬಳಸಿಕೊಳ್ಳಲು ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ನೀಡಿದ್ದ ಒಂದುವಾರದ ಗಡುವೂ ಸಹ ಇದೀಗ ಮುಗಿದಿರುವುದರಿಂದ ಮೂವರನ್ನು ಗಲ್ಲಿಗೇರಿಸಲು ಹೊಸ ಡೆತ್ ವಾರಂಟ್ ಹೊರಡಿಸುವಂತೆ ಕೆಂದ್ರ ಸುಪ್ರೀಂಕೋರ್ಟಿನಲ್ಲಿ ಮನವಿ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
ED: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಫ್ಲ್ಯಾಟ್ ಇ.ಡಿ.ವಶಕ್ಕೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.