17ರಿಂದ ವಿಧಾನಮಂಡಲ ಅಧಿವೇಶನ
Team Udayavani, Feb 15, 2020, 3:05 AM IST
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಫೆ.17ರಿಂದ 20ರವರೆಗೆ ಹಾಗೂ ಮಾ.2ರಿಂದ 31ರವರೆಗೆ ಒಟ್ಟು 25 ದಿನ ವಿಧಾನಸಭೆ ಕಲಾಪ ನಡೆಯಲಿದೆ. ಮಾ.2, 3ರಂದು ಸಂವಿಧಾನದ ಆಶಯ ಕುರಿತು ವಿಶೇಷ ಚರ್ಚೆ ನಡೆಯಲಿದೆ. ಮಾ.5ಕ್ಕೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ.
ಸೂಚನಾ ನಿರ್ಣಯ: ವಿಧಾನ ಸೌಧದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಫೆ.17ರಿಂದ 20ರವರೆಗೆ ವಿಧಾನ ಮಂಡಲ ಜಂಟಿ ಅಧಿವೇಶನ ಹಾಗೂ ಮಾ.2ರಿಂದ 31ರವರೆಗೆ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಒಟ್ಟು 25 ದಿನ ಕಲಾಪ ನಡೆಯಲಿದೆ. ಫೆ.17ರ ಬೆಳಗ್ಗೆ 11ಕ್ಕೆ ರಾಜ್ಯಪಾಲರು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಅದೇ ದಿನ ಕಲಾಪ ಮುಂದುವರಿದು ನಿಕಟ ಪೂರ್ವ ಅಧಿವೇಶನದ ತರುವಾಯ ನಿಧನರಾದ ಗಣ್ಯ ರಿಗೆ ಸಂತಾಪ ಸೂಚನಾ ನಿರ್ಣಯ ಕೈಗೊಳ್ಳಲಾಗುವುದು. ಫೆ.20ರವರೆಗೆ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಸ್ವೀಕಾರದ ಬಗ್ಗೆ ಚರ್ಚೆ ನಡೆಯಲಿದೆ. ಮಾ. 4ರಿಂದ ಮಾ. 31ರವರೆಗೆ ಪ್ರಶ್ನೋತ್ತರಕ್ಕೆ ದಿನ ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದರು.
ಚರ್ಚೆ ನಡೆಸುವ ಉದ್ದೇಶ: ಸಂವಿಧಾನದ ಆಶಯ ಕುರಿತು ಮಾ. 2, 3ರಂದು ವಿಶೇಷ ಚರ್ಚೆ ನಡೆಸಲು ನಿರ್ಧರಿಸಲಾಗಿದೆ. ನಮ್ಮ ಸಂವಿಧಾನಕ್ಕೆ 1949ರ ನ.26ರಂದು ಒಪ್ಪಿಗೆ ನೀಡಲಾಗಿದ್ದು, 1950ರ ಜ.26ರಿಂದ ಜಾರಿಯಾಗಿದೆ. ಹೀಗಾಗಿ ಸಂವಿಧಾನಕ್ಕೆ ಒಪ್ಪಿಗೆ ನೀಡಿ 70 ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ವಿಶೇಷ ಚರ್ಚೆಗೆ ಅವಕಾಶ ನೀಡಲಾಗಿದೆ. ಸಂವಿಧಾನದ ಆಶಯ, ವಿಶೇಷತೆ, ಮುಖ್ಯಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಮನವಿ ಮಾಡಲಾಗಿದೆ: ವಿಶೇಷ ಚರ್ಚೆ ಸಂದರ್ಭದಲ್ಲಿ ರಾಜಕೀಯೇತರವಾಗಿ ಚರ್ಚೆಯಾಗುವಂತೆ ಎಚ್ಚರ ವಹಿಸಲಾಗುವುದು. ಸಂವಿಧಾನದ ವಿಶೇಷತೆ, ರಚನಾ ಸಮಿತಿ ಆಶಯ, ಅನುಷ್ಠಾನದಲ್ಲಿ ಜನಪ್ರತಿನಿಧಿಗಳ ಪಾತ್ರದ ಬಗ್ಗೆ ಹೆಚ್ಚು ಚರ್ಚೆಗೆ ಅವಕಾಶ ನೀಡಲಾಗುವುದು. ಸಂವಿಧಾನದ ಮೂಲ ಆಶಯದ ಬಗ್ಗೆ ಹೆಚ್ಚು ಮನನ ಮಾಡಲು ಪ್ರಯತ್ನಿಸಲಾಗುವುದು. ಎಲ್ಲ ಜನಪ್ರತಿನಿಧಿಗಳು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು. ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಉಪಸ್ಥಿತರಿದ್ದರು.
ಮಂಡನೆಗೆ ಬಾಕಿಯಿರುವ ವಿಧೇಯಕಗಳು
* ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ, 2020
* ಕರ್ನಾಟಕ ನಾವೀನ್ಯತಾ ಪ್ರಾಧಿಕಾರ ವಿಧೇಯಕ, 2020
* ಭಾರತ ರಾಷ್ಟ್ರೀಯ ಕಾನೂನು ವಿದ್ಯಾಲಯ (ತಿದ್ದುಪಡಿ) ವಿಧೇಯಕ, 2020
* ಕರ್ನಾಟಕ ರಾಜಭಾಷಾ (ತಿದ್ದುಪಡಿ) ವಿಧೇಯಕ, 2020
* ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2020
* ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ, 2020, ಪರ್ಯಾಲೋಚನೆ, ಅಂಗೀಕಾರಕ್ಕೆ ಬಾಕಿ ಇರುವ ವಿಧೇಯಕ
* ಕರ್ನಾಟಕ ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕ, 2018.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.