ರಾಜ್ಯಮಟ್ಟದ ಯುವಜನ ಮೇಳಕ್ಕೆ ಚಾಲನೆ


Team Udayavani, Feb 15, 2020, 2:21 PM IST

gadaga-tdy-2

ಗಜೇಂದ್ರಗಡ: ಯುವ ಶಕ್ತಿಯಿಂದ ಸಾಮಾಜಿಕ ಬದಲಾವಣೆ ಆಗಬೇಕಾದರೆ ಯುವಜನ ಮೇಳಗಳ  ಪಾತ್ರ ಮುಖ್ಯ. ಈ ನಿಟ್ಟಿನಲ್ಲಿ ಆಧುನಿಕತೆ ಜತೆಗೆ ಪಾರಂಪರಿಕ ಸಂಸ್ಕೃತಿ ಉಳಿಸಿ, ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದ ಎಪಿಎಂಸಿ ಎದುರಿನ ಬಯಲು ಜಾಗದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಪಂ, ಪುರಸಭೆ ಹಾಗೂ ರಾಜ್ಯ ಯುವ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸಂಜೆ ನಡೆದ ರಾಜ್ಯಮಟ್ಟದ ಯುವಜನ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವಜನ ಮೇಳ ಎಂಬುದು ಯುವಕರ ಒಗ್ಗೂಡುವಿಕೆಯ ಕಾರ್ಯಕ್ರಮ. ದೇಶದ ಅಖಂಡತೆ, ಸಾಮರಸ್ಯ ಉಳಿಸುವ ಹೊಣೆ ಸಮಾಜಕ್ಕಿದೆ. ಹಿರಿಯರಿಂದ ಮಾತ್ರ ಇದನ್ನು ಮುಂದುವರಿಸುವುದು ಕಷ್ಟಸಾಧ್ಯ. ಯುವಕರ ಮೇಲೆ ದೇಶದ ಜವಾಬ್ದಾರಿಯಿದೆ. ಸಾಂಸ್ಕೃತಿಕವಾಗಿ ನಮ್ಮ ದೇಶ ಬಹಳಷ್ಟು ಮುಂದಿದೆ. ಪ್ರತಿಭೆಗಳು ಪ್ರಕಾಶಿಸುವ ನಿಟ್ಟಿನಲ್ಲಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಈ  ಶಿಗ್ಗಾವಿಯಲ್ಲಿ ಜನಪದ ವಿವಿ ತೆರೆದಿದೆ. ಅಲ್ಲಿ ಪ್ರತಿ ವರ್ಷ 600ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾರ್ಜನೆ ಪಡೆಯುತ್ತಿದ್ದಾರೆ ಎಂದರು.

ಜನಪದ ವ್ಯವಸ್ಥಿತ ಭಾಷೆಯಲ್ಲ. ಬದಲಾಗಿ ಒಬ್ಬರಿಂದ ಮತ್ತೂಬ್ಬರ ಬಾಯಿಗೆ ಬರುವುದರ ಜತೆಗೆ ಎಲ್ಲಿಯವರೆಗೆ ಮನುಕುಲ ಇರುತ್ತದೆಯೋ ಅಲ್ಲಿಯವರೆಗೆ ಜನಪದ ಉಳಿಯಲಿದೆ. ಮನುಷ್ಯರ ಭಾವನೆ, ಅಂತರಾಳದಲ್ಲಿ ಜನಪದ ಅಡಗಿದೆ. ಇಂತಹ ಮಹತ್ತರವಾದ ಜನಪದವನ್ನು ಯುವ ಸಮೂಹದಲ್ಲಿ ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.

ಕೌಶಲ ಭರಿತವಾದ ಯುವಕರು ದೇಶದ ಶಕ್ತಿ. ಯುವಕರಿಗೆ ಸೂಕ್ತ ಮಾರ್ಗ ದರ್ಶನ ಮಾಡಿದರೆ, ದೇಶ ಬಲಿಷ್ಠ ಶಕ್ತಿ ಪಡೆದುಕೊಳ್ಳುತ್ತದೆ. ಯುವಜನರ ಕ್ರಿಯಾ ಶೀಲತೆ, ಆಸಕ್ತಿ ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿದೆ. ಇದರ ಸದುಪಯೋಗವಾಗಲು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಲ್ಲಿನ ಬುದ್ಧಿಶಕ್ತಿ ಅದ್ಭುತವಾಗಿದೆ. ಅದನ್ನುಬಳಸಿಕೊಳ್ಳಬೇಕಿದೆ. ಜನಪದ ಕಲೆ, ಸಂಸ್ಕೃತಿ ಬೆಳೆಸುವುದು ಮತ್ತು ಅವುಗಳಿಗೆ ಉತ್ತೇಜನ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ಮಾತನಾಡಿ, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಪಸರಿಸುವ ನಿಟ್ಟಿನಲ್ಲಿ ಯುವಜನ ಮೇಳ ಅತ್ಯಂತ ಪರಿಣಾಮಕಾರಿಯಾದ ಕಾರ್ಯಕ್ರಮವಾಗಿದೆ. ಗ್ರಾಮೀಣ ಪ್ರದೇಶದಲ್ಲಿನ ವಿಭಿನ್ನ ಮತ್ತು ವೈಶಿಷ್ಟತೆಗಳನ್ನು ಹೊಂದಿರುವ ಯುವ ಪ್ರತಿಭೆಗಳನ್ನು ನಾಡಿಗೆ ಪರಿಚಯಿಸುವ ಕೆಲಸ ಯುವ ಸಬಲೀಕರಣ ಇಲಾಖೆ ಮಾಡುತ್ತಿದೆ. ಸಮಾಜದಲ್ಲಿ ಮತ್ತು ನಾಡಿನಲ್ಲಿ ಭಾವೈಕ್ಯತೆಯಿಂದ ಬದುಕಲು ಯುವಜನ ಮೇಳ ಪೂರಕ. ಈ ಮೇಳವು ಯುವ ಜಾಗೃತಿ ಮತ್ತು ಸ್ಫೂರ್ತಿಯಾಗಲಿ ಎಂದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ದೇಶದ ಶಕ್ತಿಯಾಗಿರುವ ಯುವ ಸಮೂಹವನ್ನು ಸರಿಯಾದ ಮಾರ್ಗದೆಡೆಗೆ ಕೊಂಡೊಯ್ಯುವ ಕೆಲಸ ಸಮಾಜದ್ದಾಗಿದೆ. ಸರ್ಕಾರ ಯುವಕರನ್ನು ಪ್ರೇರೇಪಿಸುವ ಜತೆಗೆ ಅವರಲ್ಲಿನ ನಾಡಾಭಿಮಾನ ಹೊರತರಲು ಹಲವಾರು ಕಾರ್ಯಕ್ರಮ ಜಾರಿಗೆ ತರುತ್ತಿದೆ. ಬಹುಪಾಲು ಯುವ ಸಮೂಹ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುವ ಮೂಲಕ ನಾಡಿನ ಹಿರಿಮೆಯ ಪರಂಪರೆ ಮರೆಯುತ್ತಿರುವುದು ವಿಷಾದನೀಯ. ಜೀವನ ಸಿನಿಮೀಯವಾಗಬಾರದು. ಯುವಕರು ಅವಕಾಶ ವನ್ನು ಸರಿಯಾಗಿ ಸದ್ವಿನಿಯೋಗ ಪಡಿಸಿದಾಗ ಗುರಿ ಮುಟ್ಟಲು ಸಾಧ್ಯ. ಅವಕಾಶಗಳನ್ನು ಉಪಯೋ ಗಿಸಲು ಮತ್ತು ಸೂಕ್ತ ವಿಷಯಗಳಲ್ಲಿ ಆಸಕ್ತಿ ಬೆಳೆಸಲು ಹಿರಿಯರು ಮಾರ್ಗದರ್ಶನ ಮಾಡಬೇಕು. ಆಗ ಸಮಾಜ ಬಲಿಷ್ಠವಾಗುತ್ತದೆ ಎಂದರು.

ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವಜನ ಮೇಳದ ಮಾಹಿತಿ ಕಿರು ಹೊತ್ತಿಗೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು. ಬಳಿಕ ಸಿಡಿಮದ್ದು ಸಿಡಿಸುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ| ಕಲ್ಪನಾ ಜಿ, ವಿಪ ಸದಸ್ಯ ಎಸ್‌.ವಿ. ಸಂಕನೂರ, ಜಿಪಂ ಅಧ್ಯಕ್ಷ ಸಿದ್ದಲಿಂಗೇಶ್ವರ ಪಾಟೀಲ, ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚಾರ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಪಂ ಸದಸ್ಯೆ ಮಂಜುಳಾ ಹುಲ್ಲಣ್ಣವರ, ರಾಜ್ಯ ಯುವ ಸಂಘಗಳ ಒಕ್ಕೂಟ ಅಧ್ಯಕ್ಷ ಡಾ| ಎಸ್‌. ಬಾಲಾಜಿ, ತಾ.ಪಂ ಅಧ್ಯಕ್ಷೆ ಪ್ರೇಮವ್ವ ನಾಯಕ, ಉಪಾಧ್ಯಕ್ಷೆ ಇಂದಿರಾ ತೇಲಿ, ಡಾ| ಬಿ.ವಿ. ಕಂಬಳಾಳ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಎನ್‌., ಯತೀಶ, ಬಿ.ಬಿ. ವಿಶ್ವನಾಥ, ಎನ್‌. ರುದ್ರೇಶ, ಸಂಯುಕ್ತಾ ಬಂಡಿ, ಬಿ.ಎಂ. ಸಜ್ಜನರ, ರವಿ ಬಿದರೂರ, ಮುತ್ತು ಕಡಗದ, ಭಾಸ್ಕರ ರಾಯಬಾಗಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Dina Bhavishya

Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.