ವಿದ್ಯುತ್‌ ಸ್ಥಾವರ ಕಾಮಗಾರಿಗೆ ಬ್ರೇಕ್‌

ಖೊಟ್ಟಿ ದಾಖಲೆ ಸೃಷ್ಟಿಸಿ ಭೂಸ್ವಾಧೀನ: ಆರೋಪಮೂರು ಗಂಟೆ ಕಾಲ ರೈತರ ಪ್ರತಿಭಟನೆ

Team Udayavani, Feb 16, 2020, 1:02 PM IST

16-February-8

ಮುದ್ದೇಬಿಹಾಳ: ರೈತರ ಪ್ರತಿಭಟನೆ, ತಹಶೀಲ್ದಾರ್‌ ಮತ್ತು ಪೊಲೀಸ್‌ ಅಧಿಕಾರಿಗಳ ಮಧ್ಯಸ್ಥಿಕೆಗೆ ಮಣಿದ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಕೆಬಿಜೆಎನ್ನೆಲ್‌ ಅಧಿಕಾರಿಗಳು ವಿವಾದಿತ ಜಮೀನಿನಲ್ಲಿ ನಡೆಸುತ್ತಿದ್ದ ಪೀರಾಪುರ-ಬೂದಿಹಾಳ ಏತ ನೀರಾವರಿ ಯೋಜನೆಯ ವಿದ್ಯುತ್‌ ಸ್ಥಾವರ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸ್ಪಂದಿಸಿದ ಘಟನೆ ಶನಿವಾರ ತಾಲೂಕಿನ ಗಡಿಭಾಗ ನಾರಾಯಣಪುರ ಚಕ್‌ಪೋಸ್ಟ್‌ ಬಳಿ ನಡೆದಿದೆ.

ನಾಗಬೇನಾಳ ತಾಂಡಾದ ಸರ್ವೇ ನಂ. 84ರಲ್ಲಿರುವ ಜಮೀನಿನಲ್ಲಿ ಕಾಮಗಾರಿಗಾಗಿ ಭೂಮಿ ಸಮತಟ್ಟು ಮಾಡುವ ಕೆಲಸಕ್ಕೆ ಯುಕೆಪಿಯವರು ಚಾಲನೆ ನೀಡಿದ್ದರು. ಈ ಜಮೀನು ಯಮನಪ್ಪ ಲಮಾಣಿ, ಸೋಮಪ್ಪ ಲಮಾಣಿ, ನಾಗಪ್ಪ ಲಮಾಣಿ, ಮಲ್ಲಿಕಾರ್ಜುನ ಲಮಾಣಿ ಎನ್ನುವವರಿಗೆ ಸೇರಿದ್ದು ಯುಕೆಪಿಯವರು ಖೊಟ್ಟಿ ದಾಖಲೆ ಸೃಷ್ಟಿಸಿ ಯೋಜನೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ನೊಂದ ರೈತರಿಗೆ ನ್ಯಾಯ ಒದಗಿಸಲು ಆ ರೈತ ಕುಟುಂಬಗಳೊಂದಿಗೆ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಚಕ್‌ಪೋಸ್ಟ್‌ ಬಳಿ ಇರುವ ನಾರಾಯಣಪುರ ಎಡದಂಡೆ ಕಾಲುವೆ ಪಕ್ಕದ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು.

ರೈತರನ್ನುದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಬಿರಾದಾರ ವಕೀಲರು, 1972ರ ಭೂಸ್ವಾ ಧೀನ ಕಾಯ್ದೆ ಅನ್ವಯ ಮಣ್ಣು ತೆಗೆಯಲು 16 ಗುಂಟೆ ಜಮೀನನ್ನು ಸ್ವಾಧೀನ ಮಾಡಿಕೊಳ್ಳಲಾಯಿತು. ನಂತರ 24.10 ಎಕರೆ ಜಮೀನು ಹೇಗೆ ಭೂಸ್ವಾ ಧೀನ ಆಯಿತು? 1981ರಲ್ಲಿ ಬದಲಾದ ಭೂಕಾಯ್ದೆ ಊಳುವವನೇ ಭೂಒಡೆಯ ಅನ್ವಯ ಆ ಜಮೀನನ್ನು ಭೂನ್ಯಾಯ ಮಂಡಳಿಯಲ್ಲಿ ರೈತ ತುಳಜಪ್ಪನ ಹೆಸರಲ್ಲಿ ಮಂಜೂರು ಮಾಡಿ
ಫಾರ್ಮ್ 10 ಸೃಜಿಸಿ, 2024 ರೂ. ಪಟ್ಟಿನ ಹಣವನ್ನು ತುಂಬಿಸಿಕೊಳ್ಳಲಾಗಿತ್ತು. ಆದರೆ 1997ರ ನಂತರ ಆ ಜಮೀನಿಗೆ ಸಂಬಂಧಿಸಿದ ಸರ್ಕಾರಿ ದಾಖಲೆಗಳಲ್ಲಿ ಯುಕೆಪಿ ಹೆಸರು ಸೇರ್ಪಡೆ ಮಾಡಲಾಯಿತು. ಇದು ಅನ್ಯಾಯಕ್ಕೆ ಹಿಡಿದ ಕನ್ನಡಿ. ಯುಕೆಪಿಯವರು ರೈತನ ಜಮೀನನ್ನು ಲಪಟಾಯಿಸುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಜೆಡಿಎಸ್‌ ಧುರೀಣ ಪಾವಡೆಪ್ಪಗೌಡ ಹವಾಲ್ದಾರ್‌ ಮಾತನಾಡಿ, 1972ರಲ್ಲಿ ಭೂಸ್ವಾಧೀನಕ್ಕೊಳಗಾದ ಜಮೀನನ್ನು 1997ರಲ್ಲಿ ಯುಕೆಪಿಯವರು ತಮ್ಮ
ಹೆಸರಿಗೆ ಮಾಡಿಕೊಂಡಿದ್ದಾಗಿ ಹೇಳುತ್ತಾರೆ. 27 ವರ್ಷ ಏಕೆ ಸುಮ್ಮನಿದ್ದರು? ಕಾಲುವೆಗೆ ಬಳಸಲು ಮಣ್ಣು ಬೇಕು ಎಂದು ಜಮೀನನ್ನು ಪಡೆದು ಈಗ ಅದನ್ನು ವಿದ್ಯುತ್‌ ಸ್ಥಾವರಕ್ಕೆ ಬಳಕೆ ಮಾಡುವ ಹುನ್ನಾರ ಸರಿಯೇ? ರೈತರು ಸರ್ಕಾರಿ ಗೋಮಾಳ ಜಾಗ ನುಂಗಿಲ್ಲ. ಇವರ ಜಮೀನನ್ನು ಕಾನೂನು ಬಾಹಿರವಾಗಿ ವಶಪಡಿಸಿಕೊಳ್ಳಲು ಮುಂದಾಗಿರುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಬಿಜೆಎನ್ನೆಲ್‌ನ ದೇವರಹಿಪ್ಪರಗಿ ಕಚೇರಿ ಅಧಿಕಾರಿ ಸುರೇಶ ಲಮಾಣಿ ಮಾತನಾಡಿ, 1972ರಲ್ಲಿ ಭೂಸ್ವಾಧೀನ ಮಾಡಿಕೊಂಡ ಜಮೀನನ್ನು ಯುಕೆಪಿಯ ನೀರಾವರಿ ಯೋಜನೆಗೆ ಬಳಸಿಕೊಳ್ಳಲು ಸರ್ಕಾರವೇ ಆದೇಶ ಮಾಡಿದ್ದರಿಂದ ಸಾವಿರಾರು ರೈತರ ಉಪಯೋಗಕ್ಕೋಸ್ಕರ ಕೆಲಸ ಮಾಡಲಾಗುತ್ತಿದೆ ಹೊರತು ರೈತರ ಜಮೀನಿನಲ್ಲಿ ಬಲವಂತವಾಗಿ ಕೆಲಸ ಮಾಡುತ್ತಿಲ್ಲ. ರೈತರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಪ್ರತಿಪಾದಿಸುವ ಪ್ರಯತ್ನ ನಡೆಸಿದರು.

ಈ ವೇಳೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಜಿ.ಎಸ್‌. ಮಳಗಿ ಅವರು ರೈತರು ಮತ್ತು ಯುಕೆಪಿ ಅಧಿಕಾರಿಗಳ ವಾದ ಆಲಿಸಿ, ದಾಖಲೆ ಪರಿಶೀಲಿಸಿದರು. ಆದರೆ ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳುವುದು ಸಾಧ್ಯವಾಗಲಿಲ್ಲ. ದಾಖಲೆ ಇದ್ದರೆ ಕೋರ್ಟ್‌ಗೆ ಹೋಗಿ ತಡೆಯಾಜ್ಞೆ ತಂದು ಕೆಲಸ ಸ್ಥಗಿತಗೊಳಿಸಬಹುದು. ಆದರೆ ಸರ್ಕಾರಿ ಕಾಮಗಾರಿಗೆ ತಡೆ ಒಡ್ಡುವುದು ತಮ್ಮ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಅಸಹಾಯಕತೆ ತೋಡಿಕೊಂಡರು.
ಈ ಹಂತದಲ್ಲಿ ರೈತರು ಪ್ರತಿಭಟನೆಯನ್ನು ಉಗ್ರಗೊಳಿಸಲು ಮುಂದಾದರು.

ಕೆಪಿಯವರು ಕೆಲಸ ಮಾಡುತ್ತಿರುವ ಜಮೀನಿಗೆ ನುಗ್ಗಿ ಕಾಮಗಾರಿ ತಡೆಯುವ ಮಾತುಗಳನ್ನಾಡತೊಡಗಿದರು. ಕೆಲವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡತೊಡಗಿದರು. ಅಷ್ಟರಲ್ಲಾಗಲೇ ಸ್ಥಳಕ್ಕೆ ಆಗಮಿಸಿದ್ದ ಬಸವನಬಾಗೇವಾಡಿ ಡಿವೈಎಸ್ಪಿ ಈ.ಶಾಂತವೀರ ಅವರು ಎಲ್ಲವನ್ನೂ ವಿಚಾರಿಸಿ ರೈತರ ಬಳಿ ಬಂದು ಪ್ರತಿಭಟನೆ ತಾತ್ಕಾಲಿಕವಾಗಿ ನಿಲ್ಲಿಸಿ ಸಹಕರಿಸುವಂತೆ, ಸೋಮವಾರ ಇಲ್ಲವೇ ಮಂಗಳವಾರ ಕೆಬಿಜೆಎನ್ನೆಲ್‌ ಅಧಿಕಾರಿ, ತಹಶೀಲ್ದಾರ್‌ ಮತ್ತು ರೈತರ ಮಧ್ಯೆ ಸಭೆ ನಡೆಸಿ ಎರಡೂ ಕಡೆಯವರ ದಾಖಲಾತಿ ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳುವವರೆಗೂ ಸಮಾಧಾನದಿಂದ ಇರುವಂತೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ರೈತರು ಸದ್ಯ ಯುಕೆಪಿಯವರು ತಮ್ಮದೆಂದು ವಾದಿಸುತ್ತಿರುವ ರೈತನ ಜಮೀನಿನಲ್ಲಿ ನಡೆಸುತ್ತಿರುವ ಭೂಮಿ ಸಮತಟ್ಟುಗೊಳಿಸುವ ಕಾಮಗಾರಿ ನಿಲ್ಲಿಸಿ ಯಂತ್ರಗಳನ್ನು ಮರಳಿ ಕಳಿಸುವಂತೆ ಪಟ್ಟುಹಿಡಿದರು. ಇದಕ್ಕೊಪ್ಪಿದ ಪೊಲೀಸರು ಗುತ್ತಿಗೆದಾರರು, ಕೆಬಿಜೆಎನ್ನೆಲ್‌ ಅಧಿ ಕಾರಿಗಳ ಮನವೊಲಿಸಿ ವಿವಾದಿತ ಜಮೀನಿನಿಂದ ಯಂತ್ರಗಳನ್ನು ಮರಳಿ ಕಳಿಸಿ ಕೆಲಸ ಸ್ಥಗಿತಗೊಳಿಸುವಂತೆ ನೋಡಿಕೊಂಡರು.

ಪ್ರತಿಭಟನೆಗೂ ಮುನ್ನ ಟ್ರಾಫಿಕ್ಸ್‌ ವಾಹನಗಳಲ್ಲಿ ಆಗಮಿಸಿದ ನೂರಾರು ರೈತರು ಸ್ಥಳೀಯ ರೈತರ ಜೊತೆ ಸೇರಿ ಪ್ರತಿಭಟನಾ ಸ್ಥಳದಲ್ಲೇ ಸಂತ ಸೇವಾಲಾಲ್‌ ಮತ್ತು ಡಾ| ಅಂಬೇಡ್ಕರ್‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸೇವಾಲಾಲ್‌ ಜಯಂತಿ ಆಚರಿಸಿ ಗಮನ ಸೆಳೆದರು.
ಸಂಘದ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ತಾಲೂಕಾಧ್ಯಕ್ಷ ಅಯ್ಯಪ್ಪ ಬಿದರಕುಂದಿ, ತಾಲೂಕು ಪ್ರಧಾನ ಕಾರ್ಯದರ್ಶಿ ವೈ.ಎಲ್‌. ಬಿರಾದಾರ ಸೇರಿದಂತೆ ತಾಲೂಕಿನ ವಿವಿಧೆಡೆಯಿಂದ ಆಗಮಿಸಿದ್ದ ಮತ್ತು ಸ್ಥಳೀಯ ರೈತರು ಹಾಗೂ ವಿವಾದಕ್ಕೀಡಾದ ಜಮೀನಿನ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.

ಸಿಪಿಐ ಆನಂದ ವಾಗಮೋಡೆ, ಪಿಎಸೈಗಳಾದ ಮಲ್ಲಪ್ಪ ಮಡ್ಡಿ, ವಸಂತ ಬಂಡಗಾರ ನೇತೃತ್ವದಲ್ಲಿ 30-40 ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು. ಈ ವೇಳೆ ನಾರಾಯಣಪುರ ಮುಖ್ಯರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಳ್ಳದಂತೆ ನೋಡಿಕೊಳ್ಳಲು
ಪೊಲೀಸರು ಹರಸಾಹಸಪಟ್ಟರು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.