ಮಹಾನ್ ಪುರುಷರು ಸಮಾಜದ ಆಸ್ತಿ
ಜಿಲ್ಲಾದ್ಯಂತ ಸಂತ ಸೇವಾಲಾಲ್ ಮಹಾರಾಜರ 281ನೇ ಜಯಂತಿ ಆಚರಣೆ ಅದ್ಧೂರಿ ಭಾವಚಿತ್ರ ಮೆರವಣಿಗೆ
Team Udayavani, Feb 16, 2020, 1:07 PM IST
ರಾಯಚೂರು: ಜನರು ಸನ್ಮಾರ್ಗದಲ್ಲಿ ನಡೆಯಲು ಸಂತ ಸೇವಾಲಾಲ್ ಅವರು ದಾರಿದೀಪವಾಗಿದ್ದಾರೆ. ಇಂತಹ ಮಹಾನ್ ಪುರುಷರು ಮಾನವ ಕುಲದ ಆಸ್ತಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ದುರುಗೇಶ ಬಣ್ಣಿಸಿದರು.
ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಂತ ಶ್ರೀ ಸೇವಾಲಾ ಲ್ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜ ಸುಧಾರಕ ಸಂತ ಶ್ರೀ ಸೇವಾಲಾಲ್ ಸತ್ಯ, ಅಹಿಂಸೆ, ತ್ಯಾಗಗಳನ್ನು ಪಾಲಿಸಿದ ಮಹಾನ್ ವ್ಯಕ್ತಿ. ಅವರಂತೆ ನಾವುಗಳು ಮಾನವೀಯ ಮೌಲ್ಯಗಳನ್ನು ಪಾಲಿಸಿಕೊಂಡು ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಬೇಕು ಎಂದರು.
ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದಾಗ ಮಾತ್ರ ಒಂದು ಸಮಾಜ ಬಲಿಷ್ಠವಾಗಲು ಸಾಧ್ಯ. ಪ್ರತಿಯೊಬ್ಬ ನಾಗರಿಕರಿಗೂ ಅಗತ್ಯ ಸೌಲಭ್ಯ ಸಿಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಿ ಸರ್ಕಾರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕ ಹನುಮಂತು ಚವ್ಹಾಣ ವಿಶೇಷ ಉಪನ್ಯಾಸ ನೀಡಿ, ಸಂತ ಶ್ರೀ ಸೇವಾಲಾಲ್ ಅವರು ಬಾಲಬ್ರಹ್ಮಚಾರಿಯಾಗಿ ತಪೋಧ್ಯಾನ ಮತ್ತು ಭಕ್ತಿ ಮೂಲಕ ಆಧ್ಯಾತ್ಮದಲ್ಲಿ ಸಾಧನೆ ಮಾಡಿದರು. ದೈವಾಂಶ ಸಂಭೂತರಾಗಿ ಜನರ ಕಲ್ಯಾಣಕ್ಕಾಗಿ ಜೀವನ ಮುಡಿಪಾಗಿಟ್ಟರು. 1739ರ ಫೆ.15ರಂದು ದಾವಣಗೆರೆ ಜಿಲ್ಲೆಯಲ್ಲಿ ಭೀಮಾ ನಾಯಕ್ ಮತ್ತು ಧರ್ಮಿನಿಬಾಯಿ ದಂಪತಿಗೆ ಜನಿಸಿದರು. ಆಧ್ಯಾತ್ಮದ ಮೂಲಕವಾಗಿ ಉಪದೇಶಗಳನ್ನು ನೀಡಿ, ಸನ್ಮಾರ್ಗದತ್ತ ಕೊಂಡೊಯ್ದರು. ಜನರಲ್ಲಿ ಧೈರ್ಯ, ಸಾಹಸ, ಆತ್ಮಸ್ಥೈರ್ಯ ಮತ್ತು ಆತ್ಮಾಭಿಮಾನ ಮೂಡಿಸಿದ ಅವರ ಚಿಂತನೆಗಳು ಜನಾಂಗದಲ್ಲಿ ಐಕ್ಯತೆ ಮೂಡಿಸಿದೆ ಎಂದರು.
ಬಂಜಾರ ಸಮಾಜದವರು ಸಾಂಸ್ಕೃತಿಕ ನೆಲೆಯಲ್ಲಿ ತಮ್ಮ ಅಸ್ತಿತ್ವ ಕಂಡುಕೊಳ್ಳಲು ಈ ಮಹಾನುಭಾವರ ಸತ್ಕಾರ್ಯಗಳೇ ಕಾರಣ. ಒಬ್ಬ ಶ್ರೇಷ್ಠ ದಾರ್ಶನಿಕನಾಗಿ ಮತ್ತು ಸಾಂಸ್ಕೃತಿಕ
ನಾಯಕನಾಗಿ ಸೇವಾಲಾಲ್ ಚಿರಸ್ಥಾಯಿ ಎಂದರು. ವಿವಿಧ ಕ್ಷೇತ್ರಗಳಲ್ಲಿ ಸಾ ಧಿಸಿದವರನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ಶ್ರೀ ಬಸವೇಶ್ವರ ವೃತ್ತದಲ್ಲಿ ಸಂತ ಶ್ರೀ ಸೇವಾಲಾಲ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅಲ್ಲಿಂದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದವರೆಗೆ ಭಾವಚಿತ್ರ ಮೆರವಣಿಗೆ ಮಾಡಲಾಯಿತು.
ಬಂಜಾರ ಸಮಾಜದ ರಾಯಚೂರು ತಾಲೂಕು ಅಧ್ಯಕ್ಷ ಹನುಮಾನ್ ಚವ್ಹಾಣ, ರಿಮ್ಸ್ ವೈದ್ಯ ಡಾ| ವಿಜಯಕುಮಾರ, ಗೋನಪ್ಪ ರಾಠೊಡ, ನಾರಾಯಣ ಬಿ.ನಾಯಕ, ಶಿವಣ್ಣ, ಜ್ಯೋತಿ ಚವ್ಹಾಣ, ವೆಂಕಟೇಶ್ ಸೇರಿ ಇತರರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ಬಿ. ನಾಯಕ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.