ಬಿ.ಸಿ. ರೋಡ್ ಕಲ್ಪನೆ ತಿರುವಿನಲ್ಲಿ ಮಗುಚಿ ಬಿದ್ದ ಎರಡು ಬಸ್ ಗಳು: ಮೂವರು ಗಂಭೀರ
Team Udayavani, Feb 16, 2020, 4:26 PM IST
ಬಂಟ್ವಾಳ: ಇಲ್ಲಿನ ಬಿ.ಸಿ. ರೋಡ್- ಪೊಳಲಿ ರಸ್ತೆಯ ಕಲ್ಪನೆ ತಿರುವಿನಲ್ಲಿ ಎರಡು ಬಸ್ ಗಳು ಪಲ್ಟಿಯಾಗಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಅದರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎರಡೂ ಬಸ್ ಗಳು ಬಿ.ಸಿ .ರೋಡ್ ನಿಂದ ಪೊಳಲಿ ಕಡೆಗೆ ಸಂಚರಿಸುತ್ತಿದ್ದವು. ಇದರಲ್ಲಿ ಒಂದು ಇಲ್ಲಿ ದಿನಂಪ್ರತಿ ಸಂಚರಿಸುವ ರೂಟ್ ಬಸ್ ಮತ್ತು ಮದುವೆ ಬಸ್. ಒಂದರ ಹಿಂದೊಂದು ಬರುತ್ತಿದ್ದ ಬಸ್ ಗಳು ಕಲ್ಪನೆ ತಿರುವಿನಲ್ಲಿ ಢಿಕ್ಕಿಯಾದವು. ಮುಂದಿನಿಂದ ಹೋಗುತ್ತಿದ್ದ ರೂಟ್ ಬಸ್ ಗೆ ಹಿಂದಿನಿಂದ ಬರುತ್ತಿದ್ದ ಮದುವೆ ದಿಬ್ಬಣದ ಬಸ್ ಢಿಕ್ಕಿ ಹೊಡೆಯಿತು. ಮದುವೆ ದಿಬ್ಬಣದ ಬಸ್ ಚರಂಡಿಗೆ ಬಿದ್ದರೆ, ರೂಟ್ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ.
ಗಾಯಗೊಂಡವರನ್ನು 108 ಆಂಬುಲೆನ್ಸ್ ನಲ್ಲಿ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.