ಯೋಧನ ಸ್ಮಾರಕ ನಿರ್ಮಾಣಕ್ಕೆ ಕ್ರಮ ವಹಿಸಿ: ಎಸ್.ಎಂ.ಕೃಷ್ಣ
Team Udayavani, Feb 17, 2020, 3:04 AM IST
ಬೆಂಗಳೂರು: ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಎಚ್.ಗುರು ಅವರ ಚಿತಾಭಸ್ಮವನ್ನು ಈವರೆಗೆ ವಿಸರ್ಜಿಸದಿರುವುದು, ಸ್ಮಾರಕ ನಿರ್ಮಿಸದೆ ನಿರ್ಲಕ್ಷಿಸಿರುವುದನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು, ಕೂಡಲೇ ಈ ಕುರಿತು ಸೂಕ್ತ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ಸಿಎಂ ಯಡಿಯೂರಪ್ಪ ಅವರಿಗೆ ಎಸ್.ಎಂ.ಕೃಷ್ಣ ಪತ್ರ ಬರೆದಿದ್ದಾರೆ. ಕಳೆದ ವರ್ಷ ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಎಚ್.ಗುರು ಹುತಾತ್ಮರಾಗಿದ್ದರು. ಆದರೆ, ವರ್ಷ ಕಳೆದರೂ ಯೋಧನ ಚಿತಾಭಸ್ಮವನ್ನು ವಿಸರ್ಜಿಸದೆ, ಸ್ಮಾರಕವನ್ನೂ ನಿರ್ಮಿಸದೆ ನಿರ್ಲಕ್ಷ್ಯ ವಹಿಸಿರುವುದು ಅತ್ಯಂತ ದುರದೃಷ್ಟಕರ ಎಂದು ಎಸ್.ಎಂ.ಕೃಷ್ಣ ವಿಷಾದಿಸಿದ್ದಾರೆ.
ಪುಲ್ವಾಮಾ ದಾಳಿ ಅತ್ಯಂತ ಘೋರ ಕೃತ್ಯವಾಗಿದ್ದು, ಇಡೀ ರಾಷ್ಟ್ರ ದಾಳಿಯ ಬಗ್ಗೆ ಕಂಬನಿ ಮಿಡಿದಿತ್ತು. ಯೋಧನ ಬಲಿದಾನ ಮುಂದಿನ ಪೀಳಿಗೆಗೆ ಆದರ್ಶ ವಾಗಬೇಕಿದ್ದು, ಅದನ್ನು ಕಾರ್ಯರೂಪಕ್ಕೆ ತರಬೇಕಾದ ಜಿಲ್ಲಾಡಳಿತ, ಸರ್ಕಾರ ಕ್ರಮ ವಹಿಸದೆ ನಿರ್ಲ ಕ್ಷಿಸಿರುವುದು ಸಾರ್ವಜನಿಕರ ಅವಕೃಪೆಗೆ ಒಳಗಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಯಾವುದೇ ಆಡಳಿತ, ಸರ್ಕಾರ ಇಂತಹ ವಿಷಯಗಳ ಬಗ್ಗೆ ತುರ್ತು ಗಮನ ವಹಿಸುವುದು ಅವಶ್ಯಕ.
ನಾನು ಮುಖ್ಯಮಂತ್ರಿಯಾಗಿದ್ದಾಗ ಸ್ಥಾಪನೆಯಾದ ಕಾವೇರಿ ನೀರಾವರಿ ನಿಗಮದ ಮೂಲಕ ತುರ್ತಾಗಿ ವೀರ ಯೋಧನ ಸ್ಮಾರಕ ನಿರ್ಮಾಣಕ್ಕೆ ಕ್ರಮ ವಹಿಸಿ, ನಿರ್ವಹಣೆಯನ್ನೂ ನಿಗಮದ ಮೂಲಕ ನಿರ್ವಹಿಸಿ, ಯೋಧನ ಬಲಿದಾನವನ್ನು ನೆನೆಯುವಂತಹ ಕಾರ್ಯ ಆಗಬೇಕೆಂದು ಆಶಿಸಿದ್ದಾರೆ. ವರ್ಷವಾದರೂ ಯೋಧನ ಚಿತಾಭಸ್ಮವನ್ನು ವಿಸರ್ಜನೆ ಮಾಡದಿರಲು ಕಾರಣವನ್ನು ಪತ್ತೆ ಹಚ್ಚಿ ಶಾಸ್ತ್ರೋಕ್ತವಾಗಿ ವಿಸರ್ಜನಾ ಕಾರ್ಯ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡ ಬೇಕು ಎಂದು ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.