ತುಳು ಸಂಘ ಪಿಂಪ್ರಿ-ಚಿಂಚಾಡ್‌: ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ


Team Udayavani, Feb 17, 2020, 6:22 PM IST

mumbai-tdy-1

ಪುಣೆ, ಫೆ. 16: ತುಳು ಸಂಘ ಪಿಂಪ್ರಿ-ಚಿಂಚ್ವಾಡ್‌ ಇದರ 9ನೇ ವಾರ್ಷಿಕೋತ್ಸವ ಸಮಾರಂಭವು ಫೆ. 15ರಂದು ರಾಮಕೃಷ್ಣ ಮೋರೆ ಸಭಾಗೃಹ, ಚಿಂಚ್ವಾಡ್‌ ಇಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಸಂಘದ ಅಧ್ಯಕ್ಷ ಹರೀಶ್‌ ಶೆಟ್ಟಿ ಕುರ್ಕಾಲ್‌ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಡಾ| ಚಿನ್ನಪ್ಪ ಗೌಡ ದೀಪ ಪ್ರಜ್ವಲಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಗೌರವ ಅತಿಥಿಗಳಾಗಿ ಮುಂಬಯಿಯ ಸಾಹಿತಿ, ನಾಟಕಕಾರ ಶಿಮಂತೂರು ಚಂದ್ರಹಾಸ ಸುವರ್ಣ, ಗೌರವ ಉಪಸ್ಥಿತರಾಗಿ ಪುಣೆ ತುಳುಕೂಟದ ಅಧ್ಯಕ್ಷ ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಅಧ್ಯಕ್ಷರಾದ ಹರೀಶ್‌ ಶೆಟ್ಟಿ ಕುರ್ಕಾಲ್‌, ನಿಕಟಪೂರ್ವ ಕಾರ್ಯಾಧ್ಯಕ್ಷ ಶ್ಯಾಮ್‌ ಸುವರ್ಣ, ಉಪಾಧ್ಯಕ್ಷರಾದ ದಿನೇಶ್‌ ಶೆಟ್ಟಿ ಉಜಿರೆ, ಶೇಖರ್‌ ಚಿತ್ರಾಪು, ಕಾರ್ಯದರ್ಶಿ ವಿನಯ್‌ ಶೆಟ್ಟಿ ನಿಟ್ಟೆ, ಕೋಶಾಧಿಕಾರಿ ಗಣೇಶ್‌ ಅಂಚನ್‌, ಸಾಂಸ್ಕೃತಿಕಸಮಿತಿ ಕಾರ್ಯಾಧ್ಯಕ್ಷ ಸಂತೋಷ್‌ ಶೆಟ್ಟಿ ಪೆರ್ಡೂರು, ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ನಿತಿನ್‌ ಶೆಟ್ಟಿ ನಿಟ್ಟೆ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ಸತೀಶ್‌ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಮಿಥುನ್‌ ಶೆಟ್ಟಿ ಉಪಸ್ಥಿತರಿದ್ದರು.

ಖ್ಯಾತ ಸಮಾಜ ಸೇವಕ, ಕಲಾಪೋಷಕ ಲೀಲಾಧರ ಶೆಟ್ಟಿ ಕಾಪು ಇವರನ್ನು ವರ್ಷದ ವಿಶೇಷ ಸಾಧಕರನ್ನಾಗಿ ಗುರುತಿಸಿ ಶಾಲು ಹೊದೆಸಿ, ಸ್ಮರಣಿಕೆ ಫಲ ಪುಷ್ಪಗಳನ್ನು ನೀಡಿ ಸಮ್ಮಾನಿಸಲಾಯಿತು. ಉಪಾಧ್ಯಕ್ಷರಾದ ದಿನೇಶ್‌ ಶೆಟ್ಟಿ ಉಜಿರೆ ಸ್ವಾಗತಿಸಿದರು. ಮಿಥುನ್‌ ಶೆಟ್ಟಿ, ರತ್ನಾಕರ ಹಾಗೂ ಶ್ಯಾಮ್‌ ಸುವರ್ಣ ಅತಿಥಿಗಳನ್ನುಪರಿಚಯಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರನ್ನು ಅಧ್ಯಕ್ಷರಾದ ಹರೀಶ್‌ ಶೆಟ್ಟಿ ಕುರ್ಕಾಲ್‌ ಗೌರವಿಸಿದರು.

ಕಾರ್ಯಕ್ರಮದ ಅಂಗವಾಗಿ ಯಶಸ್ವಿ ಹೊಟೇಲ್‌ ಉದ್ಯಮಿಗಳಾದ ಎರ್ಮಾಳ್‌ ನಾರಾಯಣ ಕೆ. ಶೆಟ್ಟಿ ಎರ್ಮಾಳ್‌ ವಿಶ್ವನಾಥ ಶೆಟ್ಟಿ ಹಾಗೂ ವಿಶ್ವನಾಥ ಡಿ. ಶೆಟ್ಟಿ ಇವರುಗಳೊಂದಿಗೆ ಸಾಹಸದ ಹಾದಿ ಎಂಬ ಮುಕ್ತ ಸಂದರ್ಶನ ಕಾರ್ಯಕ್ರಮವನ್ನು ನೂತನ್‌ ಸುವರ್ಣ ನಡೆಸಿಕೊಟ್ಟರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಮಿತಿ ಸದಸ್ಯರಿಂದ ನೃತ್ಯ ವೈವಿಧ್ಯಗಳು ಹಾಗೂ ಮನೋರಂಜನೆಯ ಅಂಗವಾಗಿ ನಂದಳಿಕೆ ನಾರಾಯಣ ಶೆಟ್ಟಿ ನಿರ್ದೇಶನದಲ್ಲಿ ತುಳು ನಾಟಕ “ದೈಯ್ಯಕ್ಕನ ದೈವದ ಇಲ್ಲ್’ ಪ್ರದರ್ಶನಗೊಂಡಿತು.

 

 ಚಿತ್ರ – ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.