ಟಿ20 ರ್‍ಯಾಂಕಿಂಗ್: 10ಕ್ಕೆ ಕುಸಿದ ಕೊಹ್ಲಿ
Team Udayavani, Feb 18, 2020, 6:50 AM IST
ದುಬಾೖ: ಸೋಮವಾರ ಪ್ರಕಟಗೊಂಡ ಐಸಿಸಿ ಟಿ20 ಬ್ಯಾಟಿಂಗ್ ರ್‍ಯಾಂಕಿಂಗ್ ಯಾದಿಯಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ 10ನೇ ಸ್ಥಾನಕ್ಕೆ ಕುಸಿದಿದ್ದಾರೆ. ಕೆ.ಎಲ್. ರಾಹುಲ್ 2ನೇ ಸ್ಥಾನ ಕಾಯ್ದುಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ-ಇಂಗ್ಲೆಂಡ್ ತಂಡಗಳ 3 ಪಂದ್ಯಗಳ ಸರಣಿ ಬಳಿಕ ರ್‍ಯಾಂಕಿಂಗ್ ಯಾದಿಯನ್ನು ಪರಿಷ್ಕರಿಸಲಾಯಿತು. ಪಾಕಿಸ್ಥಾನದ ಬಾಬರ್ ಆಜಂ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಬಾಬರ್ ಮತ್ತು ರಾಹುಲ್ ನಡುವೆ 56 ಅಂಕಗಳ ಅಂತರವಿದೆ.
ನ್ಯೂಜಿಲ್ಯಾಂಡ್ ಸರಣಿ ಬಳಿಕ ವಿರಾಟ್ ಕೊಹ್ಲಿ 9ನೇ ಸ್ಥಾನದಲ್ಲಿದ್ದರು. ಈಗ ಈ ಸ್ಥಾನ ಇಯಾನ್ ಮಾರ್ಗನ್ ಪಾಲಾಗಿದೆ. ಅವರು ಆಫ್ರಿಕಾ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ 136 ರನ್ ಬಾರಿಸಿ ಪ್ರಗತಿ ಸಾಧಿಸಿದರು. ಕೊಹ್ಲಿ ಒಂದು ಸ್ಥಾನದ ಕುಸಿತ ಅನುಭವಿಸಿದರು. ರೋಹಿತ್ ಶರ್ಮ 11ನೇ ಸ್ಥಾನದಲ್ಲಿದ್ದಾರೆ.
ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಅಫ್ಘಾನಿಸ್ಥಾನದ ರಶೀದ್ ಖಾನ್ ಮತ್ತು ಮುಜೀಬುರ್ ರೆಹಮಾನ್ ಮೊದಲೆರಡು ಸ್ಥಾನದಲ್ಲಿದ್ದಾರೆ. ಟಾಪ್-10 ಯಾದಿಯಲ್ಲಿ ಭಾರತದ ಯಾವುದೇ ಬೌಲರ್ ಇಲ್ಲ.
ಟಿ20 ಆಲ್‌ರೌಂಡರ್ ವಿಭಾಗದ ಅಗ್ರಸ್ಥಾವನ್ನು ಕಾಯ್ದುಕೊಳ್ಳುವಲ್ಲಿ ಅಫ್ಘಾನಿಸ್ಥಾನದ ಮೊಹಮ್ಮದ್ ನಬಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.