ಅಂಗನವಾಡಿ ಕಾಮಗಾರಿ ಶೀಘ್ರ ಪೂರ್ಣ: ಸೆಲ್ವಮಣಿ
Team Udayavani, Feb 18, 2020, 12:48 AM IST
ಮಂಗಳೂರು: ಪ್ರಗತಿಯಲ್ಲಿರುವ ಅಂಗನವಾಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಪ್ರತೀ ಅಂಗನವಾಡಿಗಳ ಕೆಲಸ ಕಾರ್ಯಗಳು ಫೆ. 29ರೊಳಗೆ ಪೂರ್ಣಗೊಳಿಸಬೇಕು. ತತ್‌ಕ್ಷಣ ಪ್ರಗತಿಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಶಿಶು ಅಭಿವೃದ್ಧಿ ಇಲಾಖಾ ಸಿಬಂದಿ ಭೇಟಿ ನೀಡಿ ಅಲ್ಲಿನ ಕಾಮಗಾರಿ ಅಭಿವೃದ್ಧಿ ಕುರಿತು ವರದಿ ನೀಡಬೇಕು ಎಂದು ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ಸೆಲ್ವಮಣಿ ಸೂಚಿಸಿದರು.
ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಸಮೀಕ್ಷಾ ಸಭೆಯಲ್ಲಿ ಅವರು ಮಾತನಾಡಿದರು. ಬಾಕಿ ಇರುವ ಅಂಗನವಾಡಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಲಾಯಿತು. ಇದರಲ್ಲಿ ಕೆಲವು ಅಂಗನವಾಡಿ ಕೇಂದ್ರಗಳು ಪೂರ್ಣಗೊಂ ಡಿದ್ದು, ಇನ್ನೂ ಕೆಲವು ಅಂಗನವಾಡಿ ಕೇಂದ್ರಗಳ ಕಾಮಗಾರಿ ಬಾಕಿ ಉಳಿದುಕೊಂಡಿದೆ. ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಕಲ್ಲಮುಂಡ್ಕೂರು ಗ್ರಾಮದ ಕುಂಟಾಲಪಲ್ಕೆ ಕೊರಗ ಕಾಲನಿಯಲ್ಲಿ ನೀರಿನ ಮೂಲವನ್ನು ಹುಡುಕಿ ಬೋರ್‌ವೆಲ್ ವ್ಯವಸ್ಥೆ ಮಾಡಿ ಕೊಡ ಬೇಕು. ಬೋರ್‌ವೆಲ್ ವಿಫಲವಾದಲ್ಲಿ ತತ್‌ಕ್ಷಣ ತೆರೆದ ಬಾವಿಯನ್ನು ಅಗೆದು ಸುಸಜ್ಜಿತ ವ್ಯವಸ್ಥೆ ಕಲ್ಪಿಸಿ ಕೊಡಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು.
ಕುದ್ರಿಪದವು, ಕಟೀಲು ಗ್ರಾಮದ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆಯಾದಾಗ ಪ್ರತಿ ಬಾರಿ ಕಾರಣಗಳನ್ನು ನೀಡುತ್ತಿದ್ದು, ಮುಂದಿನ ಸಭೆಯಲ್ಲಿ ಸಮಸ್ಯೆ ಬಗೆಹರಿಸಿ ಸಭೆಗೆ ಹಾಜರಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ಉದ್ಯೋಗಿನಿ ಯೋಜನೆಯಡಿ 2019-20ನೇ ಸಾಲಿನಲ್ಲಿ 113 ಗುರಿಗಳನ್ನು ಹೊಂದಿದ್ದು, ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಫಲಾನುಭವಿಗಳಿಗೆ ಸಾಲ ಸೌಲಭ್ಯ ದೊರಕುವಂತೆ ಕೆಲಸ ಕಾರ್ಯವನ್ನು ಜರೂರಾಗಿ ನಿರ್ವಹಿಸು ವಂತೆ ಸೂಚಿಸಿದರು.
ಗ್ರಾಮೀಣ ಕಾರ್ಮಿಕರಿಗಾಗಿ ವಿಶೇಷ ಕಾರ್ಯಕ್ರಮಗಳಡಿ ವಿವಿಧ ಯೋಜನೆಗಳಿದ್ದು, ಜಿಲ್ಲೆಯಲ್ಲಿ ಒಟ್ಟು 60 ಸಾವಿರ ಕಟ್ಟಡ ಕಾರ್ಮಿಕರ ನೋಂದಣಿ ನಡೆದಿರುತ್ತದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿ ತಿಳಿಸಿದರು. ಕಟ್ಟಡ ಕಾರ್ಮಿಕ ಯೋಜನೆಯಡಿ ಶೈಕ್ಷಣಿಕ, ಆರೋಗ್ಯ, ಪಿಂಚಣಿ ರೂಪದಲ್ಲಿ ಧನಸಹಾಯ ಮಾಡಲಾಗುತ್ತದೆ. ಶೇ. 100 ಸಾಧನೆಯಾಗಿರುತ್ತದೆ ಎಂದರು.
ಜಿಲ್ಲೆಯಲ್ಲಿನ ಜನವರಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಶೇ. 81ರಷ್ಟು ಸಾಧನೆ, ಬಸವ ವಸತಿ ಯೋಜನೆ ಯಡಿ ಜಿಲ್ಲೆಯಲ್ಲಿ ಶೇ.18.58ರಷ್ಟು ಸಾಧನೆ, ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಶೇ. 9.52 ಸಾಧನೆಯಾಗಿದ್ದು ಈ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಕೃಷಿ ಮತ್ತು ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ರವೀಂದ್ರ ಕಂಬಳಿ, ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿ ಅಧ್ಯಕ್ಷೆ ಮಮತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮದಡಿಯಲ್ಲಿ 54 ಅರ್ಜಿಗಳು, ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ 57 ಅರ್ಜಿಗಳು ಆಯ್ಕೆಯಾಗಿ ಬ್ಯಾಂಕಿಗೆ ಆನ್‌ಲೈನ್ ಮೂಲಕ ಶಿಫಾರಸು ಮಾಡಲಾಗಿರುತ್ತದೆ. ಬಂಡವಾಳ ಹೂಡಿಕೆ ಸಹಾಯಧನ ಯೋಜನೆ ಯಡಿ ಬ್ಯಾಂಕ್‌ಗಳಿಗೆ ಪ್ರಸ್ತಾವನೆ ಹೋಗಿದ್ದು, ಎಲ್ಲ ಬ್ಯಾಂಕ್‌ಗಳ ಪಟ್ಟಿ ಮಾಡಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಗಮನಕ್ಕೆ ತರುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.