15 ದಿನದಲ್ಲಿ ವೇತನ ಬಿಡುಗಡೆ
Team Udayavani, Feb 19, 2020, 3:03 AM IST
ವಿಧಾನ ಪರಿಷತ್ತು: ಹಲವು ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮತ್ತು ಖಾಸಗಿ ಅನುದಾನಿತ ಚಿತ್ರಕಲಾ ಮಹಾವಿದ್ಯಾಲಯ ಸಿಬ್ಬಂದಿ ವೇತನವನ್ನು 15 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಭರವಸೆ ನೀಡಿದರು.
ತಾಂತ್ರಿಕ ಕಾರಣಗಳಿಂದ ಹಲವು ತಿಂಗಳಿಂದ ಉದ್ದೇಶಿತ ಕಾಲೇಜುಗಳ ಸಿಬ್ಬಂದಿ ವೇತನ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಮುಂದಿನ 2 ವಾರಗಳಲ್ಲಿ ಪೂರ್ಣ ಸಂಬಳ ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲವೆಂದರು.
ಸದನದಲ್ಲಿ ನಿಯಮ 330ಎ ಅಡಿ ಬಿಜೆಪಿ ಸದಸ್ಯ ಎಸ್. ವಿ.ಸಂಕನೂರು ಈ ವಿಷಯ ಪ್ರಸ್ತಾಪಿಸಿ, ರಾಜ್ಯದ ಪಾಲಿಟೆಕ್ನಿಕ್ ಕಾಲೇಜು ಮತ್ತು ಖಾಸಗಿ ಅನುದಾನಿತ ಚಿತ್ರಕಲಾ ಮಹಾವಿದ್ಯಾಲಯಗಳಲ್ಲಿ ಸುಮಾರು 1 ವರ್ಷದಿಂದ ಸರಿಯಾಗಿ ವೇತನ ಬಿಡುಗಡೆ ಆಗುತ್ತಿಲ್ಲ. ಇದರಿಂದ ಅರೆಕಾಲಿಕ ಉಪನ್ಯಾಸಕರ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಮಾನಸಿಕ ಹಿಂಸೆಗೆ ಒಳಗಾಗುತ್ತಿದ್ದಾರೆ. ಅತ್ತ ಪರಿಣಾಮಕಾರಿಯಾಗಿ ಪಾಠ ಮಾಡಲಿಕ್ಕೂ ಆಗುತ್ತಿಲ್ಲ ಎಂದು ಗಮನಸೆಳೆದರು.
ಇದಲ್ಲದೆ, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಡಿ-ದರ್ಜೆ ನೌಕರರೂ ಇದೇ ಸಂಕಷ್ಟ ಎದುರಿಸುತ್ತಿದ್ದು, ಕುಟುಂಬ ಬೀದಿಗೆ ಬರುವ ಪರಿಸ್ಥಿತಿಯಿದೆ. ಕೂಡಲೇ ವೇತನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.