ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ
Team Udayavani, Feb 19, 2020, 12:24 PM IST
ಸಾಂಧರ್ಬಿಕ ಚಿತ್ರ
ಬೆಳಗಾವಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ಸಾರಿಗೆ ನಿಗಮ, ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ನಿಗಮದ ನೌಕರರನ್ನು ಸರಕಾರಿ ನೌಕರರನ್ನಾಗಿ ರಿಗಣಿಸಬೇಕು ಎಂದು ಆಗ್ರಹಿಸಿ ಅಖೀಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳದ ಸದಸ್ಯರು ಮಂಗಳವಾರ ಬೆಳಗಾವಿಯಲ್ಲಿ ಧರಣಿ ನಡೆಸಿದರು.
ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರಕಾರ ಕಾರ್ಮಿಕರು ಹಾಗೂ ನೌಕರರಿಗೆ ವೇತನ ಪರಿಷ್ಕರಣೆ ಮಾಡಿದೆ. ಅದರಂತೆ ಈ ವೇತನ ಶ್ರೇಣಿಯನ್ನು ನಮ್ಮ ಕಾರ್ಮಿಕರು ಹಾಗೂ ನೌಕರರಿಗೂ ನೀಡಬೇಕು ಎಂದು ಆಗ್ರಹಿಸಿದರು. ವೇತನ ತಾರತಮ್ಯವನ್ನು ಕೂಡಲೇ ಸರಿಪಡಿಸಬೇಕು. ಸರಕಾರಿ ನೌಕರರಿಗೆ ನೀಡು ತ್ತಿರುವ ಎಲ್ಲ ಸವಲತ್ತುಗಳನ್ನು ನಮಗೂ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಅಖೀಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ.ಕೆ.ಎಸ್.ಶರ್ಮಾ ಅವರು ಈಗಾಗಲೇ ಎಲ್ಲ ಶಾಸಕರು ಹಾಗೂ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಹೀಗಾಗಿ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು. ಗಂಗಾಧರಯ್ಯ, ಎನ್.ಆರ್.ದೇವರಾಜೇ ಅರಸು, ಪ್ರಧಾನ ಕಾರ್ಯದರ್ಶಿ ಜಿ.ಜಿ.ದೇವರಾಜೇ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.