ಸಾಂಕ್ರಾಮಿಕ ರೋಗಗಳ ತಡೆಗೆ ಪ್ರತಿ ಮನೆಗೂ ಭೇಟಿ

Team Udayavani, Feb 20, 2020, 3:00 AM IST

sankramika

ಕೆ.ಆರ್‌.ನಗರ: ಆರೋಗ್ಯ ಇಲಾಖೆಯಿಂದ ಕ್ಷಿಪ್ರ ಆರೋಗ್ಯ ಕಾರ್ಯಪಡೆಯು ಪ್ರತಿ ಮನೆಗಳಿಗೆ ತೆರಳಿ ಡೆಂ ಘೀ, ಚಿಕೂನ್‌ಗುನ್ಯಾ ಮತ್ತಿತರ ಮಾರಕ ಕಾಯಿಲೆಗಳ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಆರ್‌.ಮಹೇಂದ್ರಪ್ಪ ಹೇಳಿದರು.

ಪಟ್ಟಣದ ಮಧುವನಹಳ್ಳಿ ಬಡಾವಣೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ನಡೆದ “ನಾಗರಿಕರಿಗೊಂದು ಸವಾಲು’ ಆರೋಗ್ಯ ಜಾಗೃತಿ ಪ್ರಯುಕ್ತ ಸಮೀಕ್ಷಾ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.

ಇದು ನೂತನ ಕಾರ್ಯಕ್ರಮವಾಗಿದ್ದು ಸಾರ್ವಜನಿಕರ ಅರಿವಿನ ಬಗ್ಗೆ ನಾವೇ ಪ್ರಶ್ನಿಸಿ ಉತ್ತರ ಪಡೆಯಲಿದ್ದೇವೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ನಾಗರಿಕರು ಸಹಕಾರ ನೀಡಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿರುವ ನೀರಿನ ತೊಟ್ಟಿ, ಡ್ರಮ್‌, ಸಂಪುಗಳನ್ನು ವಾರಕ್ಕೊಮ್ಮೆ ಸ್ವತ್ಛಗೊಳಿಸಬೇಕು. ಆರೋಗ್ಯ ಇಲಾಖೆ ಎಷ್ಟೇ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಮತ್ತು ಸ್ಥಳೀಯರಲ್ಲಿ ಕಾಯಿಲೆಗಳ ಲಕ್ಷಣ ಹಾಗೂ ಅವುಗಳು ಹರಡುವ ಬಗ್ಗೆ ಅರಿವು ಮೂಡಿದಾಗ ಮಾತ್ರ ರೋಗ ತಡೆಗಟ್ಟಲು ಸಾಧ್ಯ ಎಂದರು.

ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ 60,370 ಮನೆಗಳನ್ನು ತಲುಪುವ ಗುರಿ ಹೊಂದಿದ್ದು, ಈಗಾಗಲೇ ಶೇ.80 ಗುರಿ ಸಾಧಿಸಲಾಗಿದೆ. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಮಾರ್ಗದರ್ಶನದಲ್ಲಿ 17 ವೈದ್ಯಾಧಿಕಾರಿಗಳು, 34 ಆರೋಗ್ಯ ಸಹಾಯಕರು, 10 ಮಂದಿ ಮೇಲ್ವಿಚಾರಕರು ಮತ್ತು 207 ಆಶಾ ಕಾರ್ಯಕರ್ತೆಯರನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರು.

ಈ ವೇಳೆ, ಹಿರಿಯ ತಾಲೂಕು ಆರೋಗ್ಯ ಮೇಲ್ವಿಚಾರಕ ಕೆ.ವಿ.ರಮೇಶ್‌, ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ, ಕಿರಿಯ ಆರೋಗ್ಯ ಸಹಾಯಕರಾದ ಎಚ್‌.ಆರ್‌.ರುಕ್ಮಿಣಿ, ಕುಮಾರಿ ಲಕ್ಷ್ಮೀಬಾಯಿ, ಅಂಬರೀಶ್‌, ಸ್ಥಳೀಯರಾದ ಮೋಹನ್‌ಕುಮಾರಿ, ಎಂ.ಕೆ.ಜ್ಯೋತಿ, ಮೀನಾಕ್ಷಿ, ಜಯಮ್ಮ, ರಾಮಯ್ಯ, ಸಿದ್ದರಾಮಯ್ಯ ಇತರರಿದ್ದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.