ನೀವು ಓದಿದ ಶಾಲೆ ಕಾಲೇಜಿಗೆ ನೆರವಾಗಿ

Team Udayavani, Feb 20, 2020, 3:00 AM IST

odida-sa

ಹುಣಸೂರು: ಉತ್ತಮ ಭವಿಷ್ಯ ರೂಪಿಸಿಕೊಂಡಿರುವ ಹಳೇ ವಿದ್ಯಾರ್ಥಿಗಳು ತಾವು ಓದಿದ ಶಾಲೆ ಕಾಲೇಜುಗಳನ್ನು ಅಭಿವೃದ್ಧಿ ಪಡಿಸಲು ಅಳಿಲು ಸೇವೆ ಸಲ್ಲಿಸಬೇಕು ಎಂದು ಮಹಿಳಾ ಸರ್ಕಾರಿ ಪದವಿ ಕಾಲೇಜು ಸಮಿತಿ ಅಧ್ಯಕ್ಷ , ಶಾಸಕ ಎಚ್‌.ಪಿ.ಮಂಜುನಾಥ್‌ ಮನವಿ ಮಾಡಿದರು. ನಗರದ ಮಹಿಳಾ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಾದ ನಡೆಸಿ: ಈ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆ ಪಡೆದವರು, ಹಳೇ ವಿದ್ಯಾರ್ಥಿಗಳು ಹಳೇ ಬೇರುಗಳಿದ್ದಂತೆ. ನಿಮ್ಮ ಆಲೋಚನೆ, ಸಾಧನೆಯನ್ನು ಹೊಸ ಚಿಗುರಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಸ್ಫೂರ್ತಿಯಾಗಬೇಕು. ಕಾಲೇಜಿನ ಮೂಲಭೂತ ಸೌಕರ್ಯಗಳಿಗೆ ಸ್ಪಂದಿಸಬೇಕು. ಉದ್ಯೋಗ ಮಾಹಿತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕುರಿತು ತರಬೇತುಗೊಳಿಸಿ ಮತ್ತು ಜೀವನವನ್ನು ಅರ್ಥೈಸಿಕೊಡಬೇಕು. ಈ ಮೂಲಕ ತಾವು ಓದಿದ ಶಾಲಾ-ಕಾಲೇಜುಗಳ ಪ್ರಗತಿಗೆ ನೆರವಾಗಿ ಎಂದು ಕೋರಿದರು.

ನಾನು ಹಳೇ ವಿದ್ಯಾರ್ಥಿ: ನಾನು ಇದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದೆ ಎಂದು ಸ್ಮರಿಸಿದ ಶಾಸಕರು, 2007ರಲ್ಲಿ ಮಹಿಳಾ ಕಾಲೇಜು ಆಗಿ ಪರಿವರ್ತನೆಯಾದ ನಂತರ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಿದ್ದು, ಈಗಾಗಲೇ ಒಂದು ಭಾಗದ ಹಳೇ ಕಟ್ಟಡವನ್ನು ಕೆಡವಿ ಹೊಸ ಸುವ್ಯವಸ್ಥಿತ ಕಟ್ಟಡ ನಿರ್ಮಿಸಲಾಗಿದೆ. ಈಗ ಮತ್ತೂಂದು ಬದಿಯಲ್ಲಿರುವ ಹಳೇ ಕಟ್ಟಡವನ್ನು ತೆರವುಗೊಳಿಸಿ, ನಾಲ್ಕು ಅಂತಸ್ತಿನ ಕಟ್ಟಡವನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

1300 ವಿದ್ಯಾರ್ಥಿಗಳು: ಶೈಕ್ಷಣಿಕವಾಗಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಈ ಕಾಲೇಜು ಅತ್ಯುತ್ತಮ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ. 1,300ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ ಕಾಲೇಜಿಗೆ ಮತ್ತಷ್ಟು ಮೂಲಭೂತ ಸೌಕರ್ಯ ಕಲ್ಪಿಸುತ್ತೇನೆ ಎಂದು ಭರವಸೆ ನೀಡಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ಸಂಚಾಲಕ ಡಾ.ಕೆ.ಎಸ್‌.ಭಾಸ್ಕರ್‌ ಮಾತನಾಡಿ, ಕಾಲೇಜಿನಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಸಂಘದ ಮೂಲಕ ವಿವಿಧ ಶೈಕ್ಷಣಿಕ ಚಟುವಟಿಕೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.

ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಮಧುಶ್ರೀ, ಈ ಕಾಲೇಜಿನಲ್ಲಿ ಓದಿರುವುದು ಹೆಮ್ಮಯ ಸಂಗತಿ. ಹಿರಿಯ ವಿದ್ಯಾರ್ಥಿಗಳಾಗಿ ಕಿರಿಯ ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಗೆ ಪೂರಕವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ವಿಭಾಶ್ರೀ, ಸಾಧಕ ವಿದ್ಯಾರ್ಥಿನಿಯರಾದ ರಶ್ಮಿ, ತಸ್ಮಿಯಾಬಾನು, ಅಂಜನಾ, ಸಾರಾ, ನಿರ್ಮಲಾ ಮತ್ತಿತರರು ಮಾತನಾಡಿದರು.

ಹಿರಿಯ ವಿದ್ಯಾರ್ಥಿಗಳಿಗಾಗಿ ಫನ್ನಿಗೇಮ್ಸ್‌, ಸಾಂಸ್ಕೃತಿಕ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ನಿವೃತ್ತ ಪ್ರಾಧ್ಯಾಪಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಂಶುಪಾಲ ಪ್ರೊ.ಬಿ.ಎಂ.ನಾಗರಾಜ್‌, ಗ್ರಾಂಥಾಲಯ ಅಧಿಕಾರಿ ಕರುಣಾಕರ್‌, ಸಹಾಯಕ ಪ್ರಾಧ್ಯಾಪಕರಾದ ನಾಗಣ್ಣ, ಡಾ.ನಂಜುಂಡಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.