ಕರಾವಳಿ ಶಾಸಕರಿಂದ ಹಕ್ಕೊತ್ತಾಯ
ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿಸಿ
Team Udayavani, Feb 20, 2020, 6:46 AM IST
ಸಾಂದರ್ಭಿಕ ಚಿತ್ರ
ಮಹಾನಗರ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳುಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನಕ್ಕೆ ಪೂರಕವಾಗಿ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡ ಬೇಕು ಎನ್ನುವ ತುಳುನಾಡಿನ ಬಹು ವರ್ಷಗಳ ಕೂಗು ಇದೀಗ ಸಾಕಾರಗೊಳ್ಳುವ ಹಂತ ತಲುಪಿದೆ.
ಬೆಂಗಳೂರಿನಲ್ಲಿ ಈಗ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲೇ ತುಳುವನ್ನು ರಾಜ್ಯ ಭಾಷೆಯಾಗಿ ಘೋಷಯಾಗಿಸುವ ನಿಟ್ಟಿನಲ್ಲಿ ಕರಾವಳಿ ಶಾಸಕರು ಹಕ್ಕೊತ್ತಾಯ ಮಂಡಿಸುವುದಕ್ಕೆ ಮುಂದಾಗಿದ್ದಾರೆ. ಒಂದುವೇಳೆ ರಾಜ್ಯ ಸರಕಾರ ತುಳು ಭಾಷೆಯನ್ನು ರಾಜ್ಯ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದರೆ, ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಹೋರಾಟ, ಪ್ರಯತ್ನಕ್ಕೆ ಪುಷ್ಟಿ ಸಿಗಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಅವರು ಇತ್ತೀಚೆಗೆಯಷ್ಟೇ ತುಳು ಭಾಷೆಯ ಪರ ಟ್ವೀಟ್ ಮಾಡಿದ್ದು, ತುಳುನಾಡಿಗರ ಮನವಿಗೆ ಸ್ಪಂದಿಸಿ, ತುಳು ಭಾಷೆಯನ್ನು ರಾಜ್ಯದ ಭಾಷೆಯಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳನ್ನು ಮನವಿ ಮಾಡುತ್ತೇನೆ ಎಂದಿ ದ್ದರು. ಅಲ್ಲದೆ, ಕರಾವಳಿ ಭಾಗದ ಎಲ್ಲ ಶಾಸಕರು ಇದೀಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, ಈ ಬಗ್ಗೆ ಮನವಿ ಮಾಡಿದ್ದಾರೆ. ಮುಖ್ಯ ಮಂತ್ರಿಗಳು ಕೂಡ ಮನವಿಗೆ ಸಕಾರಾ ತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ.
ದ. ಕ. ಮತ್ತು ಉಡುಪಿ ಜಿಲ್ಲೆಯ ಒಟ್ಟು 13 ವಿಧಾನಸಭಾ ಕ್ಷೇತ್ರದ ಪೈಕಿ 12 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸ ಕರು ಇದ್ದಾರೆ. ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ವಿಚಾರವನ್ನು ಸದನದ ಗಮನಸೆಳೆಯುವ ಮೂಲಕ ವಿಧಾ ನಸಭೆ ಹಾಗೂ ವಿ.ಪರಿಷತ್‌ನಲ್ಲಿ ಆ ಬಗ್ಗೆ ವಿಷಯ ಪ್ರಸ್ತಾವಕ್ಕೆ ಕರಾವಳಿ ಭಾಗದ ಶಾಸಕರು ತೀರ್ಮಾನಿಸಿದ್ದಾರೆ.
ಹಿಂದೆ ಭರವಸೆ ನೀಡಿದ್ದರು
“ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಲ್ಲೊಂದು ಎಂದು ಘೋಷಿಸಲು ಸರಕಾರ ಸಿದ್ಧ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2009ರ ಡಿ. 10ರಂದು ಉಜಿರೆಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ಹೇಳಿದ್ದರು. ಸಿಎಂ ಅಂದು ನೀಡಿದ ಭರವಸೆಯನ್ನು ಇದೀಗ ಮತ್ತೂಮ್ಮೆ ನೆನಪಿಸಲಾಗುತ್ತಿದೆ. ಇದರೊಂದಿಗೆ ಮುಖ್ಯಮಂತ್ರಿಗಳಿಗೆ ಮತ್ತಷ್ಟು ಒತ್ತಡ ತರಲಾಗುವುದು’ ಎನ್ನುತ್ತಾರೆ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್.
ಅಧಿವೇಶನ ಮುಗಿಯುವವರೆಗೂ ಟ್ವಿಟ್ಟರ್ ಅಭಿಯಾನ
“ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆ ಎಂದು ಘೋಷಿಸಲು ಒತ್ತಾಯಿಸಿ ಫೆ. 17ರಂದು ಆರಂಭವಾದ TuluofficialinKA_KL ಟ್ವೀಟ್ ತುಳುನಾಡ್ ಅಭಿಯಾನವು ಅಧಿವೇಶನ ಪೂರ್ಣಗೊಳ್ಳುವವರೆಗೆ ಮುಂದುವರಿಯಲಿದೆ. ಈಗಾಗಲೇ ಚಲನಚಿತ್ರ ನಟರು ಸಹಿತ ಹೆಸರಾಂತ ಗಣ್ಯರು ತುಳು ಭಾಷೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ’ ಎಂದು ಜೈ ತುಳುನಾಡು ಸಂಘಟನೆಯ ಸದಸ್ಯ ಕಿರಣ್ ಅವರು “ಉದಯವಾಣಿ ಸುದಿನ’ಕ್ಕೆ ತಿಳಿಸಿದ್ದಾರೆ.
ಸಿಎಂಗೆ ಮನವಿ ಮಾಡುತ್ತೇವೆ
ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಕರಾವಳಿ ಮೂಲದ ಶಾಸಕರು ಸಹಿತ ಸಚಿವ ಸಿ.ಟಿ. ರವಿ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ. ಅವಕಾಶ ಸಿಕ್ಕರೆ ಸದನದಲ್ಲಿಯೂ ಈ ಬಗ್ಗೆ ಗಮನಸೆಳೆಯುತ್ತೇನೆ.
– ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ
ಸರಕಾರದ ಗಮನಸೆಳೆಯುವೆ
ಕರಾವಳಿಯ ಜನರ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರದ ಸಂಸದೀಯ ಇಲಾಖೆಗೆ ಪತ್ರದ ಮುಖೇನ ಮನವಿ ಮಾಡಿದ್ದೇನೆ. ಸದನದಲ್ಲಿ ಈ ಬಗ್ಗೆ ಪ್ರಶ್ನಿಸಿ ಸರಕಾರದ ಗಮನಸೆಳೆಯುತ್ತೇನೆ.
- ಯು.ಟಿ. ಖಾದರ್, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.