ಶಿಥಿಲ ಶಾಲಾ ಕಟ್ಟಡಕ್ಕೆ ಗ್ರಾಮಸ್ಥರಿಂದಲೇ ಸಿಕ್ತು ಮುಕ್ತಿ !
ಕಟ್ಟಡ ಕೆಡವಲು ಮನವಿ ನೀಡುತ್ತ ದಶಕವೇ ಕಳೆದರೂ ಸ್ಪಂದಿಸದ ಸರ್ಕಾರ
Team Udayavani, Feb 20, 2020, 11:28 AM IST
ಚನ್ನಗಿರಿ: ಶಿಥಿಲಗೊಂಡ ಸರ್ಕಾರಿ ಶಾಲಾ ಕಟ್ಟಡ ಬೀಳುವ ಸ್ಥಿತಿಯಲ್ಲಿದುದನ್ನು ಕಂಡ ಗ್ರಾಮಸ್ಥರು ಒಟ್ಟುಗೂಡಿ ಶಾಲಾ ಕಟ್ಟಡವನ್ನು ನೆಲಸಮಗೊಳಿಸಿ ಮುಂದೆ ನಡೆಯಬಹುದಾಗಿದ್ದ ದೊಡ್ಡ ದುರಂತವನ್ನು ತಡೆದಿದ್ದಾರೆ.
ತಾಲೂಕಿನ ಹೊನ್ನೆಮರದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು ಎರಡು ಶಾಲಾ ಕೊಠಡಿಗಳನ್ನು ಸ್ವಂತ ಖರ್ಚಿನಿಂದ ನೆಲಸಮಗೊಳಿಸುವ ಮೂಲಕ ಮುಂಜಾಗ್ರತೆ ಮೆರೆದಿದ್ದಾರೆ.
ಈ ಸರ್ಕಾರಿ ಶಾಲೆಯಲ್ಲಿ 1 ರಿಂದ 4ನೇ ತರಗತಿವರೆಗೆ ಒಟ್ಟು 14ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ಒಬ್ಬರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಶಾಲೆಯಲ್ಲಿ ತಲಾ ಎರಡು ಕೊಠಡಿಗಳ ಎರಡು ಕಟ್ಟಡಗಳಿದ್ದು, ಅದರಲ್ಲಿ ಒಂದು ಕಟ್ಟಡ ಶಿಥಿಲವಾಗಿತ್ತು. ಇನ್ನುಳಿದ ಎರಡು ಕೊಠಡಿಗಳಲ್ಲಿ ಒಂದನ್ನು ಬಿಸಿಯೂಟ ತಯಾರಿಕೆಗೆ ಬಳಸಿಕೊಂಡರೆ, ಮತ್ತೂಂದನ್ನು ತರಗತಿಗಳಿಗೆ ಬಳಸಿಕೊಳ್ಳಲಾಗುತ್ತಿದೆ. ದುಸ್ಥಿಯಲ್ಲಿರುವ ಕೊಠಡಿಗಳಿಂದ ಯಾವುದೇ ಸಂದರ್ಭದಲ್ಲಿ ಮಕ್ಕಳಿಗೆ ಅಪಾಯ ಒದಗಬಹುದು ಎಂದು, ಆಕೊಠಡಿಗಳನ್ನು ನೆಲಸಮಗೊಳಿಸುವಂತೆ ಕಳೆದ 13ವರ್ಷಗಳ ಹಿಂದೆಯಿಂದಲೂ ಶಿಕ್ಷಣ ಇಲಾಖೆ ಅಧಿ ಕಾರಿಗಳಿಗೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸದೇ ಇರುವುದರಿಂದ ತಮ್ಮ ಮಕ್ಕಳ ಸುರಕ್ಷತೆಗಾಗಿ ಗ್ರಾಮಸ್ಥರೇ ಜೆಸಿಬಿ ಮೂಲಕ ಕೊಠಡಿಗಳನ್ನು ನೆಲಸಮ ಗೊಳಿಸಿದ್ದಾರೆ.
ಶಿಥಿಲ ಕಟ್ಟಡ-ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಹಿಂದೇಟು: ಶಿಥಿಲಗೊಂಡ ಕಟ್ಟಡವು ಶಾಲೆಯ ಪಕ್ಕದಲ್ಲಿಯೇ ಇದ್ದು ಮಕ್ಕಳು ಆಟವಾಡುವಾಗ ಅಥವಾ ಯಾವುದೇ ಸಂದರ್ಭದಲ್ಲಿ ಬೀಳಬಹುದು ಎಂಬ ಭಯದಲ್ಲೇ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದರು. ಇನ್ನೂಳಿದವರು ಈ ವ್ಯವಸ್ಥೆಯಿಂದ ಬೇಸತ್ತು ಸಾಲಸೂಲ ಮಾಡಿ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರ್ಪಡೆ ಮಾಡಿದ್ದಾರೆ. ಒಟ್ಟಾರೆ ಅನಾಹುತ ತಪ್ಪಿಸಲು ಗ್ರಾಮಸ್ಥರೇ ಮುಂದಾಗಿರುವುದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಶಿಥಿಲಗೊಂಡಿರುವ ಕಟ್ಟಡದಿಂದ ಮಕ್ಕಳಿಗೆ ಯಾವುದೇ ವೇಳೆ ಅನಾಹುತ ಆಗಬಹುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿದರೂ ಕ್ಯಾರೆ ಎಂದಿಲ್ಲ. 13ವರ್ಷಗಳಿಂದಲೂ ಕಟ್ಟಡ ದುರಸ್ಥಿಯಲ್ಲಿದೆ. ಸದ್ಯ ಕಟ್ಟಡದ ಗೊಡೆಗಳು ಯಾವ ಸಮಯದಲ್ಲಾದರೂ ಬೀಳಬಹುದು ಎಂದು ಆ ಕೊಠಡಿಗಳನ್ನು ನಮ್ಮ ಖರ್ಚಿನಿಂದ ನೆಲಸಮಗೊಳಿಸಿದ್ದೇವೆ. ಎಸ್.ಎಸ್. ರವಿ,
ಗ್ರಾಪಂ ಮಾಜಿ ಸದಸ್ಯ.
ಶಾಲೆ ಕಟ್ಟಡದ ದುಸ್ಥಿತಿಯಿಂದ ಶಾಲೆಗೆ ಮಕ್ಕಳನ್ನು ಸೇರಿಸಲು ಪೋಷಕರು ಭಯಭೀತರಾಗಿದ್ದಾರೆ. ಸಕಾರದಿಂದ ಶೈಕ್ಷಣಿಕ ಗುಣಮಟ್ಟ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಂದರೂ ಪ್ರಯೋಜನವಿಲ್ಲ. ಮೊದಲು ಮೂಲಭೂತ ಸೌಲಭ್ಯಗಳ ನಿರ್ಮಾಣ ಮಾಡಬೇಕು. ಆಗ ಮಾತ್ರ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ.
ರುದ್ರೇಶ್,
ತಾಲೂಕು ಎನ್‌ಎಸ್‌ಯುಐ ಸಂಚಾಲಕ
ತಾಲೂಕಿನಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳ ಪಟ್ಟಿಯನ್ನು ದಾವಣಗೆರೆ ಡಿಡಿಪಿಐ ಬಳಿ ಕಳುಹಿಸಿಕೊಡಲಾಗಿದೆ. ಅದರಲ್ಲಿ ಹೊನ್ನೆಮರದಹಳ್ಳಿ ಶಾಲೆ ಕೂಡ ಇದೆ. ಈ ಕುರಿತು ಗ್ರಾಮಸ್ಥರು ಕೂಡ ಗಮನಕ್ಕೆ ತಂದಿದ್ದರು. ಡಿಡಿಪಿಐ ಆದೇಶಕ್ಕಾಗಿ ಕಾಯುತ್ತಿದ್ದೆವು. ಅಷ್ಟರಲ್ಲಿ ಗ್ರಾಮಸ್ಥರೇ ನನ್ನ ಗಮನಕ್ಕೆ ತಂದು ಶಾಲಾ ಕೊಠಡಿಯನ್ನು ನೆಲಸಮಗೊಳಿಸಿದ್ದಾರೆ.
ಮಂಜುನಾಥ್,
ಕ್ಷೇತ್ರ ಶಿಕ್ಷಣಾಧಿಕಾರಿ, ಚನ್ನಗಿರಿ.
ಶಶೀಂದ್ರ ಸಿ.ಎಸ್. ಚನ್ನಗಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.