ಛತ್ರಪತಿ ಶಿವಾಜಿ ಜಯಂತಿ ಆಚರಣೆ
ನೆಲಮಂಗಲ, ದೊಡ್ಡ ಬಳ್ಳಾಪುರಗಳಲ್ಲಿ ಶಿವಾಜಿ ಭವನ ನಿರ್ಮಾಣಕ್ಕೆ ಸಮುದಾಯ ಮುಖಂಡರ ಮನವಿ
Team Udayavani, Feb 20, 2020, 4:20 PM IST
ಹೊಸಕೋಟೆ: ಶಿವಾಜಿ ಮಹಾರಾಜರು ಹೊಂದಿದ್ದ ಹೋರಾಟ ಮನೋಭಾವ, ತೋರಿದ ದೈರ್ಯ, ಶೌರ್ಯ ಯುವಕರಿಗೆ ಸ್ಪೂರ್ತಿಯಾಗಿದೆ ಎಂದು ತಹಶೀಲ್ದಾರ್ ವಿ. ಗೀತಾ ಹೇಳಿದರು.
ಅವರು ನಗರದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಿವಾಜಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಷ್ಟ್ರವನ್ನು ಪರಕೀಯರ ಆಡಳಿತದಿಂದ ಮುಕ್ತಗೊಳಿಸಿ ರಕ್ಷಿಸುವಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾದದಾಗಿದೆ. ಇಂತಹ ಮಹಾನ್ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳದೆ ರಾಷ್ಟ್ರನಾಯಕರಾಗಿ ಧರ್ಮ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿ ತ್ಯಾಗ, ಬಲಿದಾನದ ಪರಿಣಾಮವಾಗಿ ಇಂದು ಸಮಾಜದಲ್ಲಿ ಜನರು ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಎಚ್.ಸಿ.ವೆಂಕೋಬರಾವ್ ಮಾತನಾಡಿ ರಾಷ್ಟ್ರದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಶಿವಾಜಿಯವರ ಶ್ರಮ ಅನಿಸ್ಮರಣೀಯವಾದುದಾಗಿದೆ. ಇಂತಹ ಮಹಾನ್ ವ್ಯಕ್ತಿಯ ಆದರ್ಶಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಗೌರವ ಸಲ್ಲಿಸಿದಂತಾಗಲಿದೆ ಎಂದರು.
ಕರ್ನಾಟಕ ಮರಾಠ ಪರಿಷತ್ತಿನ ಅಧ್ಯಕ್ಷ ವಿ. ವೆಂಕೋಬರಾವ್, ಪದಾಧಿಕಾರಿಗಳಾದ ಬದ್ರಿನಾಥ್, ಎಚ್. ಚಿನ್ನೂರಾವ್, ರಮೇಶ್, ರಾಣೋಜಿರಾವ್, ಈಶ್ವರರಾವ್, ಭುಜಂಗರಾವ್ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.