ವಿಶ್ವಕ್ಕೆ ಸಂದೇಶ ಸಾರಿದ ಜ್ಞಾನಿ ಸರ್ವಜ್ಞ
ಮೌಡ್ಯ-ಜಾತೀಯತೆ ಖಂಡಿಸಿದ್ದ ಕವಿ ಸರ್ವ ಸಮಸ್ಯೆಗೂ ತ್ರಿಪದಿಯಲ್ಲಿ ಪರಿಹಾರ
Team Udayavani, Feb 21, 2020, 10:52 AM IST
ಜೇವರ್ಗಿ: ತ್ರಿಪದಿಗಳ ಮೂಲಕ ಎಲ್ಲರ ಮನ ಮುಟ್ಟುವಂತೆ ವಿಶ್ವ ಸಂದೇಶ ಸಾರಿದ ಸರ್ವಜ್ಞ ಮಹಾ ಜ್ಞಾನಿ ಯಾಗಿದ್ದ ಎಂದು ಹಿಪ್ಪರಗಾ ಎಸ್. ಎನ್. ಗ್ರಾಮದ ಸರ್ಕಾರಿ ಪ್ರೌಢ ಶಾಲೆ ದೈಹಿಕ ಶಿಕ್ಷಕ ಶ್ರೀಮಂತ ಕುಂಬಾರ ಬೇಲೂರ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧ ಕಚೇರಿ ಆವರಣದಲ್ಲಿ ತಾಲೂಕಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸರ್ವಜ್ಞ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಕನ್ನಡದ ಶ್ರೇಷ್ಠ ಕವಿ ಸರ್ವಜ್ಞರ ವಚನಗಳು ಬಸವಣ್ಣನವರ ವಚನಗಳಷ್ಟೇ ಶ್ರೇಷ್ಠ. ಕವಿ ಸರ್ವಜ್ಞ ತಮ್ಮ ವಚನದಲ್ಲಿ ಸರಳವಾಗಿ ಸಮಾಜದ ಅಂಕು-ಡೊಂಕು ತಿದ್ದುವ ಕೆಲಸ ಮಾಡಿದ್ದಾರೆ. ಕೇವಲ ಮೂರು ಸಾಲಿನಲ್ಲಿ ಅರ್ಥಪೂರ್ಣವಾಗಿ ಎಲ್ಲ ವಿಷಯಗಳನ್ನು ತಿಳಿಸಿದ್ದಾರೆ ಎಂದರು.
ಸರ್ವಜ್ಞರ ತತ್ವದಂತೆ ಕುಂಬಾರ ಜನಾಂಗ ಎಲ್ಲರೊಳಗೆ ಒಂದಾಗಿ ಬದುಕಬೇಕು. ಕುಂಬಾರ ಸಮಾಜ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ. ಜಾಗತೀಕರಣದಿಂದಾಗಿ ಕುಂಬಾರರ ಕುಲಕಸುಬು ನಾಶವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ಪಟ್ಟಣದ ಹಳೆ ತಹಶೀಲ್ದಾರ್ ಕಚೇರಿ ಆವರಣದಿಂದ ಸರ್ವಜ್ಞ ಭಾವಚಿತ್ರದ ಮೆರವಣಿಗೆ ಮಿನಿ ವಿಧಾನಸೌಧ ಕಚೇರಿ ವರೆಗೆ ಜರುಗಿತು. ನಂತರ ನಡೆದ ಕಾರ್ಯಕ್ರಮವನ್ನು ತಹಶೀಲ್ದಾರ್ ಸಿದರಾಯ ಭೋಸಗಿ ಉದ್ಘಾಟಿಸಿದರು. ತಾಲೂಕು ಕುಂಬಾರ ಸಮಾಜದ ಅಧ್ಯಕ್ಷ ಶ್ರೀಶೈಲ ಕುಂಬಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಾಜದ ಮುಖಂಡ ಸುಭಾಶ್ಚಂದ್ರ ಕುಂಬಾರ, ಗ್ರೇಡ್-2 ತಹಶೀಲ್ದಾರ್ ರಮೇಶ ಹಾಲು, ತಾ.ಪಂ ಇಒ ವಿಲಾಸರಾಜ, ಸಮಾಜ ಕಲ್ಯಾಣಾಧಿಕಾರಿ ಅಶೋಕ ನಾಯಕ, ತಾಲೂಕು ಅಲ್ಪಸಂಖ್ಯಾತ ಇಲಾಖೆ ಅ ಧಿಕಾರಿ ಶಕುಂತಲಾ, ಸಾಯಬಣ್ಣ ಕಲ್ಯಾಣಕರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.