ಗೃಹರಕ್ಷಕರ ಸೇವೆ ಶ್ಲಾಘನೀಯ
ರಾಷ್ಟ್ರಪತಿಗಳ-ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಸನ್ಮಾನ
Team Udayavani, Feb 21, 2020, 6:12 PM IST
ಬಳ್ಳಾರಿ: ಜಿಲ್ಲೆಯಲ್ಲಿ ಅಲ್ಲದೇ ವಿವಿಧ ಜಿಲ್ಲೆಗಳಲ್ಲಿಯು ಸಹ ಪ್ರವಾಹ ರಕ್ಷಣಾ ಕಾರ್ಯಚರಣೆಯಲ್ಲಿ ಭಾಗವಹಿಸಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಿರುವ ಗೃಹರಕ್ಷಕರ ಸೇವೆ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದರು.
ನಗರದ ಜಿಲ್ಲಾ ಗೃಹರಕ್ಷಕದಳ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಗೃಹರಕ್ಷಕರ ವಾರ್ಷಿಕೋತ್ಸವ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗೃಹರಕ್ಷಕರ ತಂಡ ಕಾಲುವೆ ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಜನರ ಮೃತದೇಹಗಳನ್ನು ಶೋಧನೆ ಮಾಡಿ ಪತ್ತೆ ಹಚ್ಚಿ ಅದರ ವಾರಸುದಾರರಿಗೆ ಒಪ್ಪಿಸುವ ಸೇವೆಯನ್ನು ಮಾಡುತ್ತಿದ್ದಾರೆ. ಇತ್ತೀಚೆಗೆ ಸಿರುಗುಪ್ಪ ತಾಲೂಕಿನಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿದ 6 ಜನ ಕುರಿಗಾಹಿಗಳನ್ನು ಮತ್ತು 600ಕ್ಕೂ ಹೆಚ್ಚು ಕುರಿಗಳನ್ನು ರಕ್ಷಣೆ ಮಾಡುವ ಕಾರ್ಯ ಮಾಡಿದ್ದು, ಚುನಾವಣೆ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿರುವುದನ್ನು ಶ್ಲಾಘಿಸಿದರು. ವಾರ್ಷಿಕೋತ್ಸವ ದಿನಾಚರಣೆ ಅಂಗವಾಗಿ ಅತಿ ಹೆಚ್ಚು ರಕ್ಷಣಾ ಕಾರ್ಯಾಚರಣೆ, ರಕ್ತದಾನ ಶಿಬಿರ, ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಘಟಕದ ಉತ್ತಮ ಅಧಿಕಾರಿ, ಪರಿಸರ ಕಾರ್ಯಕ್ರಮ, ಸಾಮಾಜಿಕ ಕಾರ್ಯಕ್ರಮ, ಚುನಾವಣಾ ಹಾಗೂ ಕಾನೂನು ಸುವ್ಯವಸ್ಥೆ ಕರ್ತವ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕರ ನಿಯೋಜನೆ ಮಾಡಿರುವ ಘಟಕಗಳಿಗೆ ಬಹುಮಾನಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಗೃಹರಕ್ಷಕರಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಗಮನಸಳೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳ ಮತ್ತು ಮುಖ್ಯ ಮಂತ್ರಿಗಳ ಪದಕ ಪುರಸ್ಕೃತರಿಗೆ ಸನ್ಮಾನಿಸಲಾಯಿತು. ಗೃಹರಕ್ಷಕದಳದ ಸಮಾದೇಷ್ಟ ಎಂ.ಎ. ಷಕೀಬ್, ಇಲಾಖೆ ನಿವೃತ್ತ ಅಧಿಕಾರಿಗಳು, ಗೃಹರಕ್ಷಕ ಅಧಿಕಾರಿಗಳು, ಗೃಹರಕ್ಷಕರು ಮತ್ತು ಅವರ ಕುಟುಂಬದ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.