ದೇವರನಾಡಿನ ದುರ್ಯೋಧನ ದೇಗುಲ


Team Udayavani, Feb 22, 2020, 6:04 AM IST

devara

ಮಹಾಭಾರತದಲ್ಲಿ ದುರ್ಯೋಧನನೇ ಬಹುದೊಡ್ಡ ಖಳನಾಯಕ. ದುಷ್ಟ ಕೆಲಸಗಳಿಂದಲೇ ಸುಯೋಧನ ನಮಗೆ ನೆನಪಾಗುತ್ತಾನೆ. ಆದರೆ, ಈ ದುರ್ಯೋಧನನಿಗೂ ಆರಾಧಕರಿ­ದ್ದಾರೆ ಅನ್ನೋದು ಬಹುತೇಕರಿಗೆ ಗೊತ್ತಿರದ ವಿಚಾರ. ನಮ್ಮ ಪಕ್ಕದ “ದೇವರನಾಡು’ ಕೇರಳದಲ್ಲಿ ದುರ್ಯೋಧನನಿಗೇ ಒಂದು ದೇವಾ­ಲಯವಿದೆ. ನಾವು ಕೊಲ್ಲಂ ಜಿಲ್ಲೆಯ ಪೊರುವಾಝಿಗೆ ಹೋಗಿದ್ದಾಗ, ಈ ದೇವಸ್ಥಾನಕ್ಕೆ ಹೋಗಿ, ಒಂದಷ್ಟು ಹೊತ್ತು ಕಳೆದೆವು.

ಪ್ರತಿವರ್ಷ ಮಾರ್ಚ್‌ನಲ್ಲಿ ಇಲ್ಲಿ ಕೌರವೇಶ್ವರನಿಗೆ ಜಾತ್ರೆ ನಡೆಯುತ್ತದೆ. ಗ್ರಾಮದ ಕೆಲವು ಹಿರಿಯರು ಇನ್ನು ಕೆಲವೇ ದಿನಗಳಲ್ಲಿ ನಡೆಯುವ ಜಾತ್ರೆಗೆ ರಥವನ್ನು ಅಲಂಕಾರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದರು. ಕೇರಳದ ಕೊಲ್ಲಂ ಜಿಲ್ಲೆಯಲ್ಲಿರುವ “ಕುರವ’ ಎನ್ನುವ ಸಮುದಾಯದವರು ಮಾತ್ರವೇ, ದುರ್ಯೋಧನನ್ನು ಆರಾಧಿಸುತ್ತಾರಂತೆ. ಇದಕ್ಕೆ ಕಾರಣವೂ ಇದೆ.

ಕುರುಕ್ಷೇತ್ರ ಯುದ್ಧದ ಸಂದರ್ಭದಲ್ಲಿ ದುರ್ಯೋಧನನು ಇಲ್ಲಿ ತನ್ನ ಕೌರವ ಬಳಗದವರೊಂದಿಗೆ ಬಂದಿದ್ದನಂತೆ. ಆಗ ಆತನನ್ನು ಇಲ್ಲಿನ ಒಂದು ಜನಾಂಗ ವಿಶೇಷವಾಗಿ ಸತ್ಕರಿಸಿತ್ತು. ಇದರಿಂದ ಸಂತೃಪ್ತನಾದ ದುರ್ಯೋಧನ, ಭೂದಾನ ಮಾಡಿದ್ದನಂತೆ. ದುರ್ಯೋಧನನಿಂದ ಭೂಮಿ ಪಡೆದ ಸಮುದಾಯವೇ ಈಗ ಕುರವ ಎಂದು ಕರೆಯಲ್ಪಡುವವರಾಗಿದ್ದಾರೆ.

“ದುರ್ಯೋಧನನ ಅಂದು ಕೊಟ್ಟ ಭೂಮಿಯಲ್ಲಿಯೇ ನಾವು ದೇವಸ್ಥಾನ ನಿರ್ಮಿಸಿದ್ದೇವೆ. ಈ ದೇವಸ್ಥಾನದಲ್ಲಿ ಮದುವೆಗಳೂ ಆಗುತ್ತವೆ. ನಮ್ಮ ಮನಸ್ಸಿನ ಬೇಡಿಕೆಗಳನ್ನು ದುರ್ಯೋಧನ ಈಡೇರಿಸುತ್ತಾನೆ’ ಎಂದು ಹೇಳುತ್ತಾರೆ, ಕುರವ ಜನಾಂಗದ ಯುವಕ ಜಗದೀಶ್‌.

* ಪ್ರಹ್ಲಾದ ಜಿ.ಕೆ., ಮೈಸೂರು

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.