ಕೃಷಿ ಲಾಭದಾಯಕವಾಗಿಸಲು ವಿಶೇಷ ಒತ್ತು


Team Udayavani, Feb 22, 2020, 3:00 AM IST

BSY1

ಮೈಸೂರು: ಕೃಷಿ ಹೆಮ್ಮೆಯ, ನೆಮ್ಮದಿಯ ಕೆಲಸ ಎನ್ನುವಂತಾಗಬೇಕಾದರೆ ಸರ್ಕಾರದ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಕೃಷಿಯನ್ನು ಲಾಭದಾಯಕ ಕಸುಬಾಗಿಸಲು ತಮ್ಮ ಸರ್ಕಾರ ವಿಶೇಷ ಪ್ರಯತ್ನ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಕೃಷಿ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತನ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಸಿಕ್ಕರೆ ಕೃಷಿ ಲಾಭದಾಯಕವಾಗಲಿದೆ. ಕೃಷಿ ಕಾರ್ಮಿಕರು, ವ್ಯಾಪಾರಿಗಳು, ಕೃಷಿ ಉದ್ಯಮಿಗಳಲ್ಲಿ ಅಮೂಲಾಗ್ರ ಬದಲಾವಣೆ ತರಬೇಕಾಗಿದೆ. ರಾಜ್ಯದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಯನ್ನು ನಾವು ಕಂಡಿದ್ದೇವೆ. ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು.

ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿಯು ಫ‌ಲವತ್ತತೆ ಕಳೆದುಕೊಳ್ಳುತ್ತಿದ್ದು, ಕೀಟನಾಶಕ ಸಿಂಪಡಣೆಯಿಂದ ಆಹಾರ ಧಾನ್ಯ ವಿಷವಾಗುತ್ತಿದೆ. ಲಾಭದ ಕಾರಣಕ್ಕಾಗಿ ಹಣ್ಣು, ತರಕಾರಿಗಳಿಗೆ ಅನಗತ್ಯ ಔಷಧಿ ಸಿಂಪಡಣೆ ಪದ್ಧತಿ ನಿಲ್ಲಬೇಕು ಎಂದು ತಿಳಿಸಿದರು.

ಮರಳಿ ಹಳ್ಳಿಯೆಡೆಗೆ: ರಾಜ್ಯದ ರೈತರ ಕೃಷಿಗೆ ಪೂರಕವಾಗುವಂತೆ ಜಲಾಶಯದಿಂದ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಬೇಕು. ಇತ್ತೀಚಿನ ಯುವಕರು ವೃದ್ಧರನ್ನು ಹಳ್ಳಿಯಲ್ಲಿ ಬಿಟ್ಟು ಕೃಷಿ ಕಾಯಕ ತೊರೆದು ಪಟ್ಟಣದ ಕಡೆ ಮುಖಮಾಡಿದ್ದಾರೆ. ಅವರು ಮರಳಿ ಹಳ್ಳಿಯೆಡೆಗೆ ಬಂದು ಕೃಷಿಯಲ್ಲಿ ತೊಡಗಿಕೊಳ್ಳುವಂತಾಗಬೇಕು ಎಂದರು.

ಮಿಶ್ರಬೆಳೆ: ಮಿಶ್ರಬೆಳೆ ಪದ್ಧತಿಯು ಹೆಚ್ಚು ಲಾಭದಾಯಕವಿದ್ದು, ಇದರಿಂದ ಕಡಿಮೆ ನೀರು ಬಳಕೆ ಮಾಡಿ, ಹೆಚ್ಚು ಬೆಳೆ ಬೆಳೆಯಬಹುದು. ಇದಕ್ಕೆ ಪೂರಕವಾಗಿ ಸರ್ಕಾರದ ಸಹಕಾರ ಇದೆ ಎಂದು ಹೇಳಿದರು. ಆಯವ್ಯಯದಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡಲಾಗುವುದು. ಕಳಸಾ-ಬಂಡೂರಿ ಜ್ವಲಂತ ಸಮಸ್ಯೆಗೆ ನಮ್ಮ ವಕೀಲರು ಸಮರ್ಪಕ ವಾದ ಮಂಡಿಸಿ ನ್ಯಾಯ ಕೊಡಿಸಿದ್ದಾರೆ. ಈ ಯೋಜನೆಗಳಿಗೆ ಮುಂದಿನ ದಿನಗಳಲ್ಲಿ ಚಾಲನೆ ನೀಡಲಾಗುವುದು ಎಂದರು.

ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್‌ನಲ್ಲಿ ಕೃಷಿಗೆ ಶೇ.9.5 ರಷ್ಟು ಹಣ ಮೀಸಲಿಟ್ಟು, 2.83 ಲಕ್ಷ ಕೋಟಿ ಅನುದಾನವನ್ನು ಕೊಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಬಗೆಗಿನ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ. ಹಿಂದೆ ಕೃಷಿಗೆ ಶೇ.4.5 ರಷ್ಟು ಮಾತ್ರ ಹಣ ನೀಡಲಾಗಿತ್ತು ಎಂದು ವಿವರಿಸಿದರು.

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು, ಆಯವ್ಯಯ ಮಂಡನೆ ವೇಳೆ ಸುಮಾರು 25-30 ಕೃಷಿ ಸಮಸ್ಯೆಗಳನ್ನು ಪ್ರಸ್ತಾಪಿಸಿ, ಕೇಂದ್ರ ಸರ್ಕಾರ ಈ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲಿದೆ ಎಂದು ವಿವರಿಸಿದ್ದಾರೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮಾತನಾಡಿ, ನಾಡಿನ ರೈತರು ಕೃಷಿಯಲ್ಲಿ ಸುಧಾರಣೆ ಕಂಡು ನೆಮ್ಮದಿಯಿಂದ ಬದುಕಬೇಕು. ಯಾವುದೇ ಕಾರಣಕ್ಕೂ ಧೃತಿಗೆಡದೆ ಆತ್ಮಸ್ಥೈರ್ಯದಿಂದ ಬದುಕಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತರು ಹಾಗೂ ಬಡವರಿಗೆ ನೀಡಿರುವ ಕೊಡುಗೆ ಅಪಾರ. ಭೀಕರ ಮಳೆ ಹಾಗೂ ಅದರಿಂದಾದ ಪ್ರವಾಹ ಸಂದರ್ಭದಲ್ಲಿ ದೇಶದ ಯಾವುದೇ ರಾಜ್ಯಗಳು ನೀಡಿರದ ಅನುದಾನವನ್ನು ನೀಡಿ, ಸಂತ್ರಸ್ತರ ನೆಮ್ಮದಿ ಜೀವನ್ಕಕಾಗಿ ಶ್ರಮಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಸಚಿವರಾದ ಬಿ.ಸಿ.ಪಾಟೀಲ್‌, ಕೆ.ಸಿ.ನಾರಾಯಣಗೌಡ, ಶಾಸಕರಾದ ಎಲ್‌.ನಾಗೇಂದ್ರ, ನಿರಂಜನ್‌ ಕುಮಾರ್‌ ,ಉದ್ಯಮಿ ವಿಜಯ ಸಂಕೇಶ್ವರ, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಬಜೆಟ್‌ನಲ್ಲಿ ಕೃಷಿ, ನೀರಾವರಿಗೆ ಆದ್ಯತೆ: ಮಾರ್ಚ್‌ 5ರಂದು ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ಕೃಷಿ ಮತ್ತು ನೀರಾವರಿ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.5ರಂದು ಆಯವ್ಯಯ ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮಾ.3ರೊಳಗೆ ಬಜೆಟ್‌ಗೆ ಅಂತಿಮ ರೂಪ ಸಿಗಲಿದ್ದು, ರೈತಪರವಾದ ಬಜೆಟ್‌ ಮಂಡಿಸಲಾಗುವುದು ಎಂದರು.

ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಳಸಾ-ಬಂಡೂರಿ ನಾಲಾ ಯೋಜನೆಗಳಿಗೆ ಇದ್ದ ಅಡೆತಡೆ ನಿವಾರಣೆ ಆಗಿರುವುದು ಸಂತೋಷದ ಸಂಗತಿ. ಅದಕ್ಕೆ ಹಣ ತೆಗೆದಿಟ್ಟು, ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪ್ರಾರಂಭ ಮಾಡುವುದು ನನ್ನ ಮೊದಲ ಆದ್ಯತೆ. ಆದ್ದರಿಂದ ಈ ಯೋಜನೆಗಳಿಗೆ ಕೂಡಲೇ ಚಾಲನೆ ನೀಡಲಾಗುವುದು ಎಂದು ಹೇಳಿದರು.

ನೆರೆ ಹಾಗೂ ಬರ ಸಂತ್ರಸ್ತರಿಗೆ ಈಗಾಗಲೇ ಶಕ್ತಿ ಮೀರಿ ಪರಿಹಾರ ಕ್ರಮ ಕೈಗೊಂಡಿದ್ದೇವೆ. ಎಲ್ಲಾದರೂ ಲೋಪ ಕಂಡುಬಂದಲ್ಲಿ ಸರಿಪಡಿಸಲಾಗುವುದು ಎಂದರು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅನುದಾನದಲ್ಲಿ ಎಷ್ಟು ಖೋತಾ ಆಗಿದೆ ಎಂಬುದನ್ನು ಲೆಕ್ಕ ಹಾಕುತ್ತಿದ್ದೇವೆ. ಅದನ್ನೆಲ್ಲ ಸರಿದೂಗಿಸಿಕೊಂಡು ಬಜೆಟ್‌ ಸಿದ್ಧಪಡಿಸುತ್ತೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.